ಬ್ರಿಟನ್​​ಗೆ ಹೋಗಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಬಾಲಿಶ ಹೇಳಿಕೆ ನೀಡಿರುವ ರಾಹುಲ್ ಗಾಂಧಿಗೆ ಮಾನಸಿಕ ತೊಂದರೆ ಇದ್ದಂತಿದೆ – ಪ್ರಲ್ಹಾದ್ ಜೋಶಿ

Rahul Gandhi childish: ಇತ್ತೀಚೆಗೆ ಲೋಕಸಭೆಯಲ್ಲಿ ಮೋಷನ್ ಆಫ್​​ ಥ್ಯಾಂಕ್ಸ್ ವೇಳೆ ರಾಹುಲ್ ಗಾಂಧಿ ಅವರಿಗೆ 1 ಗಂಟೆ 9 ನಿಮಿಷ ಮಾತನಾಡಲು ಸಮಯದ ಅವಕಾಶವಿತ್ತು‌. ಆದ್ರೆ ಸ್ಪೀಕರ್ ಅವರು ಅವರು 2 ಗಂಟೆ ಸಮಯ ಕೊಟ್ಟಿದ್ರು.

ಬ್ರಿಟನ್​​ಗೆ ಹೋಗಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಬಾಲಿಶ ಹೇಳಿಕೆ ನೀಡಿರುವ ರಾಹುಲ್ ಗಾಂಧಿಗೆ ಮಾನಸಿಕ ತೊಂದರೆ ಇದ್ದಂತಿದೆ - ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಗೆ ಮಾನಸಿಕ ತೊಂದರೆ ಇದ್ದಂತಿದೆ - ಪ್ರಲ್ಹಾದ್ ಜೋಶಿ
Follow us
ಸಾಧು ಶ್ರೀನಾಥ್​
|

Updated on:Mar 07, 2023 | 3:53 PM

ಬಳ್ಳಾರಿ: ಬ್ರಿಟನ್​ನಲ್ಲಿ (Britain) ಭಾರತದ ಪ್ರಜಾಪ್ರಭುತ್ವದ ಬಗ್ಗೆ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ (Rahul Gandhi) ಅತ್ಯಂತ ಬಾಲಿಶವಾಗಿ (childish) ಹೇಳಿಕೆ ನೀಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಳ್ಳಾರಿಯಲ್ಲಿ ಇಂದು ಮಾತನಾಡಿದ ಅವರು, ಬ್ರಿಟನ್ ಅಮೇರಿಕಾ ಅಂತಾ ಓಡಾಡುತ್ತಿರುವ ರಾಹುಲ್ ಗಾಂಧಿ ದೇಶದ ಪ್ರಜಾಪ್ರಭುತ್ವದ (Indian democracy) ಬಗ್ಗೆ ನೀಡುತ್ತಿರುವ ಹೇಳಿಕೆ ಖಂಡನೀಯ ಎಂದರು. ರಾಹುಲ್ ಗಾಂಧಿ ಅವರು ಬ್ರಿಟನ್ ನಲ್ಲಿ ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ‌. ಪ್ರಪಂಚದ ಮೂರನೇ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. ರಾಹುಲ್ ಗಾಂಧಿ ಅವರಿಗೆ ಮೆಂಟಲೀ ಏನೋ ಸಮಸ್ಯೆ ಆದ ಹಾಗಿದೆ. ಸತತ ಸೋಲಿನಿಂದ ಹತಾಶರಾಗಿ ಅವರು ದೇಶದ ಪ್ರಜಾಪ್ರಭುತ್ವದ ಬಗ್ಗೆ ಅತ್ಯಂತ ಬಾಲಿಶವಾಗಿ ಮಾತನಾಡುತ್ತಿದ್ದಾರೆ. ಮಾನಸಿಕವಾಗಿ ಅವರಿಗೆ ತೊಂದರೆ ಇದ್ದಂತೆ ಕಾಣ್ತಿದೆ ಎಂದು ಲೇವಡಿ ಮಾಡಿದರು.

ಪ್ರತಿಪಕ್ಷಗಳ ಮೈಕ್ ಗಳು ಆಫ್ ಆಗ್ತಾ ಇವೆ ಅಂದಿದ್ದಾರೆ. ಆದರೆ ದೇಶದ ಜನರೇ ಅವರ ಮೈಕ್ ಗಳನ್ನ ಆಫ್ ಮಾಡಿದ್ದಾರೆ ಅನ್ನೋ ಸತ್ಯವನ್ನ ರಾಹುಲ್ ಗಾಂಧಿ ಅರಿತಿಕೊಳ್ಳಬೇಕು.

ಇತ್ತೀಚೆಗೆ ಲೋಕಸಭೆಯಲ್ಲಿ ಮೋಷನ್ ಆಫ್​​ ಥ್ಯಾಂಕ್ಸ್ (Motion of Thanks to President’s Address) ವೇಳೆ ರಾಹುಲ್ ಗಾಂಧಿ ಅವರಿಗೆ 1 ಗಂಟೆ 9 ನಿಮಿಷ ಮಾತನಾಡಲು ಸಮಯದ ಅವಕಾಶವಿತ್ತು‌. ಆದ್ರೆ ಸ್ಪೀಕರ್ ಅವರು ಅವರು 2 ಗಂಟೆ ಸಮಯ ಕೊಟ್ಟಿದ್ರು. ಸದನದಲ್ಲಿ ಪ್ರತಿಪಕ್ಷಗಳಿಗೆ ಹೆಚ್ಚಿನ ಕಾಲಾವಕಾಶ ನೀಡಲಾಗ್ತಿದೆ. ಆದರೆ, ಪ್ರತಿಪಕ್ಷಗಳೇ ಸದನದಲ್ಲಿ ಚರ್ಚಿಸದೆ ಗದ್ದಲ ಎಬ್ಬಿಸಿದ್ದನ್ನ ದೇಶದ ಜನ ನೋಡಿದ್ದಾರೆ.

ಹೊರದೇಶಕ್ಕೆ ಹೋಗಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೆಗೆಟಿವ್ ಆಗಿ ಮಾತಾಡುವ ರಾಹುಲ್ ಗಾಂಧಿ ತಮ್ಮ ಅಜ್ಜಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದು ಮರೆತಿದ್ದಾರೆ. ಇಡೀ ಪ್ರಜಾಪ್ರಭುತ್ವದ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸರ್ವಾಧಿಕಾರಿ ಧೋರಣೆ ಅನುಸರಿಸಿದವರು ಕಾಂಗ್ರೆಸ್ ನವರೇ ಎಂದು ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಇಡೀ ಮಂತ್ರಿಮಂಡಲ ಜಾರಿ ಮಾಡಿದ ನಿರ್ಣಯಗಳನ್ನ ಹರಿದುಹಾಕುವ ಮೂಲಕ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದವರು ರಾಹುಲ್ ಗಾಂಧಿ. ಈಗ ಪ್ರಜಾಪ್ರಭುತ್ವ ತೊಂದರೆಯಲ್ಲಿದೆ ಅಂತಿದ್ದಾರೆ.

Also Read:

ಉಗ್ರರ ವಿಚಾರದಲ್ಲಿ ಕಾಂಗ್ರೆಸ್ ತುಷ್ಟೀಕರಣದ ರಾಜಕೀಯ ಬಿಟ್ಟು, ದೇಶದ ಜೊತೆ ನಿಲ್ಲುವುದನ್ನ ಕಲಿಯಲಿ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾಷಣದ ವೇಳೆ ರಾಹುಲ್ ಗಾಂಧಿ ಉಗ್ರಗಾಮಿಗಳನ್ನ ಭೇಟಿ ಮಾಡಿದ ಬಗ್ಗೆ ಹೇಳಿದ್ದಾರೆ. ಅವರು ಏನೂ ನಿಮ್ಮ ಕಾಕಾನಾ.? ಎಂದು ಪ್ರಲ್ಹಾದ್ ಜೋಶಿ ಇದೇ ವೇಳೆ ಪ್ರಶ್ನಿಸಿದ್ದಾರೆ.

ಭಾರತ ಜೋಡೋ ವೇಳೆ ಭಯೋತ್ಪಾದಕರ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಸಂಶಯ ಬಂದಿದ್ರೆ ಆಗ ದೂರು ಏಕೆ ನೀಡಲಿಲ್ಲ. ಇವರ ತಂದೆಯ ಹತ್ಯೆಗೆ ಭಯೋತ್ಪಾದಕರೆ ಕಾರಣ ಅನ್ನೋದನ್ನ ರಾಹುಲ್ ಗಾಂಧಿ ಮರೆಯದಿರಲಿ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಇನ್ನು ಶಾಸಕ ಮಾಡಳ್ ವಿರೂಪಾಕ್ಷಪ್ಪ ಲಂಚ ಪ್ರಕರಣದ ವಿಚಾರವಾಗಿ ಪಕ್ಷ ಸೂಕ್ತ ತನಿಖೆ ನಡೆಸುತ್ತಿದೆ ಎಂದು ಹೇಳಿರುವ ಪ್ರಲ್ಹಾದ್ ಜೋಶಿ, ರಾಷ್ಟ್ರೀಯ ನಾಯಕರು ಸೂಕ್ಷವಾಗಿ ಗಮನಿಸುತ್ತಿದ್ದು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ಚುನಾವಣೆ ಘೋಷಣೆ ಆದ ಕೂಡಲೇ‌ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಇದೇ ವೇಳೆ ಜೋಶಿ ಸ್ಪಷ್ಟಪಡಿಸಿದರು.

Published On - 3:48 pm, Tue, 7 March 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್