ಮುಂದುವರೆದ ರೆಡ್ಡಿ ಬ್ರದರ್ಸ್ ಮುನಿಸು; ಅಣ್ಣನ ಮಗನ ಮದುವೆಗೆ ಗೈರಾದ ಜನಾರ್ದನ ರೆಡ್ಡಿ

ರಾಜಕೀಯ ‌ವಿಚಾರಕ್ಕೆ ಸೋಮಶೇಖರ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಸಹೋದರರ ನಡುವೆ ಭಿನ್ನಾಭಿಪ್ರಾಯಗಳಿವೆ. ಈ ಸಿಟ್ಟಿನಲ್ಲಿ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದ ಕಾರ್ಯಕ್ರಮದಲ್ಲೂ ಭಾಗಿಯಾಗುತ್ತಿಲ್ಲ. ಆಂಧ್ರ ಪ್ರದೇಶದ ನೆಲ್ಲೂರಿನಲ್ಲಿ ನಿನ್ನೆ ನಡೆದ ಅಣ್ಣನ ಪುತ್ರನ ವಿವಾಹ ಕಾರ್ಯಕ್ರಮಕ್ಕೆ ಗಾಲಿ ಜನಾರ್ದನ ರೆಡ್ಡಿ ಅವರು ಹೋಗಿಲ್ಲ

ಮುಂದುವರೆದ ರೆಡ್ಡಿ ಬ್ರದರ್ಸ್ ಮುನಿಸು; ಅಣ್ಣನ ಮಗನ ಮದುವೆಗೆ ಗೈರಾದ ಜನಾರ್ದನ ರೆಡ್ಡಿ
ಅಣ್ಣನ ಮಗನ ಮದುವೆಗೆ ಗೈರಾದ ಜನಾರ್ದನ ರೆಡ್ಡಿ
Follow us
| Updated By: ಆಯೇಷಾ ಬಾನು

Updated on:Nov 25, 2023 | 1:28 PM

ಬಳ್ಳಾರಿ, ನ.25: ಸೋಮಶೇಖರ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ (Janardhan Reddy) ನಡುವೆ ಇದ್ದ ಮುನಿಸು ತಣ್ಣಗಾದಂತೆ ಕಾಣಿಸುತ್ತಿಲ್ಲ. ಏಕೆಂದರೆ ಸೋಮಶೇಖರ್ ರೆಡ್ಡಿ(Somashekar Reddy) ಪುತ್ರ ಸಂದೀಪ್ ರೆಡ್ಡಿ ವಿವಾಹಕ್ಕೆ ಜನಾರ್ದನ ರೆಡ್ಡಿ ಅವರು ಗೈರಾಗಿದ್ದಾರೆ. ಆಂಧ್ರ ಪ್ರದೇಶದ ನೆಲ್ಲೂರಿನಲ್ಲಿ ನಿನ್ನೆ ನಡೆದ ಅಣ್ಣನ ಪುತ್ರನ ವಿವಾಹ ಕಾರ್ಯಕ್ರಮಕ್ಕೆ ಗಾಲಿ ಜನಾರ್ದನ ರೆಡ್ಡಿ ಅವರು ಹೋಗಿಲ್ಲ. ಈ ಮೂಲಕ ಇಬ್ಬರಲ್ಲಿನ ಮುಗಿಸು ಮುಂದುವರೆದಿದೆ. ಸದ್ಯ ಈ ಬಗ್ಗೆ ಜನಾರ್ದನ ರೆಡ್ಡಿ ಅವರು ಸ್ಪಷ್ಟನೆ ನೀಡಿದ್ದಾರೆ.

ರಾಜಕೀಯ ‌ವಿಚಾರಕ್ಕೆ ಸೋಮಶೇಖರ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಸಹೋದರರ ನಡುವೆ ಭಿನ್ನಾಭಿಪ್ರಾಯಗಳಿವೆ. ಈ ಸಿಟ್ಟಿನಲ್ಲಿ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದ ಕಾರ್ಯಕ್ರಮದಲ್ಲೂ ಭಾಗಿಯಾಗುತ್ತಿಲ್ಲ. ಜನಾರ್ದನ ರೆಡ್ಡಿ ಅವರು ತಮ್ಮ ಅಣ್ಣ ಸೋಮಶೇಖರ್ ರೆಡ್ಡಿ ಮಾತು ಕೇಳದೆ ಪಕ್ಷ ಕಟ್ಟಿ ಬಳ್ಳಾರಿ ನಗರ ಕ್ಷೇತ್ರಕ್ಕೆ ಪತ್ನಿಯನ್ನ ಕಣಕ್ಕಿಳಿಸಿ ಸೋಮಶೇಖರ್ ರೆಡ್ಡಿಯನ್ನೇ ಸೋಲಿಸಿದ್ದರು. ಎಲೆಕ್ಷನ್ ಬಳಿಕವೂ ಇಬ್ಬರೂ ರೆಡ್ಡಿ ಸಹೋದರ ಮುನಿಸು ಮುಂದುವರೆದಿದೆ. ನಿನ್ನೆ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗದೆ ಬೆಂಗಳೂರಿನಲ್ಲೇ ಜನಾರ್ದನ ರೆಡ್ಡಿ ಅವರು ಉಳಿದುಕೊಂಡಿದ್ದರು.

ಇದನ್ನೂ ಓದಿ: ಬಳ್ಳಾರಿಯ ಶಾಸಕ ಮತ್ತು ಸಚಿವರು ಕೆಆರ್​ಪಿಪಿ ಕಾರ್ಯಕರ್ತರಿಗೆ ಕಿರುಕುಳ ನೀಡುವುದು ನಿಲ್ಲಿಸದಿದ್ದರೆ ಉಗ್ರ ಹೋರಾಟ: ಗಾಲಿ ಜನಾರ್ಧನರೆಡ್ಡಿ

ಬೆಂಗಳೂರಿನಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಜೆ.ರಾಮಣ್ಣರಿಂದ ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿ ಅವರು ಅಧಿಕಾರ ಸ್ವೀಕಾರ ಮಾಡಿದ್ದು ಪ್ರತಿಕ್ರಿಯಿಸಿದ್ದಾರೆ. ಪಕ್ಷ ಸ್ಥಾ‌ಪನೆ ಮಾಡಿದ ಬಳಿಕ ನನಗೆ ಕೇವಲ ನಾಲ್ಕು ತಿಂಗಳ ಅವಕಾಶ ಇತ್ತು. ಬಳ್ಳಾರಿಗೆ ನಾನು ಹೋಗದೇ ಇರುವಂತಹ ಸ್ಥಿತಿಯಲ್ಲಿ ಕೂಡಾ ರಾಷ್ಟ್ರೀಯ ಪಕ್ಷಗಳಿಗೆ ಒಳ್ಳೆಯ ಫೈಟ್ ಕೊಟ್ಟಿದ್ದೇವೆ. ಪ್ರಾದೇಶಿಕ ಪಕ್ಷಗಳು ಆರಂಭವಾಗುವುದೇ ಒಂದು ಎರಡು ಸೀಟುಗಳಿಂದ. ಬಿಜೆಪಿ ಕೂಡಾ ಎರಡು ಸೀಟ್​ಗಳಿಂದಲೇ ಆರಂಭವಾಗಿದ್ದು. ಇಂದು ಕೆಆರ್​ಪಿಪಿ ಒಂದು ಸೀಟ್ ನಿಂದ ಆರಂಭವಾಗಿದೆ. 2028ರ ವಿಧಾನಸಭಾ ಚುನಾವಣೆಗೆ ಇಡೀ ರಾಜ್ಯಕ್ಕೆ ನಾನು ತಲುಪುವ ಆತ್ಮ ವಿಶ್ವಾಸ ಇದೆ. ವಿಶ್ವಾಸದಿಂದಲೇ ನಾನು ಗಂಗಾವತಿ ಕ್ಷೇತ್ರಕ್ಕೆ ಹೋಗಿದ್ದೆ. ಬೇರೆಯವರ ರೀತಿ ನಾನು ಎರಡೆರಡು ಕ್ಷೇತ್ರಗಳಲ್ಲಿ ಸ್ಫರ್ಧೆ ಮಾಡಲಿಲ್ಲ. ಗಂಗಾವತಿಯಲ್ಲಿ ರಾಷ್ಟ್ರೀಯ ಪಕ್ಷಗಳು ಹಿಂದೂ-ಮುಸ್ಲಿಂ ಸಖ್ಯತೆಯನ್ನು ಒಡೆದು ಹಾಕಿದ್ದರು.

ಜಾತಿ ಜನಗಣತಿ ಆಧಾರದಲ್ಲಿ ಸಮಾಜದಲ್ಲಿ ಒಡಕು ಮೂಡಿಸುವ ಕೆಲಸ ಆಗುತ್ತಿದೆ. ಇಲ್ಲಿನ ರಾಜ್ಯ ಸರ್ಕಾರ ಸಮಾಜದಲ್ಲಿ ಜಾತಿ ಒಡಕು ತರುತ್ತಿದೆ. ದೆಹಲಿಯಲ್ಲಿ ಇರುವ ಸರ್ಕಾರ ಹಿಂದುತ್ವದ ಬಗ್ಗೆ ಮಾತ್ರ ಮಾತಾಡುತ್ತದೆ. ನಮ್ಮ ಪಕ್ಷ ಎಲ್ಲಾ ಸಮುದಾಯಗಳ ಪರ, ಏಳಿಗೆ ಬಯಸುತ್ತದೆ. ಬ್ರಿಟಿಷರ ಕಾಲದಲ್ಲೇ ಜಾತಿ ಜನಗಣತಿ ಆಗಿತ್ತು. ನಂತರದ ಕಾಲದಲ್ಲಿ ಸಾಕಷ್ಟು ಆಯೋಗಗಳು ಜಾತಿ ಗಣತಿ ಮಾಡಿವೆ. ಕಾಕಾ ಸಾಹೇಬ್ ಆಯೋಗ 1953 ರಲ್ಲಿ ಜಾತಿ ಗಣತಿ ಮಾಡಿತ್ತು. 2399 ಜಾತಿಗಳ ಪೈಕಿ 837 ಅತೀ ಹಿಂದುಳಿದ ಜಾತಿಗಳಿವೆ ರಾಜ್ಯದಲ್ಲಿ ಅಂತ ಆ ವರದಿಯಲ್ಲಿದೆ‌. ಅಧಿಕಾರಕ್ಕೋಸ್ಕರ ಪಕ್ಷಗಳು ಸಮಾಜದಲ್ಲಿ ಒಡಕು ತರುತ್ತಿವೆ. ಕಾಂಗ್ರೆಸ್ ನಲ್ಲೇ ಜಾತಿ ಜನಗಣತಿ ಬಗ್ಗೆ ಗೊಂದಲಗಳಿವೆ. ವೈಜ್ಞಾನಿಕವಾಗಿ ಜಾತಿ‌ ಜನಗಣತಿ ಆಗಿದೆಯಾ ಅಂತ ಸರ್ಕಾರ ಸ್ಪಷ್ಟಪಡಿಸಿಲ್ಲ. ಅವೈಜ್ಞಾನಿಕವಾಗಿ ಜಾತಿ ಜನಗಣತಿ ಮಾಡಲಾಗಿದೆ. ಧರ್ಮಗಳ ನಡುವೆ, ಜಾತಿಗಳ ನಡುವೆ ದ್ವೇಷ ಮೂಡಬಹುದು. 2028ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ. 100 ರಿಂದ 113 ಕ್ಕೂ ಹೆಚ್ಚು ಸೀಟ್ ಗಳನ್ನು ಗೆದ್ದು ಅಧಿಕಾರಕ್ಕೆ ಬರುತ್ತೇವೆ. ಬೇರೆ ಬೇರೆ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಸಾಧನೆ ಮಾಡಿವೆ. ಕರ್ನಾಟಕದಲ್ಲಿ ಈವರೆಗೆ ಪ್ರಾದೇಶಿಕ ಪಕ್ಷ ಸಾಧನೆ ಮಾಡಿಲ್ಲ ಅನ್ನೋದನ್ನು ನಾನು ಸುಳ್ಳು ಮಾಡುತ್ತೇನೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:27 pm, Sat, 25 November 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!