AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸುಧಾಕರ್ ಸಿಎಂ ಬೊಮ್ಮಾಯಿಗಿಂತ ದೊಡ್ಡೋರಾ: ಸೋಮಶೇಖರ್ ರೆಡ್ಡಿ ಆಕ್ರೋಶ

ಆರೋಗ್ಯ ಸಚಿವ ಡಾ.ಕೆ.ಸುಧಾಕರ (Dr K Sudhakar) ಅವರಿಗೆ ಕರೆ ಮಾಡಿದ್ದೆ. ಅವರು ನನ್ನ ಕರೆ ಸ್ವೀಕರಿಸಲಿಲ್ಲ ಎಂದು ಸೋಮಶೇಖರ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಸುಧಾಕರ್ ಸಿಎಂ ಬೊಮ್ಮಾಯಿಗಿಂತ ದೊಡ್ಡೋರಾ: ಸೋಮಶೇಖರ್ ರೆಡ್ಡಿ ಆಕ್ರೋಶ
ಶಾಸಕ ಸೋಮಶೇಖರ ರೆಡ್ಡಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Feb 02, 2022 | 6:48 PM

Share

ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ (MBBS) ಹಾಗೂ ಎಂಡಿ (MD) ಸೀಟ್​ಗಳ ಸಂಖ್ಯೆಯಲ್ಲಿ ಕಡಿತವಾಗಿದೆ ಎಂದು ಶಾಸಕ ಸೋಮಶೇಖರ ರೆಡ್ಡಿ (Somashekhar Reddy) ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಚರ್ಚಿಸಲು ಆರೋಗ್ಯ ಸಚಿವ ಡಾ.ಕೆ.ಸುಧಾಕರ (Dr K Sudhakar) ಅವರಿಗೆ ಕರೆ ಮಾಡಿದ್ದೆ. ಅವರು ನನ್ನ ಕರೆ ಸ್ವೀಕರಿಸಲಿಲ್ಲ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಕೇವಲ 30 ಸೆಕೆಂಡ್​ನಲ್ಲಿ ಕೆಲಸ ಮಾಡಿಕೊಟ್ಟರು. ಇವರೇನೂ ಸಿಎಂಗಿಂತ್ಲೂ ದೊಡ್ಡವರಾ? ಇವರ ವರ್ತನೆ ವಿರುದ್ಧ ಕ್ರಮಕೈಗೊಳ್ಳಬೇಕಿದೆ ಎಂದು ಅವರು ಆಗ್ರಹಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ನಮ್ಮ ಸಮಸ್ಯೆ ಹೇಳಿಕೊಂಡೆವು. ಅವರು ತಕ್ಷಣ ಸಮಸ್ಯೆಗೆ ಸ್ಪಂದಿಸಿದರು. ಸಚಿವ ಸುಧಾಕರ ಅವರ ವರ್ತನೆಯ ಬಗ್ಗೆ ನನಗೆ ಆಕ್ಷೇಪವಿದೆ. ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ನಮ್ಮ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಮನವಿ ಮಾಡುತ್ತೇನೆ ಎಂದರು.

ಸಚಿವರ ವಿರುದ್ಧ ವರಿಷ್ಠರಿಗೆ, ಸಿಎಂಗೆ ದೂರು ಕೊಟ್ಟಿರುವುದು ನಿಜ: ರೇಣುಕಾಚಾರ್ಯ ನಾನು 15ಕ್ಕೂ ಹೆಚ್ಚು ದುರಹಂಕಾರಿ ಸಚಿವರ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ದೂರು ಕೊಟ್ಟಿರುವುದು ನಿಜ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. ನಾನು ಲಿಖಿತ ರೂಪದಲ್ಲಿ ದೂರು ನೀಡಿಲ್ಲ. ಜ.27ರಂದು ಒಬ್ಬ ಸಚಿವರಿಗೆ ನಾನು ಕರೆ ಮಾಡಿದ್ದೆ, ಅವರು ನನ್ನ ಕರೆ ಸ್ವೀಕರಿಸಿರಲಿಲ್ಲ. ಅವರ ಆಪ್ತಸಹಾಯಕರು ಕರೆ ಸ್ವೀಕರಿಸಿ ಸಚಿವರಿಗೆ ಕೊರೊನಾ ಎಂದರು. ನಾನು ಸುಮ್ಮನಾಗಿದ್ದೆ. ಆದರೆ ಮರುದಿ‌ನ ಅವರು ಸಚಿವ ಸಂಪುಟ ಸಭೆಗೆ ಹಾಜರಾಗಿದ್ದರು. ಸಚಿವರು ಈ ರೀತಿಯಾಗಿ ಮಾಡಿರುವುದು ಸರಿಯಲ್ಲ. ನಾನು ಈ ದೂರವಾಣಿ ಕರೆಯ ಬಗ್ಗೆ ಸಹ ಮಾಹಿತಿ ನೀಡಿರುವೆ. ಈ ವಿಚಾರದ ಬಗ್ಗೆ ಬಿಜೆಪಿ ವರಿಷ್ಠರು ನಿರ್ಧರಿಸುತ್ತಾರೆ ಎಂದು ಅವರು ಹೇಳಿದರು.

ಹೊನ್ನಾಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕರ ಮನವಿಗೆ ಸ್ಪಂದಿಸದ ಹಾಗೂ ಕ್ಷೇತ್ರದ ಕೆಲಸ ಮಾಡಿಕೊಡದ ಕೆಲ ದುರಹಂಕಾರಿ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಕೆಲವು ಸಚಿವರು ತಮ್ಮಿಂದಲೇ ಸರ್ಕಾರ ಬಂದಿದೆ. ತಮ್ಮಿಂದಲೇ ಎಲ್ಲವೂ ನಡೆಯುತ್ತದೆ ಎಂಬ ಅಹಂನಲ್ಲಿದ್ದಾರೆ. ನಾನು ಎಲ್ಲ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಕೆಲವು ಸಚಿವರು ನಮ್ಮ ಮನವಿಗೆ ಸ್ಪಂದಿಸಿ ನಮ್ಮನ್ನು ಗೌರವದಿಂದ ಕಾಣುತ್ತಾರೆ. ಕ್ಷೇತ್ರದ ಕೆಲಸಗಳನ್ನು ಮಾಡಿಕೊಡುತ್ತಾರೆ. ಅಂಥವರ ಬಗ್ಗೆ ನಮಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಸಚಿವಾಕಾಂಕ್ಷಿಗಳ ರೇಸ್​ನಲ್ಲಿ ಸೋಮಶೇಖರ್ ರೆಡ್ಡಿ, ಸಂಡೂರಿನ ಕುಮಾರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ! ಇದನ್ನೂ ಓದಿ: ಅಂತಿಮ ವರ್ಷದ ಎಮ್ ಬಿ ಬಿ ಎಸ್ ಪರೀಕ್ಷೆ ಮುಂದೂಡುವಂತೆ ಆರ್ ಜಿ ಯು ಎಚ್ ಎಸ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪತ್ರ

Published On - 6:47 pm, Wed, 2 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ