ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಯಲ್ಲಿ ಪಕ್ಷದ ಚಿಹ್ನೆ ಬಳಸಿತಾ ಕಾಂಗ್ರೆಸ್? ಚರ್ಚೆಗೆ ಗ್ರಾಸವಾದ ವಿಡಿಯೋ
ಜ್ಯೋತಿ ಯಾತ್ರೆ ವಾಹನದ ಹಿಂದೆ ಎಲ್ಇಡಿ ಸ್ಕ್ರೀನ್ ಹಾಕಲಾಗಿದ್ದು, ಸ್ಕ್ರೀನ್ನಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಚಾರ ಮಾಡಲಾಗುತ್ತಿದೆ. ಯೋಜನೆಗಳ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಕೂಡ ಬಳಕೆ ಮಾಡಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಜಯನಗರ ನ.03: ಮೈಸೂರು ರಾಜ್ಯಕ್ಕೆ ಕರ್ನಾಟಕ (Karnataka) ಎಂದು ನಾಮಕರಣ ಮಾಡಿ 50 ವರ್ಷಗಳಾದವು. ಈ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಕರ್ನಾಕಟ ಸಂಭ್ರಮ-50 (Karnataka Sambrama-50) ಎಂಬ ಘೋಷವಾಖ್ಯದೊಂದಿಗೆ ರಾಜ್ಯಾದ್ಯಂತ ಕರ್ನಾಟಕ ಸಂಭ್ರಮ ಜ್ಯೋತಿ ರಥಯಾತ್ರೆ (Jyoti yatre) ನಡೆಯುತ್ತಿದೆ.
ಈ ಜ್ಯೋತಿಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 2 ರಂದು ಹಂಪಿಯಲ್ಲಿ ಚಾಲನೆ ನೀಡಿದ್ದುರು. ಸರ್ಕಾರದ ಈ ಜ್ಯೋತಿ ಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ವಿಡಿಯೋ ವೈರಲ್ ಆಗಿದೆ.
ಜ್ಯೋತಿ ಯಾತ್ರೆ ವಾಹನದ ಹಿಂದೆ ಎಲ್ಇಡಿ ಸ್ಕ್ರೀನ್ ಹಾಕಲಾಗಿದ್ದು, ಸ್ಕ್ರೀನ್ನಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಚಾರ ಮಾಡಲಾಗುತ್ತಿದೆ. ಯೋಜನೆಗಳ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಕೂಡ ಬಳಕೆ ಮಾಡಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಫೋಟೋ ಜೊತೆಗೆ ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಕೆ ಮಾಡಲಾಗಿದ್ದು, ಚರ್ಚೆಗೆ ಗ್ರಾಸ್ವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ