AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಬರುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಶ್ರೀರಾಮುಲು ಆಹ್ವಾನ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಬರುವಂತೆ ಸಾರಿಗೆ ಸಚಿವ ಶ್ರೀರಾಮುಲು ಆಹ್ವಾನ ನೀಡಿದ್ದಾರೆ.

ಬಿಜೆಪಿಗೆ ಬರುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಶ್ರೀರಾಮುಲು ಆಹ್ವಾನ
Sriramulu
TV9 Web
| Edited By: |

Updated on:Aug 18, 2022 | 12:28 PM

Share

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಬರುವಂತೆ ಸಾರಿಗೆ ಸಚಿವ ಶ್ರೀರಾಮುಲು ಆಹ್ವಾನ ನೀಡಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಸಿದ್ದರಾಮಯ್ಯ ಹಿಂದುಳಿದ ಸಮಾಜದ ನಾಯಕ ಅವರು ಬಿಜೆಪಿಗೆ ಬರಲಿ. ಕಾಂಗ್ರೆಸ್ ಪಕ್ಷದಿಂದ ಎಲ್ಲ ಹಿರಿಯ ನಾಯಕರು ಬಿಜೆಪಿಗೆ ಬಂದಿದ್ದಾರೆ, ಹೀಗಾಗಿ ಸಿದ್ದರಾಮಯ್ಯ ಬಿಜೆಪಿಗೆ ಬರಲಿ ಎಂದು ಹೇಳಿದ್ದಾರೆ.

ಬಿಜೆಪಿ ಹಿಂದುಳಿದ ವರ್ಗಗಳನ್ನ ಬಿಟ್ಟುಕೊಟ್ಟಿಲ್ಲ. ಹೀಗಾಗಿ ಕಾಂಗ್ರೆಸ್ ನಿಂದ ಹಿರಿಯ ನಾಯಕರು ಬಿಜೆಪಿಗೆ ಬಂದಿದ್ದಾರೆ, ಸಿದ್ದರಾಮಯ್ಯರಿಗೆ ಅವರ ಪಕ್ಷದಿಂದ ಇರಿಸುಮುರಿಸು ಉಂಟಾಗುತ್ತಿದೆ. ಸಿದ್ದರಾಮಯ್ಯರಿಗೆ ಡಿಕೆಶಿ ಇರಿಸುಮುರಿಸು ಮಾಡುತ್ತಿದ್ದಾರೆ. ಅವರಲ್ಲೆ ಸಾಕಷ್ಟು ಜಿದ್ದಾಜಿದ್ದಿ ಇದೆ. ಹೀಗಾಗಿ ಅವರನ್ನ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಹಿಂದುಳಿದ ನಾಯಕರು ಎಲ್ಲರೂ ಒಂದಾಗಬೇಕು ಎಂದರು.

ಸಿದ್ದರಾಮಯ್ಯ ವಿರುದ್ದ ಸ್ಪರ್ದೆ ಮಾಡಿದ್ದೇನೆ ಕುರುಬ ಸಮುದಾಯದಿಂದ ಬಿಜೆಪಿಯಿಂದ ಹಲವರು ಸಚಿವರಾಗಿದ್ದಾರೆ. ನಾನು ಎಂದೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ.. ಪಕ್ಷದ ಸಿದ್ದಾಂತಗಳ ಆಧಾರದ ಮೇಲೆ ಚುನಾವಣೆ ಎದುರಿಸುತ್ತೇನೆ.

ಹಿಂದುಳಿದ ನಾಯಕರು ಪಕ್ಷಕ್ಕೆ ಬರಲಿ ಅನ್ನೋ ಅರ್ಥದಲ್ಲಿ ಹೇಳಿಕೆ ನೀಡಿರುವೆ, ನಾನು ನಿನ್ನೆ ರಾಜಾಧ್ಯಕ್ಷರಿಗೆ ಸ್ಪಷ್ಟಿಕರಣ ನೀಡಿ ಬಂದಿರುವೆ. ಬಿಎಸ್ ವೈ ಪಕ್ಷಕ್ಕಾಗಿ ತಮ್ನ ಜೀವವನ್ನೆ ಮುಡಿಪಾಗಿಟ್ಟಿದ್ದಾರೆ, ಅವರನ್ನು ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದು ಸಂತಸ ತಂದಿದೆ. ಅವರ ಮಾರ್ಗದರ್ಶನದಲ್ಲೆ ಚುನಾವಣೆ ಎದುರಿಸುತ್ತೇವೆ ಎಂದು ನುಡಿದರು.

Published On - 12:21 pm, Thu, 18 August 22

Follow Us
TV9 Web
TV9 Web

TV9 Kannada

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ