AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Property dispute: ಆಸ್ತಿಗಾಗಿ ಅಣ್ಣನ ಕೊಲೆ – ತಮ್ಮನಿಗೆ ಜೀವಾವಧಿ ಶಿಕ್ಷೆ

vijayanagara: ಹೂವಿನಹಡಗಲಿಯ ಆಗಿನ ಪೊಲೀಸ್​ ಸರ್ಕಲ್ ಇನ್ಸ್​ಪೆಕ್ಟರ್​ ಜಿ.ಎಸ್. ಹೆಬ್ಬಾಳ ಅವರು ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಶುಭವೀರ ಜೈನ್ ಅವರು ವಿಚಾರಣೆ ನಡೆಸಿ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Property dispute: ಆಸ್ತಿಗಾಗಿ ಅಣ್ಣನ ಕೊಲೆ - ತಮ್ಮನಿಗೆ ಜೀವಾವಧಿ ಶಿಕ್ಷೆ
ಸಾಂಕೇತಿಕ ಚಿತ್ರ
TV9 Web
| Updated By: ಸಾಧು ಶ್ರೀನಾಥ್​|

Updated on:Apr 06, 2022 | 7:39 PM

Share

ವಿಜಯನಗರ: ಆಸ್ತಿಗಾಗಿ ನಡೆದ ಜಗಳದಲ್ಲಿ ಸ್ವಂತ ಅಣ್ಣನನ್ನೇ ಕೊಲೆ ಮಾಡಿದ್ದ ತಮ್ಮನಿಗೆ ಇಲ್ಲಿನ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಕಠಿಣ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪ ಪ್ರಕಟಿಸಿದರು. ವಿಜಯನಗರ ಜಿಲ್ಲೆಯ ಕೋಗಳಿ ಗ್ರಾಮದಲ್ಲಿ ಅಣ್ಣ ತಮ್ಮಂದಿರಾದ ಸಿದ್ದನಗೌಡ ಮತ್ತು ಬಸವನಗೌಡ ನಡುವೆ ಆಸ್ತಿಗಾಗಿ ಪದೇ ಪದೆ ಜಗಳ ನಡೆದಿದ್ದು, 2016 ರ ಏಪ್ರಿಲ್ 28 ರಂದು ಬಸವನಗೌಡರನ್ನು ಆರೋಪಿ ಸಿದ್ದನಗೌಡ ಜಾಲಿ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದ.

ಈ ಕುರಿತು ಹೂವಿನಹಡಗಲಿಯ ಆಗಿನ ಪೊಲೀಸ್​ ಸರ್ಕಲ್ ಇನ್ಸ್​ಪೆಕ್ಟರ್​ ಜಿ.ಎಸ್. ಹೆಬ್ಬಾಳ ಅವರು ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಶುಭವೀರ ಜೈನ್ ಅವರು ವಿಚಾರಣೆ ನಡೆಸಿ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ವಿಫಲವಾದಲ್ಲಿ ಮೂರು ವರ್ಷ ಸಾದಾ ಶಿಕ್ಷೆಯನ್ನೂ ಅನಭವಿಸಬೇಕು. ಮೃತನ ಪತ್ನಿ ಮತ್ತು ಕುಟುಂಬ ಸದಸ್ಯರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಟಿ ಅಂಬಣ್ಣ ವಾದ ಮಂಡಿಸಿದ್ದರು.

ಬಳ್ಳಾರಿ: ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡುತ್ತಿದ್ದ 4 ಜನರ ಬಂಧನ ಬಳ್ಳಾರಿಯ ಕೌಲ್ ಬಜಾರ್‌ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡುತ್ತಿದ್ದ 4 ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 1,01,070 ನಗದು ಹಾಗೂ 4 ಮೊಬೈಲ್ ವಶ ಪಡಿಸಿಕೊಂಡಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ಗೆ ಬಳಸುತ್ತಿದ್ದ ICICI ಬ್ಯಾಂಕ್ ನಲ್ಲಿ ಚಾಲ್ತಿಯಲ್ಲಿದ್ದ ಖಾತೆಯನ್ನು ಸೀಜ್ ಮಾಡಿದ್ದಾರೆ. ಬ್ಯಾಂಕ್ ಖಾತೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಬಳಸಿದ 13 ಲಕ್ಷ ರೂಪಾಯಿ ಜಮೆ ಮಾಡಲಾಗಿತ್ತು.

ನಾಲ್ವರ ಬಂಧನ, ಓರ್ವ ಪರಾರಿ: ಬಳ್ಳಾರಿಯ ಕೋಟೆ ಪ್ರದೇಶದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ವೇಳೆ ದಾಳಿ ನಡೆಸಲಾಗಿದೆ. ಮಹ್ಮದ್ ಜುಬೇರ್, ಪ್ರಕಾಶ, ಕೃಷ್ಣಮೂರ್ತಿ, ವಿಜಯಕುಮಾರ್, ರವಿಕಿರಣ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಆರೋಪಿಗಳು. ನಾಲ್ವರನ್ನು ಬಂಧಿಸಲಾಗಿದ್ದು, ಓರ್ವ ಪರಾರಿಯಾಗಿದ್ದಾನೆ. ಬಳ್ಳಾರಿಯ ಕೌಲ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read: Hampi: ವಿಶ್ವ ಪರಂಪರೆಯ ತಾಣವಾದ ವಿಜಯನಗರ ಸಾಮ್ರಾಜ್ಯದ ಮೇಲೆ ಕಣ್ಣಿಟ್ಟ ಜಿಯೋ! ಹಂಪಿಯಲ್ಲಿನ್ನು ನೈಜ 4G ಡಿಜಿಟಲ್ ಲೈಫ್‌! Also Read: Kannada Language in Colleges: ಕಾಲೇಜು ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

Published On - 7:33 pm, Wed, 6 April 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?