ಬಳ್ಳಾರಿ ನಗರದ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಶಿಕ್ಷೆಗೆ ಮಧ್ಯಂತರ ತಡೆ ನೀಡಿದ ಕರ್ನಾಟಕ ಹೈಕೋರ್ಟ್

ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘನೆ ಮಾಡಿದ ಆರೋಪ ಸಂಬಂಧ ಬಳ್ಳಾರಿ ನಗರ ಬಿಜೆಪಿ ಶಾಸಕ ಜಿ.ಸೋಮಶೇಖರ್‌ ರೆಡ್ಡಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಶಿಕ್ಷೆ ಪ್ರಕಟಿಸಿತ್ತು. ಇದೀಗ ಈ ಶಿಕ್ಷೆಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆ ನೀಡಿದೆ.

ಬಳ್ಳಾರಿ ನಗರದ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಶಿಕ್ಷೆಗೆ ಮಧ್ಯಂತರ ತಡೆ ನೀಡಿದ ಕರ್ನಾಟಕ ಹೈಕೋರ್ಟ್
ಬಳ್ಳಾರಿ ಬಿಜೆಪಿ ಶಾಸಕ ಜಿ ಸೋಮಶೇಖರ್ ರೆಡ್ಡಿ (ಎಡಚಿತ್ರ)
Follow us
Rakesh Nayak Manchi
|

Updated on:Apr 13, 2023 | 5:02 PM

ಬೆಂಗಳೂರು: ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘನೆ ಮಾಡಿದ ಆರೋಪ ಸಂಬಂಧ ಬಳ್ಳಾರಿ ನಗರ ಬಿಜೆಪಿ ಶಾಸಕ ಜಿ.ಸೋಮಶೇಖರ್‌ ರೆಡ್ಡಿಗೆ (G Somashekar Reddy) ಮ್ಯಾಜಿಸ್ಟ್ರೇಟ್ ಕೋರ್ಟ್ ಶಿಕ್ಷೆ ಪ್ರಕಟಿಸಿತ್ತು. ಇದೀಗ ಈ ಶಿಕ್ಷೆಗೆ ಹೈಕೋರ್ಟ್ (Karnataka High Court) ಏಕಸದಸ್ಯ ಪೀಠ ಮಧ್ಯಂತರ ತಡೆ ನೀಡಿದೆ. ಲೈಸೆನ್ಸ್ ನವೀಕರಿಸದೇ ರಿವಾಲ್ವರ್ ಇಟ್ಟುಕೊಂಡ ಆರೋಪ ಸಂಬಂಧ ಶಸ್ತ್ರಾಸ್ತ್ರ ಕಾಯ್ದೆ ಅಡಿ ಸೋಮಶೇಖರ್ ರೆಡ್ಡಿ ವಿರುದ್ಧ 2013ರಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಪ್ರಕರಣ ದಾಖಲಿಸಿದ್ದರು. 2009ರ ಡಿ.31ಕ್ಕೆ ರಿವಾಲ್ವರ್ ಲೈಸೆನ್ಸ್ ಅವಧಿ ಮುಕ್ತಾಯವಾಗಿತ್ತು. ಆದರೆ 2011ರ ನ.10ರವರೆಗೆ ನವೀಕರಿಸದೇ ರಿವಾಲ್ವರ್ ಇಟ್ಟುಕೊಂಡಿದ್ದರು ಎಂದು ಆರೋಪಿಸಿ ದೂರು ದಾಖಲಿಸಿದ್ದರು.

ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್, ಪ್ರೊಬೇಷನ್ ಆಫ್ ಅಫೆಂಡರ್ಸ್ ಕಾಯ್ದೆಯಡಿ 50 ಸಾವಿರ ರೂ. ಬಾಂಡ್, ಒಬ್ಬರ ಶ್ಯೂರಿಟಿ ನೀಡಲು ಸೂಚಿಸಿತ್ತು. ಇದೇ ವೇಳೆ ಶಾಂತಿ, ಉತ್ತಮ ನಡತೆ ಮುಂದುವರಿಸಬೇಕು, ಒಂದು ವರ್ಷ ಕೋರ್ಟ್​ ನಿಗಾದಲ್ಲಿರಬೇಕು ಎಂದು ಷರತ್ತು ವಿಧಿಸಿತ್ತು. ಮಾತ್ರವಲ್ಲದೆ, ಕ್ರಿಮಿನಲ್ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ಸೂಚಿಸಿತ್ತು.

ಇದನ್ನೂ ಓದಿ: ಅರಸೀಕೆರೆಯಲ್ಲಿ ಬಿಜೆಪಿಗೆ ಬಿಸಿ ತುಪ್ಪ; ಬಂಡಾಯವೆದ್ದ ಯಡಿಯೂರಪ್ಪ ಸಹೋದರಿಯ ಮೊಮ್ಮಗ ಎನ್​ಆರ್ ಸಂತೋಷ್ ಜೆಡಿಎಸ್​ನತ್ತ

ವಿಚಾರಣೆ ವೇಳೆ ರೆಡ್ಡಿ ಪರ ವಕೀಲರು, ಮನೆಯ ನವೀಕರಣ ಮಾಡುವ ವೇಳೆ ರಿವಾಲ್ವರ್‌ ನವೀಕರಣದ ಕಡತ ಕಳೆದು ಹೋಗಿದೆ. ಆ ಕಾರಣಕ್ಕಾಗಿ ನವೀಕರಣ ಮಾಡಿಸಿರಲಿಲ್ಲ. ಪರವಾನಗಿ ಯಾವಾಗ ಮುಗಿಯುತ್ತದೆ ಎನ್ನುವ ದಿನಾಂಕ ಕೂಡ ನೆನಪಿರಲಿಲ್ಲ ಎಂದು ಹೇಳಿದ್ದರು. ಈ ವೇಳೆ ಕೋರ್ಟ್, ದೋಷಿಯಾಗಿರುವ ವ್ಯಕ್ತಿ ಇರಿಸಿಕೊಂಡಿರುವ ಅಸ್ತ್ರ ಸಾಮಾನ್ಯವಾದುದಲ್ಲ. ನೀವು ಹೇಳಿದ ಕಾರಣ ನಂಬಿಕೆಗೆ ದೂರವಾದದ್ದು. ಒಂದು ವೇಳೆ ಪುಸ್ತಕ ಕಳೆದು ಹೋಗಿದ್ದರೆ ದೂರು ನೀಡುವ ಅವಕಾಶ ಇತ್ತು. ಓರ್ವ ಜನಪ್ರತಿನಿಧಿಯಾಗಿ ಈ ರೀತಿಯ ನಿರ್ಲಕ್ಷ್ಯದ ಧೋರಣೆ ತೋರಿರುವುದು ಅಪಾಯಕಾರಿ ಎಂದು ಶಿಕ್ಷೆ ವಿಧಿಸಿ ನ್ಯಾಯಾಧೀಶೆ ಜೆ.ಪ್ರೀತ್‌ ಆದೇಶದ ಹೊರಡಿಸಿದ್ದರು. ಈ ಆದೇಶ ಪ್ರಶ್ನಿಸಿ ಸೋಮಶೇಖರ್ ರೆಡ್ಡಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಶಿಕ್ಷೆಗೆ ಮಧ್ಯಂತರ ತಡೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Thu, 13 April 23

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?