ಶಾಸಕ ಜನಾರ್ದನ ರೆಡ್ಡಿ ಬಿಜೆಪಿಗೆ ಬಂದರೆ ಮತ್ತೆ ಬಲ ಬರುತ್ತೆ: ಮಾಜಿ ಶಾಸಕ ಸೋಮಶೇಖರ ರೆಡ್ಡಿ

ಬಳ್ಳಾರಿಯಲ್ಲಿ ಟಿವಿ9ಗೆ ಪ್ರತಿಕ್ರಿಯಿಸಿರುವ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, ಶಾಸಕ ಜನಾರ್ದನ ರೆಡ್ಡಿ ಬಿಜೆಪಿಗೆ ಬಂದರೆ ಮತ್ತೆ ಪಕ್ಷಕ್ಕೆ ಬಲ ಬರುತ್ತೆ. ವೈಯಕ್ತಿಕ ದ್ವೇಷವಿಲ್ಲ. ಸಹೋದರ ಜರ್ನಾದನ ರೆಡ್ಡಿ ಮರಳಿ ಬಿಜೆಪಿಗೆ ಬಂದ್ರೆ ಖುಷಿ ಆಗುತ್ತದೆ. ಮಾಜಿ ಸಿಎಂ B.S.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಜರ್ನಾದನ ರೆಡ್ಡಿ ಬರುತ್ತಾರೆ. ದೊಡ್ಡ ದೊಡ್ಡ ನಾಯಕರು ಜರ್ನಾದನ ರೆಡ್ಡಿ ಸಂಪರ್ಕ ಮಾಡಿದ್ದಾರೆ ಎಂದಿದ್ದಾರೆ.

ಶಾಸಕ ಜನಾರ್ದನ ರೆಡ್ಡಿ ಬಿಜೆಪಿಗೆ ಬಂದರೆ ಮತ್ತೆ ಬಲ ಬರುತ್ತೆ: ಮಾಜಿ ಶಾಸಕ ಸೋಮಶೇಖರ ರೆಡ್ಡಿ
ಶಾಸಕ ಜನಾರ್ದನ ರೆಡ್ಡಿ, ಮಾಜಿ ಶಾಸಕ ಸೋಮಶೇಖರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 27, 2024 | 9:31 PM

ಬಳ್ಳಾರಿ, ಜನವರಿ 27: ಶಾಸಕ ಜನಾರ್ದನ ರೆಡ್ಡಿ (Janardhana Reddy) ಬಿಜೆಪಿಗೆ ಬಂದರೆ ಮತ್ತೆ ಪಕ್ಷಕ್ಕೆ ಬಲ ಬರುತ್ತೆ ಎಂದು  ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಬೇರೆ ಪಕ್ಷ ಕಟ್ಟಿದ್ದಕ್ಕೆ ಮಾತ್ರ ಜರ್ನಾದನ ರೆಡ್ಡಿ ವಿರೋಧ ಮಾಡಿದ್ದೇವೆ. ವೈಯಕ್ತಿಕ ದ್ವೇಷವಿಲ್ಲ. ಸಹೋದರ ಜರ್ನಾದನ ರೆಡ್ಡಿ ಮರಳಿ ಬಿಜೆಪಿಗೆ ಬಂದ್ರೆ ಖುಷಿ ಆಗುತ್ತದೆ. ಮುಂಬರುವ ಲೋಕಸಭಾ ಚುನಾವಣೆ ಸೇರಿದಂತೆ, ಜಿಲ್ಲಾ ಪಂಚಾಯತ್​, ತಾಲೂಕು ಪಂಚಾಯತ್​ ಚುನಾವಣೆಗೂ ಪ್ಲಸ್​ ಆಗುತ್ತೆ. ಮಾಜಿ ಸಿಎಂ B.S.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಜರ್ನಾದನ ರೆಡ್ಡಿ ಬರುತ್ತಾರೆ. ದೊಡ್ಡ ದೊಡ್ಡ ನಾಯಕರು ಜರ್ನಾದನ ರೆಡ್ಡಿ ಸಂಪರ್ಕ ಮಾಡಿದ್ದಾರೆ. ಶೀಘ್ರದಲ್ಲಿ ಅವರು ಬಿಜೆಪಿಗೆ ಬರುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ರೆಡ್ಡಿ ಪಕ್ಷಕ್ಕೆ ಬರುವುದು ಬಿಜೆಪಿಗೆ ಪ್ಲಸ್ ಆಗುತ್ತೆ. ಕೆಆರ್‌ಪಿಪಿ ಪಕ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಸ್ವಲ್ಪ ಹೊಡೆತ ಬಿದ್ದಿದೆ. ಗ್ಯಾರಂಟಿ ಎಫೆಕ್ಟ್​ನಿಂದ ಬಿಜೆಪಿ ಸೋಲಾಯಿತು. ಗ್ಯಾರಂಟಿ ಯೋಜನೆಗಳು ಬೋಗಸ್ ಅಂತ ಜನರಿಗೆ ಗೊತ್ತಾಗಿದೆ. ರೆಡ್ಡಿ ಬಿಜೆಪಿಗೆ ಸೇರಿದರೆ ಕೆಆರ್‌ಪಿಪಿ ಪಕ್ಷವನ್ನ ಮರ್ಜ ಮಾಡಲಾಗುತ್ತೆ ಎಂದರು.

ಇದನ್ನೂ ಓದಿ: ಬಿಜೆಪಿ ಜತೆ ಕೆಆರ್​ಪಿಪಿ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧ: ಕೆಆರ್​ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ

ಮರ್ಜ ಮಾಡುವ ಮೂಲಕವೇ ಶ್ರೀರಾಮುಲು, ಯಡಿಯೂರಪ್ಪ ಪಕ್ಷಕ್ಕೆ ಸೇರಿದ್ದಾರೆ. ಇವರ ಹಾದಿಯಲ್ಲಿ ಜರ್ನಾದನ ರೆಡ್ಡಿ ಪಕ್ಷಕ್ಕೆ ಸೇರುತ್ತಾರೆ. ನಾನು ಜನಾರ್ದನ ರೆಡ್ಡಿ ಸಂಪರ್ಕ ಮಾಡಿಲ್ಲ ಎಂದು ಹೇಳಿದ್ದಾರೆ.

ಮೋದಿ ಪ್ರಧಾನಿಯಾಗುವುದಕ್ಕೆ ಕೆಆರ್​ಪಿಪಿ ಪಕ್ಷ ಹೊಂದಾಣಿಕೆಗೆ ಸಿದ್ಧ: ಶಾಸಕ ಜನಾರ್ದನ ರೆಡ್ಡಿ

ಕೊಪ್ಪಳದಲ್ಲಿ ಶಾಸಕ ಜನಾರ್ದನ ರೆಡ್ಡಿ ಮಾತನಾಡಿದ್ದು, ಕೆಆರ್​ಪಿಪಿ ಪಕ್ಷದ ಜೊತೆ ಬಿಜೆಪಿ ಹೊಂದಾಣಿಕೆಗೆ ಸಿದ್ದವಾಗಿದ್ದರೆ ನಾನೂ ಪ್ರಯಾಣ ಮಾಡುತ್ತೇನೆ. ಹೊಂದಾಣಿಕೆ ಮಾಡಿಕೊಂಡು ಹೋಗೋದಕ್ಕೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. ದೇಶ ಮೋದಿ ಅವರು ಪ್ರಧಾನಿಯಾಗಬೇಕೆಂತಿದೆ. ಮೋದಿ ಪ್ರಧಾನಿಯಾಗುವುದಕ್ಕೆ ಕೆಆರ್​ಪಿಪಿ ಪಕ್ಷ ಹೊಂದಾಣಿಕೆಗೆ ಸಿದ್ಧ. ಕಲ್ಯಾಣ ರಾಜ್ಯ ಪಕ್ಷದಿಂದ ಗೆದ್ದ ಮೇಲೆ ಬಿಜೆಪಿಗೆ ಸಪೋರ್ಟ್ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನಾರ್ದನ ರೆಡ್ಡಿಯನ್ನು ಸಂಪರ್ಕಿಸಿರುವ ಬಿಜೆಪಿ: ಮತ್ತೆ ಬಿಜೆಪಿಗೆ ಸೇರುತ್ತಾರಾ ಕೆಆರ್​ಪಿಪಿ ಸ್ಥಾಪಕ?

ಕೆಆರ್​ಪಿಪಿ ಪಕ್ಷದ ಸಂಸ್ಥಾಪಕ ಹಾಗೂ ಗಂಗಾವತಿ ಶಾಸಕ ಜನಾರ್ದನರೆಡ್ಡಿಯನ್ನ ಬಿಜೆಪಿಗೆ ಕರೆತರುವ ಪ್ರಯತ್ನಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ಇದೆ. ಬಿಜೆಪಿ ಜತೆಗೆ ಕೆಆರ್​ಪಿಪಿ ವಿಲೀನ ಮಾಡಿ, ಕೊಪ್ಪಳದಿಂದ ರೆಡ್ಡಿಯನ್ನ ಅಖಾಡಕ್ಕೆ ಇಳಿಸುವ ಬಗ್ಗೆ ಚರ್ಚೆ ಇದೆ ಅಂತ ಹೇಳಲಾಗುತ್ತಿದೆ. ಬಹಿರಂಗ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯನ್ನ ರೆಡ್ಡಿ ಹೊಗಳಿದ್ದು ಈ ಬೆಳವಣಿಗೆಗೆ ತಳಕು ಹಾಕಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ