AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸಂಡೂರಿನಲ್ಲಿ ಗಣಿ ವಿಸ್ತರಣೆ ಆತಂಕ: ಸುಪ್ರೀಂ ಕೋರ್ಟ್ ಅದೇಶ ಮೀರಿ ಹೆಚ್ಚುವರಿ ಗಣಿಗಾರಿಕೆಗೆ ನಡೆಯುತ್ತಿದೆಯಾ ಸಿದ್ಧತೆ?

ಗಣಿನಾಡು ಬಳ್ಳಾರಿಯ ಸಂಡೂರಿನಲ್ಲಿ ಮತ್ತೆ ಗಣಿ ವಿಸ್ತರಣೆ ಆತಂಕ ಶುರುವಾಗಿದೆ. ಗಣಿ ವಿಸ್ತರಣೆಗೆ ಸರ್ಕಾರ ಸದ್ದಿಲ್ಲದೆ ಸಿದ್ದತೆ ನಡಸಿದೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಸ್ಥಳೀಯರಿಗೆ ಹಾಗೂ ಪರಿಸರವಾದಿಗಳಿಗೆ ಆತಂಕ ಶುರುವಾಗಿದೆ. ಯಾವುದೇ ಕಾರಣಕ್ಕೂ ಗಣಿ ವಿಸ್ತರಣೆ ಬೇಡ, ಇರುವ ಎನ್‌ಎಂಡಿಸಿ ಗಣಿಯಿಂದಲೇ ಅದಿರು ಪಡೆದು ಇಂಡಸ್ಟ್ರಿ ನಡೆಸಿದೆ ಎಂದು ಜನ‌ ಒತ್ತಾಯಿಸಿದ್ದಾರೆ.

ಮತ್ತೆ ಸಂಡೂರಿನಲ್ಲಿ ಗಣಿ ವಿಸ್ತರಣೆ ಆತಂಕ: ಸುಪ್ರೀಂ ಕೋರ್ಟ್ ಅದೇಶ ಮೀರಿ ಹೆಚ್ಚುವರಿ ಗಣಿಗಾರಿಕೆಗೆ ನಡೆಯುತ್ತಿದೆಯಾ ಸಿದ್ಧತೆ?
ಮತ್ತೆ ಸಂಡೂರಿನಲ್ಲಿ ಗಣಿ ವಿಸ್ತರಣೆ ಆತಂಕImage Credit source: tv9
ವಿನಾಯಕ ಬಡಿಗೇರ್​
| Edited By: |

Updated on: Mar 02, 2026 | 7:51 AM

Share

ಬಳ್ಳಾರಿ, ಮಾರ್ಚ್ 2: ಗಣಿನಾಡು ಎಂದೇ ಪ್ರಸಿದ್ಧಿಯಲ್ಲಿರುವ ಬಳ್ಳಾರಿಯ (Ballari) ಸಂಡೂರಿನಲ್ಲಿ (Sandur) ಮತ್ತೆ ಗಣಿ ವಿಸ್ತರಣೆ ಭೀತಿ ತಲೆದೋರಿದೆ. ಅರಣ್ಯ ಪ್ರದೇಶದ ಹೆಚ್ಚುವರಿ ಭೂಮಿಯನ್ನು ಗಣಿಗಾರಿಕೆಗೆ ನೀಡಲು ಸದ್ದಿಲ್ಲದೆ ಸಿದ್ಧತೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಹೆಚ್ಚಿಸಿದೆ. ಸಂಡೂರಿನ ಸ್ವಾಮಿಮಲೈ ಅರಣ್ಯ ವ್ಯಾಪ್ತಿಯ ದೇವದಾರಿ ಅರಣ್ಯ ಪ್ರದೇಶದಲ್ಲಿ ಸುಮಾರು 1,000 ಎಕರೆ ಹಾಗೂ ರಾಮಗಡ ಅರಣ್ಯ ಪ್ರದೇಶದಲ್ಲಿ 150 ಎಕರೆ ಸೇರಿ ಒಟ್ಟು 1,150 ಎಕರೆ ಅರಣ್ಯ ಭೂಮಿಯನ್ನು ಗಣಿಗಾರಿಕೆಗೆ ನೀಡಲು ಯತ್ನ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಭೂಮಿಯನ್ನು ಕುದುರೆಮುಖ ಐರನ್ ಓರ್ ಕಂಪನಿ (KIOCL) ಮತ್ತು ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL)ಗೆ ಲೀಸ್ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ?

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಸಂಡೂರು ಭಾಗದಲ್ಲಿ ವರ್ಷಕ್ಕೆ 30 ಮಿಲಿಯನ್ ಟನ್‌ಗಳಷ್ಟು ಮಾತ್ರ ಅದಿರು ಗಣಿಗಾರಿಕೆಗೆ ಅವಕಾಶವಿದೆ. ಆದರೆ ಇದನ್ನು 50 ಮಿಲಿಯನ್ ಟನ್‌ಗಳಿಗೆ ಹೆಚ್ಚಿಸಲು ಪ್ರಯತ್ನ ನಡೆಯುತ್ತಿದೆ ಎಂಬ ಆರೋಪವೂ ಕೇಳಿಬರುತ್ತಿದೆ. ಇದು ನ್ಯಾಯಾಲಯದ ನಿಯಮ ಉಲ್ಲಂಘನೆಯಾಗಬಹುದು ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಸಂಡೂರಿನ ಅರಣ್ಯ ಪ್ರದೇಶದ ಒಟ್ಟು 32 ಸಾವಿರ ಹೆಕ್ಟೇರ್ ವ್ಯಾಪ್ತಿಯಲ್ಲಿ ಸುಮಾರು 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಈಗಾಗಲೇ ಗಣಿಗಾರಿಕೆಯಿಂದ ಗಣಿ ಧೂಳು, ಅಂತರ್ಜಲ ಸಮಸ್ಯೆ, ಆರೋಗ್ಯ ಸಮಸ್ಯೆಗಳು ಮತ್ತು ಪರಿಸರ ಹಾನಿ ಸೇರಿದಂತೆ ಹಲವು ಸಮಸ್ಯೆಗಳನ್ನು ಸ್ಥಳೀಯರು ಅನುಭವಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮತ್ತಷ್ಟು ಅರಣ್ಯ ಪ್ರದೇಶವನ್ನು ಗಣಿಗಾರಿಕೆಗೆ ನೀಡಿದರೆ ಲಕ್ಷಾಂತರ ಮರಗಳು ನಾಶವಾಗುವ ಸಾಧ್ಯತೆ ಇದೆ ಎಂದು ಜನರು ಎಚ್ಚರಿಸಿದ್ದಾರೆ.

ಸ್ಥಳೀಯರ ಅಭಿಪ್ರಾಯದಂತೆ, ಈಗಾಗಲೇ ಸಂಡೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್‌ಎಂಡಿಸಿ (NMDC) ಗಣಿಯಿಂದಲೇ ಅಗತ್ಯವಾದ ಅದಿರನ್ನು ಪಡೆದು ಕೈಗಾರಿಕೆಗಳನ್ನು ನಡೆಸಬಹುದು. ಕುದುರೆಮುಖ ಐರನ್ ಓರ್ ಕಂಪನಿ ಹಾಗೂ ವಿಐಎಸ್‌ಎಲ್ ಕಾರ್ಖಾನೆಗಳನ್ನು ಬಳ್ಳಾರಿ ಜಿಲ್ಲೆಯ ಕುಡುತಿನಿ ಭಾಗದಲ್ಲಿ ಸ್ಥಾಪಿಸಲು ರೈತರು ಸಾವಿರಾರು ಎಕರೆ ಭೂಮಿ ನೀಡಿರುವುದಾಗಿ ಹೇಳಲಾಗಿದೆ. ಆದ್ದರಿಂದ ಹೊಸ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದಕ್ಕೆ ಬದಲಾಗಿ ಈಗಿರುವ ಸಂಪನ್ಮೂಲಗಳನ್ನು ಬಳಸಿ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಯಾವುದೇ ಕಾರಣಕ್ಕೂ ಹೊಸ ಗಣಿಗಾರಿಕೆಗೆ ಅವಕಾಶ ನೀಡಬಾರದು. ಪರಿಸರ, ಅರಣ್ಯ ಮತ್ತು ಮುಂದಿನ ಪೀಳಿಗೆಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧಾರ ಕೈಗೊಳ್ಳಬೇಕು” ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಜನಾರ್ದನ ರೆಡ್ಡಿಗೆ ಮತ್ತೆ ‘ಗಣಿ’ ಉರುಳು? ಮಾಜಿ ಸಚಿವನಿಂದ 884 ಕೋಟಿ ನಷ್ಟ ವಸೂಲಿ?

ಒಟ್ಟಿನಲ್ಲಿ, ಸಂಡೂರಿನ ಹಸಿರು ಕಾಡುಗಳನ್ನು ಮತ್ತಷ್ಟು ಗಣಿಗಾರಿಕೆಗೆ ತೆರೆದುಕೊಟ್ಟರೆ ಸಸ್ಯ-ಪ್ರಾಣಿ ಸಂಕುಲಕ್ಕೆ ಭಾರೀ ಹಾನಿಯಾಗುವ ಸಾಧ್ಯತೆ ಇದೆ. ಅಭಿವೃದ್ಧಿಯ ಜೊತೆಗೆ ಪರಿಸರ ಸಂರಕ್ಷಣೆಯೂ ಸಮಾನವಾಗಿ ಮುಖ್ಯ ಎಂದು ಸ್ಥಳೀಯರು, ಪರಿಸರ ಪ್ರೇಮಿಗಳು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?