ಬಳ್ಳಾರಿ: ವಿದ್ಯುತ್ ತಂತಿ (Electric Wire) ಸ್ಪರ್ಶಿಸಿ ಕನ್ನಡ ರಾಜ್ಯೋತ್ಸವ (Rajyotsava) ಪ್ರಶಸ್ತಿ ಪುರಸ್ಕೃತ ಪುರಸ್ಕೃತ ಪಂಪಾಪತಿ ಮತ್ತು ಪತ್ನಿ ದ್ಯಾವಮ್ಮ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಕೌಲ್ ಬಜಾರ್‌ನ ಬಂಡಿಹಟ್ಟಿಯ ಮನೆ ಮೇಲೆ ನಡೆದಿದೆ. ಪಂಪಾಪತಿ ಅವರ ಪತ್ನಿ ಮನೆಯ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ್ದರು. ಈ ವೇಳೆ ದ್ಯಾವಮ್ಮರನ್ನು ರಕ್ಷಿಸಲು ಹೋಗಿ ಪತಿ ಪಂಪಾಪತಿ ಸಹ ಸಾವನ್ನಪ್ಪಿದ್ದಾರೆ. ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೃದಯಾಘಾತದಿಂದ ಕರ್ತವ್ಯ ನಿರತ BSF ಯೋಧ ಸಾವು
ಧಾರವಾಡ: ಹೃದಯಾಘಾತದಿಂದ ಕರ್ತವ್ಯ ನಿರತ ಧಾರವಾಡದ BSF ಯೋಧ ಸಾವನ್ನಪ್ಪಿರುವಂತಹ ಘಟನೆ ಪಶ್ಚಿಮ ಬಂಗಾಳದ ಕುಚ್ ಬಿಹಾರ್ನಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಗಂಗಾಧರಯ್ಯ ಹಿರೇಮಠ(49) ಮೃತ ಯೋಧ. ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದ ಯೋಧ. ಬಾಂಗ್ಲಾ ಗಡಿಯಲ್ಲಿ ಸೇವೆ ಸಲ್ಲಿಸ್ತಿದ್ದ ಯೋಧ ಗಂಗಾಧರಯ್ಯ, BSF ಬೆಟಾಲಿಯನ್ 138ರಲ್ಲಿ ಸೇವೆ ಸಲ್ಲಿಸ್ತಿದ್ದರು. 28 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಂದು ರಾತ್ರಿ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು, ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ನಡೆಯಲಿದೆ.
ರೈಲಿಗೆ ಸಿಲುಕಿ ವ್ಯಕ್ತಿ ಸಾವು
ನೆಲಮಂಗಲ: ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ತುಮಕೂರು-ಬೆಂಗಳೂರು ರೈಲು ಮಾರ್ಗದ ದಾಬಸ್‌ಪೇಟೆ ಬಳಿ ನಡೆದಿದೆ. ದಾಬಸ್‌ಪೇಟೆ ನಿವಾಸಿ ಗಂಗಾಧರ್ (31) ಮೃತ ವ್ಯಕ್ತಿ. ಕಳೆದ ಒಂದುವರೆ ವರ್ಷದ ಹಿಂದೆ ಮದುವೆಯಾಗಿದ್ದ. ಮೃತನ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳೀಯವಾಗಿ ಕ್ಯಾಂಟರ್ ಚಾಲಕನಾಗಿದ್ದ ಮೃತ ಗಂಗಾಧರ್, ಯಶವಂತಪುರ ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ನದಿ ಸ್ನಾನಕ್ಕೆ ಬಂದ ಯುವಕ ನೀರು ಪಾಲು
ಬೆಳಗಾವಿ: ಶ್ರಾವಣ ಮಾಸದ ಕೊನೆ ದಿನ ಹಿನ್ನಲೆ ನದಿ ಸ್ನಾನಕ್ಕೆ ಬಂದ ಯುವಕ ನೀರು ಪಾಲಾಗಿರುವ ಘಟನೆ ಅಥಣಿ ತಾಲೂಕಿನ ಹಲ್ಯಾಳ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ. ಅಥಣಿ ಪಟ್ಟಣದ ನಿವಾಸಿ ಸಾಗರ ರಾಜು ಹೊನಕಟ್ಟಿ (23) ನದಿ ಪಾಲಾದ ಯುವಕ.
ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಿದ್ದರಿಂದ ಅವಘಡ ಸಂಭವಿಸಿದೆ. ಅಗ್ನಿಶಾಮಕದಳ, ಪೊಲೀಸರಿಂದ ನದಿಯಲ್ಲಿ ಯುವಕನ ಶೋಧ ಕಾರ್ಯ ನಡೆಯುತ್ತಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಶಾಲಾ ಮಕ್ಕಳಿದ್ದ ಆಟೋ ಪಲ್ಟಿಯಾಗಿ ಚಾಲಕ ಸೇರಿ ನಾಲ್ವರಿಗೆ ಗಾಯ ಯಾದಗಿರಿ ಹೊರವಲಯದ ವಡಗೇರ ಕ್ರಾಸ್ ಬಳಿ ಶಾಲಾ ಮಕ್ಕಳಿದ್ದ ಆಟೋ ಪಲ್ಟಿಯಾಗಿ ಚಾಲಕ ಸೇರಿ ನಾಲ್ವರಿಗೆ ಗಾಯಗಳಾಗಿವೆ. ಗಾಯಾಳು ಮೂವರು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಡಗೇರ ತಾಲೂಕಿನ ಗುರಸಣಗಿ ಗ್ರಾಮದ ವಿದ್ಯಾರ್ಥಿಗಳು ಆಟೋದಲ್ಲಿ ಅಜೀಮ್ ಪ್ರೇಮ್ ಜೀ ಶಾಲೆಗೆ ಹೋಗುತ್ತಿದ್ದರು.
ಈ ವೇಳೆ ನಾಯಿಗಳು ಅಡ್ಡ ಬಂದಿದ್ದಕ್ಕೆ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಗಾಯಗೊಂಡ ಅನಿಲ್, ರುಕ್ಸಾನಾ, ಶೋಭಾಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Published On - 10:45 pm, Sun, 28 August 22