AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್​ನಲ್ಲಿ ಪಾಸಾದ ಬಳ್ಳಾರಿ ಸೆಂಟ್ರಲ್ ಜೈಲಿನ ಶಿಕ್ಷಾ ಬಂಧಿ

ಶೈಕ್ಷಣಿಕ ಜೀವನದ ಟರ್ನಿಂಗ್​ ಪಾಯಿಂಟ್​ ಆದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಶಾಲೆಗೆ ಹೋಗಿ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ ಪಾಸ್​ ಆದರೆ, ಇಲ್ಲೊಬ್ಬರು ಜೈಲಿನಲ್ಲಿ ಇದ್ದುಕೊಂಡು ಓದಿ ಫಸ್ಟ್ ಕ್ಲಾಸ್​ನಲ್ಲಿ ಪಾಸಾಗಿದ್ದಾರೆ. ಇವರ ಸಾಧನೆಗೆ ಡಿಜಿಪಿ ಅಲೋಕ್ ಕುಮಾರ್​ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್​ನಲ್ಲಿ ಪಾಸಾದ ಬಳ್ಳಾರಿ ಸೆಂಟ್ರಲ್ ಜೈಲಿನ ಶಿಕ್ಷಾ ಬಂಧಿ
ಅಶೋಕ್ ಕುಮಾರ್Image Credit source: tv9 kannada
ವಿನಾಯಕ ಬಡಿಗೇರ್​
| Edited By: |

Updated on: Apr 09, 2026 | 10:59 PM

Share

ಬಳ್ಳಾರಿ, ಏಪ್ರಿಲ್​ 09: ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ (2nd PUC Results) ಗುರುವಾರ ಪ್ರಕಟಗೊಂಡಿದೆ. ಈ ಸಲ ದಾಖಲೆಯ ರಿಸಲ್ಟ್​ ಬಂದಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಹಗಲು, ರಾತ್ರಿ ಕಷ್ಟಪಟ್ಟು ಓದಿ ಪಾಸ್​ ಆದವರು ಫುಲ್ ಖುಷ್ ಆಗಿದ್ದಾರೆ. ಅದರಲ್ಲೂ ವಿಶೇಷ ಎಂಬಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಓರ್ವ ಕೈದಿ 80.1% ಅಂಕಗಳನ್ನು ಗಳಿಸುವ ಮೂಲಕ ಸದ್ಯ ಗಮನ ಸೆಳೆದಿದ್ದಾರೆ.

ಜೈಲಿನ ಪ್ರತ್ಯೇಕ ಸೆಲ್​ನಲ್ಲಿ ಅಭ್ಯಾಸ 

ಶಿಕ್ಷಾಬಂಧಿ ಅಶೋಕ್ ಕುಮಾರ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್​ನಲ್ಲಿ ಪಾಸಾಗಿದ್ದಾರೆ. ಜೈಲಿನ ಪ್ರತ್ಯೇಕ ಸೆಲ್​ನಲ್ಲಿಯೇ ಅಭ್ಯಾಸ ಮಾಡುತ್ತಿದ್ದರು. ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದ ಅಶೋಕ್ ಕುಮಾರ್​ 600ಕ್ಕೆ 481 ಅಂಕ ಪಡೆದುಕೊಂಡಿದ್ದಾರೆ. ಕನ್ನಡ 82, ಇಂಗ್ಲಿಷ್ 69, ಇತಿಹಾಸ 94, ಅರ್ಥಶಾಸ್ತ್ರ 84, ಸಮಾಜಶಾಸ್ತ್ರ 77, ರಾಜ್ಯಶಾಸ್ತ್ರ 75 ಅಂಕಗಳನ್ನು ಪಡೆದುಕೊಂಡಿದ್ದಾರೆ.

ಡಿಜಿಪಿ ಅಲೋಕ್ ಕುಮಾರ್​ ಟ್ವೀಟ್​

ಶಿಕ್ಷಾಬಂಧಿ ಅಶೋಕ್ ಕುಮಾರ್​ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಯಾಗಿದ್ದು, ಹೀಗಾಗಿ ಕಳೆದ 7 ವರ್ಷಗಳಿಂದ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರೂ ಓದುವ ಅಭ್ಯಾಸ ರೂಢಿಸಿಕೊಂಡಿದ್ದರು. ಹೀಗಾಗಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆದು ಇದೀಗ ಫಸ್ಟ್ ಕ್ಲಾಸ್​ನಲ್ಲಿ ಪಾಸಾಗಿದ್ದಾರೆ.

ಪಿಯುಸಿ ಪರೀಕ್ಷೆಯಲ್ಲಿ ಕೈದಿ ಸಾಧನೆ: ಹೃದಯಸ್ಪರ್ಶಿ ಎಂದ ಅಲೋಕ್ ಕುಮಾರ್

ಇನ್ನು ಈ ಬಗ್ಗೆ ಡಿಜಿಪಿ ಅಲೋಕ್ ಕುಮಾರ್​ ಅವರು ತಮ್ಮ ಎಕ್ಸ್​​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೀವಾವಧಿ ಶಿಕ್ಷೆಗೊಳಗಾದ ಕೈದಿಗಳಲ್ಲಿ ಒಬ್ಬರಾದ ಅಶೋಕ್​, ಪಿಯುಸಿ ಪರೀಕ್ಷೆಯಲ್ಲಿ 80.1% ಅಂಕಗಳನ್ನು ಪಡೆದಿರುವುದು ಹೃದಯಸ್ಪರ್ಶಿಯಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಜೈಲು ಬೆಂಗಾವಲಿನೊಂದಿಗೆ ಪರೀಕ್ಷೆಗೆ ಹಾಜರಾಗಿದ್ದರು. ಮುಂದಿನ ಉತ್ತಮ ಭವಿಷ್ಯದ ಬಗ್ಗೆಗಿನ ಅವರ ಭರವಸೆಯನ್ನು ಜೈಲಿನ ಗೋಡೆಗಳು ಇನ್ನೂ ಹುಸಿಗೊಳಿಸಿಲ್ಲ ಎಂಬುವುದನ್ನು ಕಂಡು ಸಂತೋಷವಾಯಿತು ಎಂದು ಬರೆದುಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ