ಶ್ರೀರಾಮುಲುಗೆ ಬಳ್ಳಾರಿ ಉಸ್ತುವಾರಿ ಸಚಿವ ಸ್ಥಾನ ನೀಡಲು ಆನಂದ್ ಸಿಂಗ್ ಕೋರಿಕೆ

ಕಾಂಗ್ರೆಸ್ ಅಭ್ಯರ್ಥಿ ಕೆ ಸಿ ಕೊಂಡಯ್ಯರೊಂದಿಗೆ ಬಿಜೆಪಿ ನಾಯಕರ ಸ್ನೇಹ ವಿಚಾರವಾಗಿ ಮಾತನಾಡಿದ ಸಚಿವ ಆನಂದ್ ಸಿಂಗ್ ನಾವೆಲ್ಲಾ ಅಣ್ಣ- ತಮ್ಮಂದಿಯರಂತೆ ಇದ್ದೇವೆ. ಆದರೆ ರಾಜಕೀಯ ಬೇರೆ, ಗೆಳೆತನ ಬೇರೆ. ಪಕ್ಷ ಅಂತಾ ಬಂದಾಗ ನಾವೆಲ್ಲಾ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದರು.

ಶ್ರೀರಾಮುಲುಗೆ ಬಳ್ಳಾರಿ ಉಸ್ತುವಾರಿ ಸಚಿವ ಸ್ಥಾನ ನೀಡಲು ಆನಂದ್ ಸಿಂಗ್ ಕೋರಿಕೆ
ಸಾರಿಗೆ ಸಚಿವ ಬಿ.ಶ್ರೀರಾಮುಲು

ಬಳ್ಳಾರಿ: ತಾವು ನಿರ್ವಹಿಸುತ್ತಿರುವ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಜವಾಬ್ದಾರಿಯನ್ನು ಜಿಲ್ಲೆಯ ಮತ್ತೊಬ್ಬ ಹಿರಿಯ ಸಚಿವ ಶ್ರೀರಾಮುಲುಗೆ ನೀಡುವಂತೆ ಆನಂದ್ ಸಿಂಗ್ ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ. ಎರಡು ಜಿಲ್ಲಾ ಉಸ್ತುವಾರಿಯಿಂದ ಸ್ವಲ್ಪ ಒತ್ತಡ ಇದೆ. ಈ ವೇಳೆಗಾಗಲೇ ರಾಮುಲುಗೆ ಬಳ್ಳಾರಿ ಉಸ್ತುವಾರಿ ನೀಡಬೇಕಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಇನ್ನೂ ಸಾಧ್ಯವಾಗಿಲ್ಲ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.

ಇನ್ನು ಕಾಂಗ್ರೆಸ್ ಅಭ್ಯರ್ಥಿ ಕೆ ಸಿ ಕೊಂಡಯ್ಯರೊಂದಿಗೆ ಬಿಜೆಪಿ ನಾಯಕರ ಸ್ನೇಹ ವಿಚಾರವಾಗಿ ಮಾತನಾಡಿದ ಸಚಿವ ಆನಂದ್ ಸಿಂಗ್ ನಾವೆಲ್ಲಾ ಅಣ್ಣ- ತಮ್ಮಂದಿಯರಂತೆ ಇದ್ದೇವೆ. ಆದರೆ ರಾಜಕೀಯ ಬೇರೆ, ಗೆಳೆತನ ಬೇರೆ. ಪಕ್ಷ ಅಂತಾ ಬಂದಾಗ ನಾವೆಲ್ಲಾ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಈ ಬಾರಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಆನಂದ್ ಸಿಂಗ್ ಹೇಳಿದರು. ಉಭಯ ಜಿಲ್ಲೆಗಳಲ್ಲಿ ಮಳೆಯಿಂದ ಹೆಚ್ಚು ಬೆಳೆ ಹಾನಿಯಾಗಿದೆ.

ಈಗಾಗಲೇ ಜಿಲ್ಲಾಧಿಕಾರಿಗಳು ಬೆಳೆ ಹಾನಿ ಸಮೀಕ್ಷೆ ನಡೆಸುತ್ತಿದ್ದಾರೆ. ಶೀಘ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಬೆಳೆ ಹಾನಿಯ ವರದಿಯನ್ನ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು.

Click on your DTH Provider to Add TV9 Kannada