ವಿಜಯನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ನಿರೀಕ್ಷೆ; ಮಲಪನಗುಡಿಗೆ ಗ್ರಾಮ ಪಂಚಾಯತಿ ಪರಿಶೀಲಿಸಿದ ಸಿಇಒ

| Updated By: sandhya thejappa

Updated on: Feb 25, 2022 | 10:28 AM

ಮಲಪನಗುಡಿ ಗ್ರಾಮ ಪಂಚಾಯತಿ ಗ್ರಂಥಾಲಯ ಸಂಪೂರ್ಣ ಡಿಜಿಟಲೀಕರಣವಾಗಬೇಕು. ಈಗ ಜಲಜೀವನ ಮಿಷನ್ ಅಡಿ ನಡೆಯುತ್ತಿರುವ ಕಾಮಗಾರಿಗಳು ಶೀಘ್ರ ಪೂರ್ಣಗೊಳಿಸಿ ಮನೆ-ಮನೆಗೆ ನಳದ ಮೂಲಕ ಶುದ್ಧ ಕುಡಿಯುವ ನೀರು ಪೂರೈಸುವ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಜಯನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ನಿರೀಕ್ಷೆ; ಮಲಪನಗುಡಿಗೆ ಗ್ರಾಮ ಪಂಚಾಯತಿ ಪರಿಶೀಲಿಸಿದ ಸಿಇಒ
ವಿಜಯನಗರ ಜಿಲ್ಲಾ ಪಂಚಾಯತಿ ಸಿಇಒ ಭೋಯರ್ ಹರ್ಷಲ್ ನಾರಾಯಣರಾವ್ ಮಲಪನಗುಡಿಗೆ ಭೇಟಿ ನೀಡಿದ್ದರು
Follow us on

ವಿಜಯನಗರ: ಪಂಚಾಯತ್ರಾಜ್ ದಿವಸ್ ಕಾರ್ಯಕ್ರಮಕ್ಕೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲಪನಗುಡಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲಾ ಪಂಚಾಯತಿ ಸಿಇಒ (CEO) ಭೋಯರ್ ಹರ್ಷಲ್ ನಾರಾಯಣರಾವ್ ಅವರು ಮಲಪನಗುಡಿಯ ಶಾಲೆಯಲ್ಲಿ ಫೆ.23ಕ್ಕೆ ಅಧಿಕಾರಿಗಳ ಸಭೆ ನಡೆಸಿದರು. ಮಲಪನಗುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದ ಅವರು ಅನುಷ್ಠಾನಗೊಳಿಸಬೇಕಾದ ಕಾಮಗಾರಿಗಳ ಕುರಿತು ಕ್ರಮವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಲಪನಗುಡಿ ಗ್ರಾಮ ಪಂಚಾಯತಿ ಗ್ರಂಥಾಲಯ ಸಂಪೂರ್ಣ ಡಿಜಿಟಲೀಕರಣವಾಗಬೇಕು. ಈಗ ಜಲಜೀವನ ಮಿಷನ್ ಅಡಿ ನಡೆಯುತ್ತಿರುವ ಕಾಮಗಾರಿಗಳು ಶೀಘ್ರ ಪೂರ್ಣಗೊಳಿಸಿ ಮನೆ-ಮನೆಗೆ ನಳದ ಮೂಲಕ ಶುದ್ಧ ಕುಡಿಯುವ ನೀರು ಪೂರೈಸುವ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮದಲ್ಲಿರುವ 73 ಸ್ತ್ರೀಶಕ್ತಿ ಸಂಘಗಳ ಒಕ್ಕೂಟಕ್ಕೆ ಅಗತ್ಯ ಸಹಾಯ-ಸಹಕಾರ ನೀಡುವುದರ ಮೂಲಕ ಅವರನ್ನು ಬಲಪಡಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದ ಜಿಪಂ ಸಿಇಒ ಭೋಯರ್ ಹರ್ಷಲ್ ನಾರಾಯಣರಾವ್ ಅವರು ಗ್ರಾಮದ ಆಸ್ಪತ್ರೆಯಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಗೆ ಸೂಚನೆ ನೀಡಿದರು.

ಗ್ರಾಮದಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಈ ಘಟಕಕ್ಕೆ ಅಗತ್ಯ ಫಿನಿಶಿಂಗ್ ವ್ಯವಸ್ಥೆ, ಸಿಸಿಟಿವಿ ಅಳವಡಿಕೆ ಹಾಗೂ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು. ಶಾಲಾ ಆವರಣದಲ್ಲಿ 1.80 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲಿಸಿ, ಗುಣಮಟ್ಟದಲ್ಲಿ ರಾಜೀಯಾಗದಂತೆ ನಿಗದಿಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಲು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಯೋಜನಾ ನಿರ್ದೇಶಕ ಸಮೀರ್ಮುಲ್ಲಾ, ಪಂಚಾಯತ್ರಾಜ್ ಇಇ ಜಯರಾಂನಾಯಕ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್, ಜಿಪಂ ಸಹಾಯಕ ಕಾರ್ಯದರ್ಶಿ ಉಮೇಶ್, ನಿರ್ಮಿತಿ ಕೇಂದ್ರದ ರವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಇದನ್ನೂ ಓದಿ

ಸಚಿವ ಆರ್.ಅಶೋಕ್ ಹೆಸರಿನಲ್ಲಿ ವರ್ಗಾವಣೆ ದಂಧೆ? ನಿವೃತ್ತ ಇಂಜಿನಿಯರ್ ಮಂಜುನಾಥ್ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು

ರಷ್ಯಾ ಎದುರಿಸುವಷ್ಟು ಸೇನಾ ತಾಕತ್ತು ಉಕ್ರೇನ್​ಗಿಲ್ವಾ? ರಷ್ಯಾ-ಉಕ್ರೇನ್​ ಸೇನಾ ಬಲಾಬಲ ಎಷ್ಟು? ಮಧ್ಯೆ ನ್ಯಾಟೋ ತಾಕತ್ತು ಏನು?