AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾದಿಂದ ಭಾರೀ ನೀರು ಬಿಡುಗಡೆ: ಕಂಪ್ಲಿಯ ಕೋಟೆ ಪ್ರದೇಶ ಸಂಪೂರ್ಣ ಜಲಾವೃತ, ಪ್ರಾಣವನ್ನೂ ಲೆಕ್ಕಿಸದೆ ತೆಪ್ಪದಲ್ಲಿ ರೈತರ ದುಸ್ಸಾಹಸ

ತುಂಗಭದ್ರಾ ನದಿ ನೀರು ಉಕ್ಕಿ ಹರಿಯುತ್ತಿದ್ದು ನದಿ‌ ನೀರಿನಲ್ಲಿ ರೈತರು ದುಸ್ಸಾಹಸ ಮೆರೆಯುತ್ತಿದ್ದಾರೆ. ಪ್ರಾಣ ಭಯವನ್ನೂ ಲೆಕ್ಕಿಸದೇ ತೆಪ್ಪದ ಮೂಲಕ ನದಿ ದಾಟಿ ಜಮೀನಿಗೆ ತೆರಳುತ್ತಿದ್ದಾರೆ.

ತುಂಗಭದ್ರಾದಿಂದ ಭಾರೀ ನೀರು ಬಿಡುಗಡೆ: ಕಂಪ್ಲಿಯ ಕೋಟೆ ಪ್ರದೇಶ ಸಂಪೂರ್ಣ ಜಲಾವೃತ, ಪ್ರಾಣವನ್ನೂ ಲೆಕ್ಕಿಸದೆ ತೆಪ್ಪದಲ್ಲಿ ರೈತರ ದುಸ್ಸಾಹಸ
ಪ್ರಾಣವನ್ನೂ ಲೆಕ್ಕಿಸದೆ ತೆಪ್ಪದಲ್ಲಿ ಓಡಾಡುತ್ತಿರುವ ಯುವಕರು
TV9 Web
| Updated By: ಆಯೇಷಾ ಬಾನು|

Updated on: Jul 18, 2022 | 4:15 PM

Share

ಬಳ್ಳಾರಿ: ರಾಜ್ಯದಲ್ಲಿ ಭಾರೀ ಪ್ರಮಾಣದ ದಾಖಲೆ ಮಟ್ಟದಲ್ಲಿ ಮಳೆ(Karnataka Rains) ಸುರಿಯುತ್ತಿದೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಗಳು ಕೆರೆಯಂತಾಗಿವೆ. ಯಾವ ಕ್ಷಣದಲ್ಲಿ ಮನೆ ಧರೆಗೆ ಉರುಳುತ್ತೋ, ಯಾವ ಗುಡ್ಡ ಕುಸಿಯುತ್ತೋ ಎಂಬ ಆತಂಕ ಮಲೆನಾಡಿನ ಜನರನ್ನು ಕಾಡುತ್ತಿದೆ. ಇದರ ನಡುವೆ ಬಳ್ಳಾರಿಯಲ್ಲಿ ತುಂಗಭದ್ರಾ ಜಲಾಶಯದಿಂದ ನದಿಗೆ ಒಂದೂವರೆ ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹಿನ್ನಲೆ ಕಂಪ್ಲಿ ಸೇತುವೆ ಮುಳುಗಡೆಯಾಗಿದೆ. ಹೀಗಾಗಿ ಕಂಪ್ಲಿಯ ಕೋಟೆ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ.

ಕೋಟೆ ಆಂಜನೇಯ ಸ್ವಾಮೀ ದೇವಸ್ಥಾನದೊಳಗೆ ನೀರು ನುಗ್ಗಿದೆ. ಆಂಜನೇಯ ಸ್ವಾಮಿ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ಕೋಟೆ ಪ್ರದೇಶದ ಸುತ್ತಮುತ್ತಲಿನ ಮೀನುಗಾರರ ಮನೆಗಳೆಲ್ಲಾ ನೀರಿನಲ್ಲಿ ಮುಳುಗಿವೆ. ಕೋಟೆ ಪ್ರದೇಶದ ಸುತ್ತಮುತ್ತಲಿನ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಕೋಟೆ ಪ್ರದೇಶ ಜಲಾವೃತವಾದ ಕಾರಣ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ದಿನದಿಂದ ದಿನಕ್ಕೆ ತುಂಗಭದ್ರಾ ನದಿ ನೀರಿನ ಪ್ರವಾಹ ಹೆಚ್ಚುತ್ತಿದೆ. bly flood

ತುಂಗಭದ್ರಾ ನದಿ‌ ನೀರಿನಲ್ಲಿ ರೈತರ ದುಸ್ಸಾಹಸ

ಇನ್ನು ತುಂಗಭದ್ರಾ ನದಿ ನೀರು ಉಕ್ಕಿ ಹರಿಯುತ್ತಿದ್ದು ನದಿ‌ ನೀರಿನಲ್ಲಿ ರೈತರು ದುಸ್ಸಾಹಸ ಮೆರೆಯುತ್ತಿದ್ದಾರೆ. ಪ್ರಾಣ ಭಯವನ್ನೂ ಲೆಕ್ಕಿಸದೇ ತೆಪ್ಪದ ಮೂಲಕ ನದಿ ದಾಟಿ ಜಮೀನಿಗೆ ತೆರಳುತ್ತಿದ್ದಾರೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪದ ನಿಟ್ಟೂರು ಗ್ರಾಮದಲ್ಲಿ ಇಂತಹ ದೃಶ್ಯಗಳು ಕಣ್ಣಿಗೆ ಬಿದ್ದಿವೆ. ನಿಟ್ಟೂರು ಗ್ರಾಮಸ್ಥರು ರಭಸವಾಗಿ ಹರಿಯುತ್ತಿರುವ ನದಿ ನೀರನ್ನು ದಾಟುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಅಪಾಯವನ್ನು ಲೆಕ್ಕಿಸದೆ ಒಂದೇ ತೆಪ್ಪದಲ್ಲಿ ನಾಲ್ಕೈದು ಜನರು ಪ್ರಯಾಣ ಮಾಡುತ್ತಿದ್ದಾರೆ. ತುಂಗಭದ್ರಾ ಜಲಾಶಯದಿಂದ ನದಿಗೆ ಒಂದೂವರೆ ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು ನದಿಗೆ ಜನ ಇಳಿಯದಂತೆ ಈಗಾಗಲೇ ಮೂರು ಬಾರಿ TB Bord ಎಚ್ಚರಿಕೆ ಕೊಟ್ಟಿದೆ. ಆದ್ರೆ ಇದಕ್ಕೇ ತಲೆ ಕೆಡಿಸಿಕೊಳ್ಳದ ರೈತರು ನಡುಗಡ್ಡೆ ಜಮೀನುಗಳಿಗೆ ತೆಪ್ಪದಲ್ಲಿ ತೆರಳುತ್ತಿದ್ದಾರೆ. ಸಿರುಗುಪ್ಪ ಅಧಿಕಾರಿಗಳ ನಿರ್ಲಕ್ಷ್ಯ ಇದೀಗ ಜನರಿಗೆ ಪ್ರಾಣ ಭೀತಿ ತಂದಿದೆ.

bly flood

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?