ಬಳ್ಳಾರಿ ಬಳಿ ಚಿರತೆ ದಾಳಿಗೆ 13 ಕುರಿಗಳು ಬಲಿ; ಚಿರತೆ ಸೆರೆಗೆ ಗ್ರಾಮಸ್ಥರ ಆಗ್ರಹ

ಬಳ್ಳಾರಿ ತಾಲೂಕಿನ ಸಂಜೀವರಾಯನಕೋಟೆ ಗ್ರಾಮದಲ್ಲಿ ಚಿರತೆ ದಾಳಿಗೆ 13 ಕುರಿಗಳು ಬಲಿಯಾಗಿವೆ. ಸದ್ಯ ಚಿರತೆ ಸೆರೆ ಹಿಡಿಯುವಂತೆ ಸಂಜೀವರಾಯನಕೋಟೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬಳ್ಳಾರಿ ಬಳಿ ಚಿರತೆ ದಾಳಿಗೆ 13 ಕುರಿಗಳು ಬಲಿ; ಚಿರತೆ ಸೆರೆಗೆ ಗ್ರಾಮಸ್ಥರ ಆಗ್ರಹ
Leopard Attack
Follow us
TV9 Web
| Updated By: ಆಯೇಷಾ ಬಾನು

Updated on:Feb 22, 2023 | 1:02 PM

ಬಳ್ಳಾರಿ: ಮೈಸೂರು, ಬೆಂಗಳೂರು ಆದ್ಮೇಲೆ ಇದೀಗ ಬಳ್ಳಾರಿಯಲ್ಲೂ ಚಿರತೆ ಕಾಟ ಹೆಚ್ಚಾಗಿದೆ. ಬಳ್ಳಾರಿ ತಾಲೂಕಿನ ಸಂಜೀವರಾಯನಕೋಟೆ ಗ್ರಾಮದಲ್ಲಿ ಚಿರತೆ ದಾಳಿಗೆ 13 ಕುರಿಗಳು ಬಲಿಯಾಗಿವೆ. ನಿನ್ನೆ(ಫೆ.21) ರಾತ್ರಿ ಮಾರುತಿ ಎಂಬುವರಿಗೆ ಸೇರಿದ ಕುರಿ‌ಗಳ ಮೇಲೆ ಚಿರತೆ ದಾಳಿ ನಡೆಸಿದೆ. ಸದ್ಯ ಚಿರತೆ ಸೆರೆ ಹಿಡಿಯುವಂತೆ ಸಂಜೀವರಾಯನಕೋಟೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಯಲಹಂಕ ವ್ಯಾಪ್ತಿಯ ದಾಸನಪುರದಲ್ಲಿ ಚಿರತೆ ದಾಳಿಗೆ ಕರು ಬಲಿ

ಬೆಂಗಳೂರು: ನಗರದಲ್ಲಿ ಕಳೆದು ನಾಲ್ಕೈದು ತಿಂಗಳಿಂದ ನಗರದ ಒಂದಲ್ಲ, ಒಂದು ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ಜ್ಞಾನಭಾರತಿ, ಯಶವಂತಪುರ, ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿದೆ. ಇದೀಗ, ಮತ್ತೆ ಯಲಹಂಕ ವಿಧಾನಸಭಾ ಕ್ಷೇತ್ರದ ದಾಸನಪುರ ಪಂಚಾಯಿತಿ ವ್ಯಾಪ್ತಿಯಲ್ಲಿ ಚಿರತೆ (Leopard), ಕರು ಒಂದನ್ನು ತಿಂದಿರುವ ಘಟನೆ ಭಾನುವಾರ (ಫೆ.19)ರ ರಾತ್ರಿ ನಡೆದಿದೆ. ಐದು ದಿನಗಳ ಹಿಂದಷ್ಟೇ ಇದೇ ಊರಿನ ಪಕ್ಕದ ರಾಮಾಂಜನೇಯ ಲೇಔಟ್​ನಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದವು. ಇದಾದ ನಂತರ ಈಗ ಚಿರತೆ ಕರು ಒಂದನ್ನು ಅರ್ಧ ತಿಂದಿದೆ. ಇದು ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದ್ದು, ಹೊರಗಡೆ ಓಡಾಡಲು ಭಯ ಪಡುತ್ತಿದ್ದಾರೆ. ಸದ್ಯ ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಇಟ್ಟಿದ್ದು, ಬೋನ್ ಒಳಗೆ ಮೇಕೆ ಮರಿ ಇಟ್ಟು ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: ಮಂಡ್ಯ: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ; ಖಾಸಗಿ ಆಸ್ಪತ್ರೆಗೆ ದಾಖಲು

ನಾಯಿ ಕೊಂದ ಚಿರತೆ, ಆಚೆ ಹೆಜ್ಜೆ ಇಡಲೂ ಜನರಿಗೆ ಆತಂಕ

ಕಲೆ ದಿನಗಳ ಹಿಂದೆ ಚಿರತೆ ಹನುಮಂತಪ್ಪ ಅನ್ನೋರ ಜಮೀನಿನ ಬಳಿ ನಾಯಿ ತಿಂದು ಕೆಲ ದೇಹದ ಭಾಗವನ್ನು ಬಿಟ್ಟುಹೋಗಿರುವ ಘಟನೆ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಗೊಂಗಡಿಪುರದಲ್ಲಿ ನಡೆದಿದೆ. ನಾಯಿ ಸತ್ತಿರುವ ಜಾಗದಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿತ್ತು. ಚಿರತೆ ಜೊತೆ ಎರಡು ಮರಿಗಳನ್ನೂ ಸ್ಥಳೀಯರು ನೋಡಿದ್ದು, ಆತಂಕಕ್ಕೆ ತುತ್ತಾಗಿದ್ದರು. ಇದರಿಂದ ಸಂಜೆ ಜನರು ಮನೆಯಿಂದ ಹೊರ ಬರಲು ಭಯ ಪಡುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:57 pm, Wed, 22 February 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್