ಬಳ್ಳಾರಿ, ಏ.28: ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು(Kurugodu) ತಾಲೂಕಿನ ಏಳುಬೆಂಚಿ ಗ್ರಾಮದಲ್ಲಿ ನಡೆದಿದೆ. ಭಾಗ್ಯಮ್ಮ(44) ಮತ್ತು ಮಾರೆಮ್ಮ(45) ಮೃತ ರ್ದುದೈವಿಗಳು. ಇನ್ನು 50ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಬಳ್ಳಾರಿಯ ಟ್ರಾಮಾಕೇರ್ ಸೆಂಟರ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ನಡೆದಿದೆ. ಇಂದು ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ ರಥೋತ್ಸವದ ವೇಳೆ ದುರ್ಘಟನೆ ನಡೆದಿದೆ. ಜಾತ್ರೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದು, ಜಾತ್ರೆಯಲ್ಲಿನ ನೂಕು ನುಗ್ಗಲಿನಲ್ಲಿ ರಥದ ಚಕ್ರಕ್ಕೆ ಸಿಲುಕಿದ್ದಾರೆ. ಇನ್ನು ತೀವ್ರವಾಗಿ ಗಾಯಗೊಂಡ ಓರ್ವ ವ್ಯಕ್ತಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು,
ಮೃತಪಟ್ಟವರ ಹಾಗೂ ಗಾಯಾಳು ಹೆಸರು, ವಿಳಾಸ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲೇ ಪೊಲೀಸರು ಬೀಡು ಬಿಟ್ಟಿದ್ದಾರೆ.
ಇದನ್ನೂ ಓದಿ:ನೀವು ಧರಿಸುವ ಬಟ್ಟೆಯ ಬಣ್ಣ ರಸ್ತೆ ಅಪಘಾತಕ್ಕೆ ಕಾರಣವಾಗಬಹುದು; ವಿಡಿಯೋ ಇಲ್ಲಿದೆ ನೋಡಿ
ಕೋಲಾರ: ಬಾರ್ ಕ್ಯಾಶಿಯರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಕೋಲಾರ ನಗರದ ಬಂಗಾರಪೇಟೆ ವೃತ್ತದಲ್ಲಿನ ಸಾಮ್ರಾಟ್ ಅಶೋಕ ಬಾರ್ನಲ್ಲಿ ನಡೆದಿದೆ. ಕ್ಯಾಶಿಯರ್ ಶೇಷಗಿರಿ, ಶಣ್ಮುಖ ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ. ಕುಡಿದ ಗಲಾಟೆ ಮಾಡುತ್ತಿದ್ದವರನ್ನು ಪ್ರಶ್ನೆ ಮಾಡಿದ್ದಕ್ಕೆ ಮೂರು ಜನರ ಗುಂಪಿನಿಂದ ಈ ಕೃತ್ಯ ಎಸಗಿದ್ದಾರೆ. ಗಾಯಾಳುಗಳನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:59 pm, Sun, 28 April 24