ಕೇಂದ್ರದ ಒಪ್ಪಿಗೆ ನಂತರವೂ ಬಳ್ಳಾರಿ ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ರಾಜ್ಯ ತಡೆ, ಹೆಚ್​​​ಡಿಕೆಗೆ ಹಿನ್ನಡೆ

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸ್ವಾಮಿಮಲೈ ಬ್ಲಾಕಿನ ದೇವದಾರಿ ಹಿಲ್​ 401.57 ಹೆಕ್ಟರ್​​ ಅರಣ್ಯ ಭೂಮಿಯಲ್ಲಿ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ರಾಜ್ಯ ಸರ್ಕಾರ ತಡೆ ಹಿಡಿದಿದೆ. ಇದರಿಂದ ಕೇಂದ್ರ ಉಕ್ಕು ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಹಿನ್ನಡೆಯಾಗಿದೆ.

ಕೇಂದ್ರದ ಒಪ್ಪಿಗೆ ನಂತರವೂ ಬಳ್ಳಾರಿ ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ರಾಜ್ಯ ತಡೆ, ಹೆಚ್​​​ಡಿಕೆಗೆ ಹಿನ್ನಡೆ
ಈಶ್ವರ್​ ಖಂಡ್ರೆ, ಹೆಚ್​ಡಿ ಕುಮಾರಸ್ವಾಮಿ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on:Jun 23, 2024 | 12:17 PM

ಬೆಂಗಳೂರು, ಜೂನ್​ 23: ಬಳ್ಳಾರಿ (Ballari) ಜಿಲ್ಲೆಯ ಸಂಡೂರು (Sandur) ತಾಲೂಕಿನ ಸ್ವಾಮಿಮಲೈ ಬ್ಲಾಕಿನ ದೇವದಾರಿ ಬೆಟ್ಟ 401.57 ಹೆಕ್ಟರ್​​ ಅರಣ್ಯ ಭೂಮಿಯಲ್ಲಿ (Forest Aria) ಕಬ್ಬಿಣದ ಅದಿರು ಗಣಿಗಾರಿಕೆ (Mining) ನಡೆಸದಂತೆ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (ಕೆಐಒಸಿಎಲ್​)ಗೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ತಡೆಗೆ ಕಾರಣ

ಕೆಐಒಸಿಎಲ್ ಈ ಹಿಂದೆ ಕುದುರೆಮುಖ ರಾಷ್ಟ್ರೀಯ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿದ ಸಂದರ್ಭದಲ್ಲಿ ಹಲವು ಲೋಪಗಳನ್ನು ಎಸಗಿದೆ. ಅಲ್ಲದೆ, ಅರಣ್ಯ ಕಾಯ್ದೆಯನ್ನು ಉಲ್ಲಂಘಿಸಿದೆ. ಈ ಕಾರಣಕ್ಕಾಗಿ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ನಿಗದಿತ ಕಾಲಮಿತಿಯೊಳಗೆ ಅರಣ್ಯ ಅಭಿವೃದ್ಧಿ ಸೇರಿದಂತೆ ಇನ್ನಿತರ ಕ್ರಮಗಳನ್ನು ಕೈಗೊಳ್ಳುವಂತೆ ಕೆಐಒಸಿಎಲ್‌ಗೆ ನಿರ್ದೇಶಿಸಿತ್ತು.

ಆದರೆ, ಕೆಐಒಸಿಎಲ್ ನಿರ್ದೇಶನಗಳನ್ನು ಜಾರಿ ಮಾಡುವಲ್ಲಿ ವಿಫಲವಾಗಿದೆ. ಹೀಗಾಗಿ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವವರಿಗೆ ದೇವದಾರಿ ಬೆಟ್ಟ ಪ್ರದೇಶದಲ್ಲಿ ಗಣಿಗಾರಿಕೆಗಾಗಿ ನೀಡಲಿರುವ ಅರಣ್ಯ ಭೂಮಿಯನ್ನು ಕೆಐಒಸಿಎಲ್‌ಗೆ ಹಸ್ತಾಂತರಿಸಬಾರದು ಹಾಗೂ ಅರಣ್ಯ ತೀರುವಳಿಗುತ್ತಿ ಗೆ ಪತ್ರಕ್ಕೆ ಅಧಿಕಾರಿಗಳು ಸಹಿ ಹಾಕದಿರುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ನಿರ್ದೇಶಿಸಿದ್ದಾರೆ.

ಈ ಸಂಬಂಧ ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ ಮಾತನಾಡಿ, ದೇವದಾರಿ ಬೆಟ್ಟ ಪ್ರದೇಶದಲ್ಲಿ ಗಣಿಗಾರಿಕೆಗಾಗಿ 2018 ನಲ್ಲಿ ಕೆಐಓಸಿಎಲ್ ಅವರು ಅರ್ಜಿ ಸಲ್ಲಿಸಿದ್ದರು. ಆದರೆ ಅರಣ್ಯಕ್ಕೆ ಮತ್ತು ಜಲಮೂಲಗಳಿಗೆ ಹಾನಿ ಆಗುತ್ತದೆ ಎಂದು ಕೇಂದ್ರ ಸರ್ಕಾರ ಅನುಮತಿ ನೀಡಲು ನಿರಾಕರಿಸಿತು. ಆದರೆ 2023 ಏಪ್ರಿಲ್​ನಲ್ಲಿ ಕೆಲ ಷರತ್ತುಗಳ ಮೇರೆಗೆ ಮೊದಲ ಹಂತಕ್ಕೆ ಒಪ್ಪಿಗೆ ಸಿಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ದೇವದಾರಿ ಹಿಲ್ಸ್​ನಲ್ಲಿ ಗಣಿಗಾರಿಕೆಗೆ ಸರ್ಕಾರ ಅನುಮತಿ ನಿರಾಕರಣೆ; ಗುತ್ತಿಗೆಗೆ ಸಹಿ ಹಾಕದಂತೆ ಈಶ್ವರ ಖಂಡ್ರೆ ಸೂಚನೆ

ಒಪ್ಪಿಗೆ ಸಿಕ್ಕ ಬಳಿಕ ಗಣಿಗಾರಿಕೆ ಕೆಐಓಸಿಎಲ್ ಆರಂಭಿಸಲು ಮುಂದಾಗಿದ್ದತ್ತು. ಆದರೆ, ಕೆಐಓಸಿಎಲ್ ಈ ಹಿಂದೆ ನಡೆಸಿದ ಹಿಂದೆ ಗಣಿಗಾರಿಕೆ ಮಾಡುವ ಸಂದರ್ಭದಲ್ಲಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪಗಳಿವೆ ಹೀಗಾಗಿ ತಡೆದಿದ್ದೇವೆ ಎಂದು ಹೇಳಿದರು.

ಇದು ರಾಜ್ಯ ಸರ್ಕಾರದ ಸ್ವತ್ತು. ನಮ್ಮ ಅನುಮತಿಯಿಲ್ಲದೆ ಗಣಿಗಾರಿಕೆ ಮಾಡಲು ಬರಲ್ಲ. ಮತ್ತು ನಮ್ಮ ಇಲಾಖೆಯ ಷರತ್ತು ಪೂರೈಸುವವರೆಗೂ ಜಮೀನು‌ ಹಸ್ತಾಂತರಿಸಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದ್ದೇನೆ. ಗಣಿಗಾರಿಕೆಗೆ ಅರಣ್ಯ ಭೂಮಿಯನ್ನು ಹಸ್ತಾಂತರ ಮಾಡಿದ ಮೇಲೆ ಏನು ಮಾಡಲು ಬರುವುದಿಲ್ಲ. ಹೀಗಾಗಿ, ತಡೆ ಹಿಡಿದ್ದೇವೆ ಎಂದು ಮಾಹಿತಿ ನೀಡಿದರು.

ದೇವದಾರಿ ಬೆಟ್ಟ ಪ್ರದೇಶದ ವರ್ಜಿನ್ ಕಾಡಿನಲ್ಲಿ 99 ಸಾವಿರ ಮರಗಳಿವೆ. ಜೀವವೈವಿಧ್ಯಕ್ಕೆ ಧಕ್ಕೆ ಆಗಲಿದೆ ಎಂಬ ಪರಿಸರವಾದಿಗಳ ಅಭಿಪ್ರಾಯವಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:16 pm, Sun, 23 June 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ