5 ಬಾಣಂತಿಯರ ಸಾವು: ಬಿಮ್ಸ್​ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. 25ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಹೆರಿಗೆ ವಾರ್ಡ್, ಐಸಿಯು ಮತ್ತು ಔಷಧಿ ದಾಸ್ತಾನು ಉಗ್ರಾಣಗಳನ್ನು ಪರಿಶೀಲಿಸುತ್ತಿದೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಈ ತನಿಖೆ ನಡೆಯುತ್ತಿದೆ.

5 ಬಾಣಂತಿಯರ ಸಾವು: ಬಿಮ್ಸ್​ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ
ಲೋಕಾಯುಕ್ತ, ಬಿಮ್ಸ್​​
Updated By: ವಿವೇಕ ಬಿರಾದಾರ

Updated on: Dec 07, 2024 | 11:52 AM

ಬಳ್ಳಾರಿ, ಡಿಸೆಂಬರ್​ 07: ಐವರು ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾಸ್ಪತ್ರೆಗೆ (BIMS) ಲೋಕಾಯುಕ್ತ (Lokayukta) ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸುಮಾರು 25 ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಗಳ ತಂಡ ಬಿಮ್ಸ್​ ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್​, ಐಸಿಯು, ಔಷಧಿ ದಾಸ್ತಾನು ಉಗ್ರಾಣದಲ್ಲಿ ಪರಿಶೀಲನೆ ನಡೆಸುತ್ತಿದೆ. ಲೋಕಾಯುಕ್ತ ಎಸ್​ಪಿ ಸಿದ್ದರಾಜು ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.

ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿ ಜಿಲ್ಲಾಸ್ಪತ್ರೆಯ ಔಷಧ ವಿಭಾಗದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. IV ಹಾಗೂ RL ಪ್ಲೂಯಿಡ್ ಔಷಧಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಹಾಗೇ ಬಾಣಂತಿಯರ ಅಸ್ವಸ್ಥರಾಗಲು ಕಾರಣವೇನು ಎಂಬುವುದರ ಬಗ್ಗೆ ನಾಲ್ವರು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.

ಲೋಕಾಯುಕ್ತಕ್ಕೆ ದೂರು ನೀಡಿದ್ದ ಬಿಜೆಪಿ

ಬಿಮ್ಸ್​​ ಆಸ್ಪತ್ರೆಯಲ್ಲಿ ಒಂದು ತಿಂಗಳ ಅಂತರದಲ್ಲಿ ಐವರು ಬಾಣಂತಿಯರು ಮೃತಪಟ್ಟಿದನ್ನು ಕರ್ನಾಟಕ ಬಿಜೆಪಿ ವಿಷಾಧ ವ್ಯಕ್ತಪಡಿಸಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಹರಿಹಾಯ್ದಿದೆ. ಜೊತೆಗೆ ಬಿಜೆಪಿಯ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಸಿಕೆ ರಾಮಮೂರ್ತಿ ಮತ್ತು ಎಂಎಲ್​​ಸಿ ರವಿಕುಮಾರ್​ ಒಳಗೊಂಡ ನಿಯೋಗ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿತ್ತು.

ಇದನ್ನೂ ಓದಿ: ಬಿಮ್ಸ್​ನಲ್ಲಿ 5 ಬಾಣಂತಿಯರ ಸಾವು ಪ್ರಕರಣ: ಸ್ಫೋಟಕ ಅಂಶ ಬಯಲು, ಪರಿಹಾರ ಘೋಷಿಸಿದ ಸರ್ಕಾರ

ಮೃತ ಬಾಣಂತಿಯರ ಕುಟುಂಬಕ್ಕೆ ಪರಿಹಾರ

ಪ್ರಕರಣ ಸಂಬಂಧ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಅಲ್ಲಿ ಏನೆಲ್ಲಾ ನ್ಯೂನತೆಗಳಾಗಿವೆ ಅಂತ ನಾವು ತನಿಖೆ ಮಾಡುತ್ತಿದ್ದೇವೆ. ನಮಗೆ ಗೊತ್ತಾಗದೇ ಇನ್ನೆಷ್ಟು ಬಾಣಂತಿಯರು ಮೃತಪಟ್ಟಿದ್ದಾರೆ ಗೊತ್ತಿಲ್ಲ. ಔಷಧಿ ತಯಾರಿಸಿದ ಕಂಪನಿ ಮೇಲೆ ಕ್ರಮ ಕೈಗೊಳ್ಳುತ್ತಿದ್ದೇವೆ. ಮೃತ ಬಾಣಂತಿಯರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ್ದೇವೆ. ಇನ್ಮುಂದೆ ಇಂತಹ ಘಟನೆಗಳು ಆಗದಂತೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:36 am, Sat, 7 December 24