AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ’ಕೈ‘ ಕೊಟ್ಟಿದ್ದಕ್ಕೆ ಮಗ ನಿಖಿಲ್, ಅಪ್ಪ ದೇವೇಗೌಡರು ಸೋತರು -ಹೆಚ್​​ಡಿ ಕುಮಾರಸ್ವಾಮಿ ವಿಶ್ಲೇಷಣೆ

ಸಿದ್ದರಾಮಯ್ಯರನ್ನು ಉಪ ಮುಖ್ಯಮಂತ್ರಿ ಮಾಡಿದ್ದು H.D.ದೇವೇಗೌಡರು. ಮುಖ್ಯಮಂತ್ರಿ ಆಗೋಕೆ ಮಾತ್ರ ಸಿದ್ದರಾಮಯ್ಯ ಕಾಂಗ್ರೆಸ್​ಗೆ ಹೋಗಿದ್ದಾರೆ. 30 ವರ್ಷದಿಂದ ನಮಗೆ ಕುಟುಂಬ ರಾಜಕಾರಣದ ಲೇಬಲ್ ಕೊಟ್ಟಿದ್ದಾರೆ ಎಂದು ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ’ಕೈ‘ ಕೊಟ್ಟಿದ್ದಕ್ಕೆ ಮಗ ನಿಖಿಲ್, ಅಪ್ಪ ದೇವೇಗೌಡರು ಸೋತರು -ಹೆಚ್​​ಡಿ ಕುಮಾರಸ್ವಾಮಿ ವಿಶ್ಲೇಷಣೆ
ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ
TV9 Web
| Updated By: ಆಯೇಷಾ ಬಾನು|

Updated on:Jan 31, 2023 | 2:41 PM

Share

ಬಳ್ಳಾರಿ: ಕಾಂಗ್ರೆಸ್ ಬೆಂಬಲ ನೀಡದಿದ್ದಕ್ಕೆ ನಿಖಿಲ್(Nikhil Kumaraswamy)​, ದೇವೇಗೌಡರು(HD Deve Gowda) ಸೋತರು ಎಂದು ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೆಕೊಪ್ಪದಲ್ಲಿ ಹೆಚ್​​ಡಿ ಕುಮಾರಸ್ವಾಮಿ(HD Kumaraswamy) ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯರನ್ನು ಉಪ ಮುಖ್ಯಮಂತ್ರಿ ಮಾಡಿದ್ದು H.D.ದೇವೇಗೌಡರು. ಮುಖ್ಯಮಂತ್ರಿ ಆಗೋಕೆ ಮಾತ್ರ ಸಿದ್ದರಾಮಯ್ಯ ಕಾಂಗ್ರೆಸ್​ಗೆ ಹೋಗಿದ್ದಾರೆ. 30 ವರ್ಷದಿಂದ ನಮಗೆ ಕುಟುಂಬ ರಾಜಕಾರಣದ ಲೇಬಲ್ ಕೊಟ್ಟಿದ್ದಾರೆ ಎಂದು ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ವರುಣಾದಲ್ಲಿ ಪುತ್ರನ ಭವಿಷ್ಯಕ್ಕಾಗಿ ಸಿದ್ದರಾಮಯ್ಯ ಹೊರಗೆ ಹೋಗ್ತಿದ್ದಾರೆ. ಖರ್ಗೆ ಸಿಎಂ ಆಗಲು ಬರೋಕೆ ಆಗಲ್ಲ, ಹಾಗಾಗಿ ಪುತ್ರನ ತರುತ್ತಿದ್ದಾರೆ. ಯಡಿಯೂರಪ್ಪ, ಕೆ.ಎಸ್​.ಈಶ್ವರಪ್ಪಗೂ ಅವರ ಮಕ್ಕಳ ಬಗ್ಗೆಯೇ ಚಿಂತೆ. ಅಕ್ರಮ ಗಣಿಗಾರಿಕೆ ಹೊರಗೆ ಬರುವುದಕ್ಕೆ ಕುಮಾರಸ್ವಾಮಿಯೇ ಕಾರಣ. ನನ್ನ ವಿರುದ್ಧ 150 ಕೋಟಿ ಆರೋಪಮಾಡಿದವರು ಎಲ್ಲಿಗೆ ಹೋದರು? ಜನಾರ್ದನ ರೆಡ್ಡಿ ಪಕ್ಷದಿಂದ ಜೆಡಿಎಸ್ ಪಕ್ಷಕ್ಕೆ ಯಾವುದೇ ಸಮಸ್ಯೆ ಇಲ್ಲ. ಎಲ್ಲಿ ಬೇಕಾದ್ರಲ್ಲಿ ಸ್ಪರ್ಧೆ ಮಾಡೋಕೆ ನನ್ನದು ಟೂರಿಂಗ್ ಟಾಕೀಸ್ ಅಲ್ಲ. ಸಿದ್ದರಾಮಯ್ಯ ಒಂದು ಕ್ಷೇತ್ರ ಹುಡುಕೋಕೆ ಅಗ್ತಿಲ್ಲ. ಇವರು ಸಿಎಂ ಆದವರು, ಹದಿಮೂರು ಬಾರಿ ಬಜೆಟ್ ಮಂಡಿಸಿದವರು ಎಂದು ಹೆಚ್​ಡಿಕೆ ಟೀಕಿಸಿದ್ದಾರೆ.

ಇದನ್ನೂ ಓದಿ: Election News: ಬಳ್ಳಾರಿಯಲ್ಲಿ ಸಹೋದರನ ವಿರುದ್ಧ ಪತ್ನಿಯನ್ನು ಕಣಕ್ಕಿಳಿಸಿದ ಜನಾರ್ದನ ರೆಡ್ಡಿ

ಸ್ವತಂತ್ರವಾಗಿ ಅಧಿಕಾರ ನಡೆಸಲು ಕಾಂಗ್ರೆಸ್​ ನಾಯಕರು ನನಗೆ ಬಿಡಲಿಲ್ಲ

ಇನ್ನೊಂದು ವಾರದಲ್ಲಿ ಜೆಡಿಎಸ್​ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ. 2028ರಲ್ಲಿ 2 ರಾಷ್ಟ್ರೀಯ ಪಕ್ಷಗಳನ್ನು ರಾಜ್ಯದ ಜನ ‌ತಿರಸ್ಕಾರ ಮಾಡ್ತಾರೆ. 2018ರಲ್ಲಿ ಕಾಂಗ್ರೆಸ್ ಷರತ್ತು ಹಾಕಿ ಅಧಿಕಾರ ನೀಡಿತ್ತು. ಆದ್ರೆ ಸ್ವತಂತ್ರವಾಗಿ ಅಧಿಕಾರ ನಡೆಸಲು ಕಾಂಗ್ರೆಸ್​ ನಾಯಕರು ನನಗೆ ಬಿಡಲಿಲ್ಲ. ಸಮ್ಮಿಶ್ರ ಸರ್ಕಾರವಿದ್ದರೆ ಬಡತನವನ್ನು ಹೋಗಲಾಡಿಸಲು ಸಾಧ್ಯವಿಲ್ಲ. ಎರಡೂ ಪಕ್ಷದ ಜೊತೆಗೆ ಸಮ್ಮಿಶ್ರ ಸರ್ಕಾರ ಮಾಡಿ ಅನುಭವ ಇದೆ. ಈಗಿರೋದು 2006ರ ಬಿಜೆಪಿ ಅಲ್ಲ, ರಾಷ್ಟ್ರ ನಾಯಕರ ಶಕ್ತಿ ಇರುವ ಬಿಜೆಪಿ. 2018ರಲ್ಲಿ ಕಾಂಗ್ರೆಸ್​​​ ಜೊತೆ ಹೋಗಿದ್ದಕ್ಕೆ ಗುಲಾಮನಾಗಿರುವ ಹಾಗೆ ಆಯ್ತು. ಸಿದ್ದರಾಮಯ್ಯ ಅಧಿಕಾರ ಹೋದರೂ ನನಗೆ ಮನೆ ಬಿಟ್ಟು ಕೊಡಲಿಲ್ಲ. ಸಮ್ಮಿಶ್ರ ಸರ್ಕಾರ ಮಾಡಿ‌ ಕಾಂಗ್ರೆಸ್​​ನವರು ಕುತ್ತಿಗೆ ಕೊಯ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:41 pm, Tue, 31 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ