AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಸ್ಪರ ಪ್ರೀತಿ: ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಎಸ್ಕೇಪ್

ಲವ್​ ಜಿಹಾದ್​ಯಿಂದ ಹಿಂದೂ ಹೆಣ್ಣುಮಕ್ಕಳನ್ನು ರಕ್ಷಿಸಲು ಇತ್ತ ಶ್ರೀರಾಮ ಸೇನೆ ಸಹಾಯವಾಣಿಯನ್ನು ಇಂದು(ಮೇ.29) ಆರಂಭಿಸಿದೆ. ಇದರ ಬೆನ್ನಲ್ಲೇ ಇದೀಗ ಬಳ್ಳಾರಿ(Ballari) ಜಿಲ್ಲೆಯ ಸಿರಗುಪ್ಪ ಪಟ್ಟಣ ವ್ಯಾಪ್ತಿಯಲ್ಲಿ ಪರಸ್ಪರ ಪ್ರೀತಿಸಿ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಓಡಿಹೋದ ಘಟನೆ ಬೆಳಕಿಗೆ ಬಂದಿದೆ.

ಪರಸ್ಪರ ಪ್ರೀತಿ: ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಎಸ್ಕೇಪ್
ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಎಸ್ಕೇಪ್
ವಿನಾಯಕ ಬಡಿಗೇರ್​
| Edited By: |

Updated on:May 29, 2024 | 4:08 PM

Share

ಬಳ್ಳಾರಿ, ಮೇ.29: ಅಪ್ರಾಪ್ತ ಹಿಂದೂ(Hindu) ಯುವಕ, ಮುಸ್ಲಿಂ(Muslim) ಯುವತಿ ಪ್ರೀತಿಸಿ ಓಡಿಹೋದ ಘಟನೆ ಬಳ್ಳಾರಿ(Ballari) ಜಿಲ್ಲೆಯ ಸಿರಗುಪ್ಪ ಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಅಪ್ರಾಪ್ತರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇಬ್ಬರ ಪ್ರೀತಿ ವಿಷಯ ಇಬ್ಬರು ಮನೆಯಲ್ಲಿ ಗೊತ್ತಾಗುತ್ತಿದಂತೆ 16 ವರ್ಷದ ಮುಸ್ಲಿಂ ಯುವತಿ ಮತ್ತು 20 ವರ್ಷದ ಹಿಂದೂ ಯುವಕ ಹದಿನೈದು ದಿನಗಳ ಹಿಂದೆಯೇ ಮನೆಯಿಂದ ಎಸ್ಕೇಪ್ ಆಗಿದ್ದಾರೆ.

ಯುವಕನ ವಿರುದ್ಧ ಪ್ರಕರಣ ದಾಖಲು

ಹಿಂದೂ ಯುವಕ ಪರಮೇಶ ಹಾಗೂ ಮುಸ್ಲಿಂ ಯುವತಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿ ವಿಚಾರ ಮನೆಯಲ್ಲಿ ಗೊತ್ತಾಗುತ್ತಿದಂತೆ ನಾಪತ್ತೆ ಆಗಿದ್ದಾರೆ. ಈ ಕುರಿತು ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಯುವಕ ಪರಮೇಶ ವಿರುದ್ಧ ಯುವತಿ ಕಡೆಯವರು ಪ್ರಕರಣ ದಾಖಲಿಸಿದ್ದು, ಯುವತಿಯನ್ನ ಹುಡುಕಿಕೊಡುವಂತೆ ಪೋಷಕರ ಒತ್ತಾಯ ಮಾಡುತ್ತಿದ್ದಾರೆ.

ಇದನ್ನೂ ಓದಿ:ಹಿಂದೂ ಬಾಲಕಿ ಜೊತೆ ಅನ್ಯ ಧರ್ಮಿಯ ಯುವಕ ಪರಾರಿ: ಲವ್​ ಜಿಹಾದ್​​ ಆರೋಪ

ಲವ್ ಜಿಹಾದ್ ಸದ್ದಿನ ಮಧ್ಯೆಯೇ ಶ್ರೀರಾಮ ಸೇನೆ ಸಹಾಯವಾಣಿ ಆರಂಭ

ಮಂಗಳೂರು: ಕಾಸರಗೋಡಿನಲ್ಲಿ ಲವ್ ಜಿಹಾದ್ ಸದ್ದಿನ ಮಧ್ಯೆಯೇ ಶ್ರೀರಾಮ ಸೇನೆ ಸಹಾಯವಾಣಿ ಆರಂಭಿಸಿದೆ. ಲವ್ ಜಿಹಾದ್ ಮಟ್ಟ ಹಾಕಲು ಶ್ರೀರಾಮಸೇನೆ ಸಂಘಟನೆ ಹೊಸದೊಂದು ಹೆಜ್ಜೆ ಇಟ್ಟಿದೆ. ಇದು ಮಂಗಳೂರು ಸೇರಿದಂತೆ ಬೆಂಗಳೂರು, ಹುಬ್ಬಳ್ಳಿ, ಬಾಗಲಕೋಟೆ, ಕಲಬುರಗಿ ಮತ್ತು ದಾವಣಗೆರೆ ಸೇರಿ ರಾಜ್ಯದ ಆರು ಕಡೆ ಕೇಂದ್ರ ವಾಗಿರಿಸಿ ಕಾರ್ಯಾಚರಣೆ ನಡೆಸಲಿದ್ದು, ಸಹಾಯವಾಣಿಗೆ ಕರೆ ಮಾಡಿದವರ ಹೆಸರನ್ನು ಗೌಪ್ಯವಾಗಿರಿಸಲು ನಿರ್ಧರಿಸಿದೆ.

ಲವ್‌ ಜಿಹಾದ್‌ ಜಾಲದಲ್ಲಿ ಸಿಕ್ಕಿ ಬೀಳುವ ಯುವತಿಯರನ್ನು ಜಾಲದಿಂದ ಹೊರತರಲು ಈ ಮೂಲಕ ಪ್ರಯತ್ನಿಸಲಾಗುತ್ತಿದೆ. ಆಯಾ ಜಿಲ್ಲೆಗಳಲ್ಲಿ ವಕೀಲರು, ಕೌನ್ಸೆಲಿಂಗ್ ತಜ್ಞರು,ನಿವೃತ್ತ ಪೊಲೀಸ್ ಅಧಿಕಾರಿಗಳಿರುವ ತಂಡದಿಂದ ಕಾರ್ಯ ನಿರ್ವಹಣೆ ಮಾಡಲಿದ್ದು, ಕಾನೂನು ಬದ್ದವಾಗಿ, ಸುವ್ಯವಸ್ಥಿತವಾಗಿ ಮಾಡಲು ಯೋಜನೆ ರೂಪಿಸಲಾಗಿದೆ. ಹೆಲ್ಪ್ ಲೈನ್ ನಂಬರ್ ಹೀಗಿದ್ದು, 9090443444 ಸಂಖ್ಯೆಯ ಸಹಾಯವಾಣಿಗೆ ಶ್ರೀರಾಮ ಸೇನೆ ಅಧಿಕೃತ ಚಾಲನೆ ನೀಡಿದೆ. ದಿನದ 24 ಗಂಟೆಯೂ ಲವ್ ಜಿಹಾದ್ ಹೆಲ್ಪ್ ಲೈನ್ ಕಾರ್ಯ ನಿರ್ವಹಿಸಲಿದೆ.

ರಾಜ್ಯದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Wed, 29 May 24

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!