AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi: ಹಾಯ್, ಹಲೋ ಎನ್ನುವ ಬದಲು ಸ್ವಚ್ಛ ಭಾರತ ಎಂದು ಮಾತು ಶುರು ಮಾಡಿ: ಸಚಿವ ನಾರಾಯಣ ಗೌಡ ಕರೆ

Narayana Gowda: ರಾಜ್ಯ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಹಾಯ್, ಹಲೋ ಬದಲು ಸ್ವಚ್ಛ ಭಾರತ ಎಂದು ಮಾತನ್ನು ಆರಂಭಿಸಿ ಎಂದು ಕರೆ ನೀಡಿದ್ದಾರೆ. ಸ್ವಚ್ಛ ಭಾರತ, ಸ್ವಚ್ಛ ಹಂಪಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Hampi: ಹಾಯ್, ಹಲೋ ಎನ್ನುವ ಬದಲು ಸ್ವಚ್ಛ ಭಾರತ ಎಂದು ಮಾತು ಶುರು ಮಾಡಿ: ಸಚಿವ ನಾರಾಯಣ ಗೌಡ ಕರೆ
ಕಾರ್ಯಕ್ರಮದಲ್ಲಿ ಸಚಿವ ನಾರಾಯಣ ಗೌಡ
TV9 Web
| Edited By: |

Updated on: Oct 28, 2021 | 4:06 PM

Share

ಜಯನಗರ/ಹಂಪಿ: ಹಾಯ್, ಹಲೋ ಎಂದು ಮಾತುಕತೆ ಆರಂಭಿಸುವ ಬದಲು ಸ್ವಚ್ಛ ಭಾರತ ಎಂದು ಮಾತನ್ನು ಆರಂಭಿಸಿ ಎಂದು ಯುವ ಜನತೆ ಹಾಗೂ ವಿದ್ಯಾರ್ಥಿಗಳಿಗೆ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಕರೆ ನೀಡಿದರು. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ನೆಹರು ಯುವ ಕೇಂದ್ರ, ಎನ್‌ಎಸ್ಎಸ್ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಸ್ವಚ್ಛ ಭಾರತ ಹಾಗೂ ಸ್ವಚ್ಛ ಹಂಪಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಂಪಿ ವಿಶ್ವಪ್ರಸಿದ್ಧ ಸ್ಥಳವಾಗಿದ್ದು, ದೇಶವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ದೇಶಕ್ಕೆ ಹೆಸರು ತರಬೇಕು. ನಮ್ಮ ಕಸವನ್ನು ನಾವೇ ಸಂಗ್ರಹಿಸಬೇಕು ಎಂದು ಸಚಿವ ನಾರಾಯಣಗೌಡ ಅವರು ಕರೆ ನೀಡಿದರು.

ಹಿಂದೆ ಊರುಗಳಲ್ಲಿ ಪ್ರತಿ ಸೋಮವಾರದಂದು ಗದ್ದೆಯಲ್ಲಿ, ತೋಟದಲ್ಲಿ ಕೆಲಸ ಮಾಡುತ್ತಿರಲಿಲ್ಲ. ಎಲ್ಲರೂ ಮನೆ ಅಥವಾ ಊರುಗಳನ್ನು ಸ್ವಚ್ವತೆಗೊಳಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಿದ್ದೆವು. ಸ್ವಯಂ ಪ್ರೇರಿತವಾಗಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಬೇಕು. ಶಾಲೆ ಕಾಲೇಜುಗಳು ಸೇರಿದಂತೆ ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಪ್ರತಿಯೊಬ್ಬರಲ್ಲೂ ನಮ್ಮ ದೇಶ ಎಂದು ಕಾಳಜಿ ಬರಬೇಕು. ನನ್ನನ್ನೂ ಸೇರಿದಂತೆ ಪ್ರತಿಯೊಬ್ಬರು ಸುಧಾರಣೆ ಮಾಡಿಕೊಂಡರೆ ಸ್ವಚ್ಛ ಭಾರತ ಅಭಿಯಾನ ಯಶಸ್ವಿ ಆಗಲಿದೆ ಎಂದು ನಾರಾಯಣ ಗೌಡ ಅಭಿಪ್ರಾಯಪಟ್ಟರು.

ಸಿಗರೇಟ್ ಪ್ಯಾಕ್ ಮೇಲೆ ಹಾಕುವಂತೆ ಪ್ಲಾಸ್ಟಿಕ್ ಬಾಟಲ್‌ಗಳ ಮೇಲೂ, ಜಾಗೃತಿ ಸಂದೇಶವನ್ನು ಹಾಕಬೇಕು ಎಂದು ಸಚಿವರು ಒತ್ತಾಯಿಸಿದರು. ದೇಶದ 744 ಜಿಲ್ಲೆಗಳಲ್ಲಿ ಅಕ್ಟೋಬರ್ 1 ರಿಂದ 31 ರವರೆಗೆ ಕ್ಲೀನ್ ಇಂಡಿಯಾ ಕ್ಯಾಂಪೇನ್ ಹಮ್ಮಿಕೊಳ್ಳಲಾಗಿದೆ‌. ಒಂದು ತಿಂಗಳ ಅವಧಿಯಲ್ಲಿ 75 ಲಕ್ಷ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಗುರಿ ಹೊಂದಲಾಗಿದೆ. ಕರ್ನಾಟಕದಲ್ಲಿ ಐದೂವರೆ ಲಕ್ಷ ಕೆಜಿ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಗುರಿ ಹೊಂದಲಾಗಿದ್ದು, ಕರ್ನಾಟಕದಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ನಾರಾಯಣಗೌಡ ತಿಳಿಸಿದ್ದಾರೆ.

Narayana Gowda

‘ಸ್ವಚ್ಛ ಭಾರತ’, ‘ಸ್ವಚ್ಛ ಹಂಪಿ’ ಕಾರ್ಯಕ್ರಮದಲ್ಲಿ ಸಚಿವ ನಾರಾಯಣ ಗೌಡ

ಶನಿವಾರ ಹಾಗೂ ಭಾನುವಾರದಂದು ಸಾವಿರಾರು ಪ್ರವಾಸಿಗರು ಹಂಪಿಗೆ ಬರುತ್ತಾರೆ. ಹಾಗಾಗಿ, ಪ್ರತಿ ಶುಕ್ರವಾರ ಹಂಪಿಯಲ್ಲಿ ವಿಶೇಷವಾಗಿ ಸ್ವಚ್ಛತಾ ಅಭಿಯಾನ ಕೈಗೊಳ್ಳುತ್ತೇವೆ ಎಂದು ಉಪ ವಿಭಾಗಧಿಕಾರಿ ಸಿದ್ದರಾಮೇಶ್ವರ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿ ಪ್ರಕಾಶ್ ವೈದ್ಯ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ:

ರಸ್ತೆ ಗುಂಡಿ ಹೆಸರಿನಲ್ಲಿ ಕೋಟ್ಯಂತರ ಹಣ ಪೋಲು: ರಾಮಲಿಂಗಾರೆಡ್ಡಿ ಆರೋಪ

ನವೆಂಬರ್ 1ರಿಂದ ಅನಕ್ಷರಸ್ಥ ಖೈದಿಗಳಿಗೆ ಶಿಕ್ಷಣ; ಜೈಲಿನೊಳಗಿನ ಅಕ್ಷರಸ್ಥರಿಂದಲೇ ಪಾಠ: ಗೃಹ ಸಚಿವ ಆರಗ ಜ್ಞಾನೇಂದ್ರ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​