ಬಳ್ಳಾರಿ ಜಿಲ್ಲೆಯ ಬಹುತೇಕ ಪಿಎಚ್‌ಸಿಗಳಲಿಲ್ಲ ಮರಣೋತ್ತರ ಪರೀಕ್ಷೆ ಕೇಂದ್ರಗಳು
ಬಳ್ಳಾರಿಯ 29 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ ಕೇವಲ 8ರಲ್ಲಿ ಮಾತ್ರ ಮರಣೋತ್ತರ ಪರೀಕ್ಷಾ ಕೇಂದ್ರಗಳಿವೆ. ಇದು ಆರೋಗ್ಯ ಇಲಾಖೆಯ ನಿಯಮಗಳ ಉಲ್ಲಂಘನೆಯಾಗಿದೆ. ಮೃತದೇಹಗಳನ್ನು ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಸರ್ಕಾರವು ಪ್ರತಿ ಪಿಎಚ್‌ಸಿಗಳಲ್ಲಿ ಮರಣೋತ್ತರ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಬೇಕಿದೆ. ಬಳ್ಳಾರಿಯ ಆರೋಗ್ಯ ವ್ಯವಸ್ಥೆಯಲ್ಲಿ ಈ ಕೊರತೆಯನ್ನು ತುರ್ತಾಗಿ ನಿವಾರಿಸಬೇಕು.

ಬಳ್ಳಾರಿ, ಏಪ್ರಿಲ್ 11: ಬಳ್ಳಾರಿಯಲ್ಲಿ (Ballari) ಸುಮಾರು 29 ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ (PHC). ಈ ಆರೋಗ್ಯ ಕೇಂದ್ರಗಳ ಪೈಕಿ ಕೇವಲ 8 ಕೇಂದ್ರಗಳಲ್ಲಿ ಮಾತ್ರ ಮರಣೋತ್ತರ ಪರೀಕ್ಷೆ ಕೇಂದ್ರಗಳಿವೆ. ನಿಯಮದ ಪ್ರಕಾರ ಪ್ರತಿ ಪಿಎಚ್‌ಸಿ ಗಳಲ್ಲಿ ಮರಣೋತ್ತರ ಪರೀಕ್ಷೆ ಕೇಂದ್ರಗಳಿರಬೇಕು. ಆದರೆ, ಈ ನಿಯಮವನ್ನು ಗಾಳಿಗೆ ತೋರಿ ಇಲ್ಲಿಯ ಆರೋಗ್ಯ ಇಲಾಖೆ ಪಿಎಚ್‌ಸಿಗಳನ್ನು ನಡೆಸುತ್ತಿದೆ.
ಈ ಬಗ್ಗೆ ಡಿಎಚ್‌ಓ ಡಾ. ಯಲ್ಲಾರ್ ರಮೇಶ ಮಾತನಾಡಿ, ನಮ್ಮ ಜಿಲ್ಲೆಯಲ್ಲಿರುವ ಬಹುತೇಕ ಪಿಎಚ್‌ಸಿಗಳಲ್ಲಿ ಮರಣೋತ್ತರ ಪರೀಕ್ಷೆ ಕೇಂದ್ರಗಳಿಲ್ಲ. ಕೇವಲ 8 ಕೇಂದ್ರಗಳಲ್ಲಿ ಮರಣೋತ್ತರ ಪರೀಕ್ಷೆ ಕೇಂದ್ರಗಳಿವೆ. ಪ್ರಾಥಮಿಕ ಆರೋಗ್ಯ ಕೇಂದ್ರಲ್ಲಿನ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹತ್ತಿರದ ತಾಲೂಕು ಆಸ್ಪತ್ರೆಗೆ ಅಥವಾ ಬೀಮ್ಸ್ ಆಸ್ಪತ್ರೆಗೆ ಕಳುಹಿಸುತ್ತೇವೆ. ಇನ್ನು, ಯಾವುದೇ ಕಾರಣಕ್ಕೂ ಆಸ್ಪತ್ರೆಯ ಹೊರ ಆವರಣದಲ್ಲಿ ಮರಣೋತ್ತರ ಪರೀಕ್ಷೆ ನಡೆಸುವುದಿಲ್ಲ. ಹಂತ ಪ್ರಕರಣಗಳು ಈವರಗೆ ನಡೆದಿಲ್ಲ ಎಂದು ಹೇಳಿದರು.
ಬಳ್ಳಾರಿಯಲ್ಲಿರುವ 29 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಾಹಿತಿಯನ್ನ ಡಿಎಚ್‌ಓ ಡಾ. ಯಲ್ಲಾರದ ರಮೇಶ ತೆಗೆದುಕೊಂಡು. ಆಸ್ಪತ್ರೆಗಳ ವ್ಯವಸ್ಥೆ ಬಗ್ಗೆ ತಿಳಿದುಕೊಂಡಿದ್ದಾರೆ. ಎಂಟು ಪಿಎಚ್‌ಸಿಗಳಲ್ಲಿರುವ ಮರಣೋತ್ತರ ಪರೀಕ್ಷೆ ಕೇಂದ್ರಗಳು ಯಾವ ರೀತಿ ಕೆಲಸ ಮಾಡುತ್ತಿವೆ ಎಂಬುವುದರ ಬಗ್ಗೆಯೂ ಮಾಹಿತಿ ಪಡೆದ್ದಾರೆ. ಜೊತೆಗೆ ಮರಣೋತ್ತರ ಪರೀಕ್ಷೆ ಕೇಂದ್ರಗಳನ್ನು ಹೊಂದದ ಪಿಎಚ್‌ಸಿಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ಕೂಡ ನೀಡಿದ್ದಾರೆ. ಜೊತೆಗೆ ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸುವುದರ ಬಗ್ಗೆ ಯಾವುದೇ ತೊಂದರೆ ಇಲ್ಲ.
ಬಳ್ಳಾರಿ ತಾಲೂಕಿನ ಸಿದ್ದಮ್ಮನಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಿಯಾಲಿಟಿ ಚೆಕ್ ನಡೆಸಿದ ನಿಮ್ಮ Tv9 ಅಲ್ಲಿನ ವಾಸ್ತವ ಸ್ಥಿತಿಯನ್ನ ವಿವರಿಸಿದೆ. ಜೊತೆಗೆ ಅಲ್ಲಿ ಮರಣೋತ್ತರ ಪರೀಕ್ಷೆ ಕೇಂದ್ರವಿಲ್ಲದೆ ಪಿಎಚ್‌ಸಿ ನಡೆಸಲಾಗುತ್ತಿರುವ ಬಗ್ಗೆ ಅಲ್ಲಿವ ವೈದ್ಯರೇ Tv9 ಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬಳ್ಳಾರಿಯಲ್ಲಿ ಮತ್ತೊಂದು ಮನಿ ಡಬ್ಲಿಂಗ್ ಸ್ಕ್ಯಾಮ್: ಬರೋಬ್ಬರಿ 50 ಕೋಟಿಗೂ ಹೆಚ್ಚು ವಂಚನೆ!
ಒಟ್ಟಿನಲ್ಲಿ ಗಣಿನಾಡು ಬಳ್ಳಾರಿಯಲ್ಲಿ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮರಣೋತ್ತರ ಪರೀಕ್ಷೆ ಕೇಂದ್ರಗಳಿಲ್ಲ. ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಬೇಕೆಂದರೇ ತಾಲೂಕು ಆಸ್ಪತ್ರೆಗೆ ತೆರಳಬೇಕು. ಅಥವಾ ಜಿಲ್ಲಾಸ್ಪತ್ರೆ ಬಿಮ್ಸ್ಗೆ ತೆರಳುವ ಸ್ಥಿತಿ ಇದೆ. ಹೀಗಾಗಿ ಸರ್ಕಾರ ಕೂಡಲೇ ಎಚ್ಚೆತ್ತು ಪ್ರತಿ ಪಿಎಚ್‌ಸಿಗಳಲ್ಲಿ ಮರಣೋತ್ತರ ಪರೀಕ್ಷೆ ಕೇಂದ್ರಗಳನ್ನು ಸ್ಥಾಪನೆ ಮಾಡುವ ಕೆಲಸ ಮಾಡಬೇಕಿದೆ.