ಸವದತ್ತಿ ಯಲ್ಲಮ್ಮನ ಕ್ಷೇತ್ರದ ಭಕ್ತಾದಿಗಳ ಬಹುದಿನಗಳ ಬೇಡಿಕೆಗೆ ಸ್ಪಂದನೆ; ಸಾರಿಗೆ ಇಲಾಖೆಯಿಂದ ಬಸ್ ವ್ಯವಸ್ಥೆ

ಬಸ್ ಸಂಚಾರಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರು ಬಳ್ಳಾರಿಯಿಂದ ತಿರುಪತಿ, ಶ್ರೀಶೈಲ, ಧರ್ಮಸ್ಥಳ, ಮಂತ್ರಾಲಯ ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಬಸ್ ಸೇವೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

ಸವದತ್ತಿ ಯಲ್ಲಮ್ಮನ ಕ್ಷೇತ್ರದ ಭಕ್ತಾದಿಗಳ ಬಹುದಿನಗಳ ಬೇಡಿಕೆಗೆ ಸ್ಪಂದನೆ; ಸಾರಿಗೆ ಇಲಾಖೆಯಿಂದ ಬಸ್ ವ್ಯವಸ್ಥೆ
ಸಾರಿಗೆ ಇಲಾಖೆಯಿಂದ ಬಸ್ ವ್ಯವಸ್ಥೆ
Follow us
TV9 Web
| Updated By: preethi shettigar

Updated on: Feb 07, 2022 | 9:49 AM

ಬಳ್ಳಾರಿ: ಜಿಲ್ಲೆಯ ಸವದತ್ತಿ ಯಲ್ಲಮ್ಮನ ಕ್ಷೇತ್ರದ ಭಕ್ತಾದಿಗಳ(Devotees) ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಸಾರಿಗೆ ಇಲಾಖೆಯು ಬಳ್ಳಾರಿಯಿಂದ ಸವದತ್ತಿಗೆ ನೂತನ ಬಸ್(Bus) ಸೇವೆಯನ್ನು ನಿನ್ನೆ(ಫೆಬ್ರವರಿ 07) ಆರಂಭಿಸಿದೆ. ಈ ಮೂಲಕ ಭಕ್ತಾದಿಗಳ ಬಹುದಿನಗಳ ಆಸೆ ಈಡೇರಿದಂತಾಗಿದೆ. ಸಾರಿಗೆ, ಪರಿಶಿಷ್ಟವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ನೂತನ ಬಸ್‍ಗೆ ಹಸಿರುನಿಶಾನೆ ತೋರುವುದರ ಮೂಲಕ ಸಂಚಾರಕ್ಕೆ ಚಾಲನೆ ನೀಡಿದರು. ಬಳ್ಳಾರಿಯಿಂದ ಬೆಳಗ್ಗೆ 8ಕ್ಕೆ ಹೊರಡಲಿರುವ ಬಸ್​ ಸವದತ್ತಿಗೆ ಮಧ್ಯಾಹ್ನ 2ಕ್ಕೆ ತಲುಪಲಿದೆ. ಸವದತ್ತಿಯಿಂದ ಬಳ್ಳಾರಿಗೆ ಮಧ್ಯಾಹ್ನ 2:30ಕ್ಕೆ ಹೊರಡಲಿದೆ. 263 ರೂ.ಗಳಷ್ಟು ಟೀಕೆಟ್​ ದರ ಇದೆ. ಬಳ್ಳಾರಿಯಿಂದ ಹೊಸಪೇಟೆ, ಕೊಪ್ಪಳ, ಗದಗ, ನವಲಗುಂದ, ಯಲ್ಲಮ್ಮನಗ ಗುಡ್ಡದ ಮಾರ್ಗವಾಗಿ ಸವದತ್ತಿಗೆ ತೆರಳಲಿದೆ. ಬಸ್ ಸಂಚಾರಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು(sriramulu) ಅವರು ಬಳ್ಳಾರಿಯಿಂದ ತಿರುಪತಿ, ಶ್ರೀಶೈಲ, ಧರ್ಮಸ್ಥಳ, ಮಂತ್ರಾಲಯ ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಬಸ್ ಸೇವೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಾರಿಯ ಬಜೆಟ್‍ನಲ್ಲಿ ಸಾರಿಗೆ ಇಲಾಖೆಯನ್ನು ಮುಂದಿನ ದಿನಗಳಲ್ಲಿ ಲಾಭದಯಕವನ್ನಾಗಿ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ನೇಮಿಸಲಾದ ಶ್ರೀನಿವಾಸ್‍ ಮೂರ್ತಿ ನೇತೃತ್ವದ ಉನ್ನತ ಸಮಿತಿ ವರದಿ ನೀಡಿದ್ದು, ಆ ವರದಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದರ ಮೂಲಕ ಇಲಾಖೆಯನ್ನು ಲಾಭದಾಯಕವನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದರು.

1 ಲಕ್ಷ ಗಾರ್ಮೆಂಟ್ಸ್ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ನೀಡಬೇಕು ಎನ್ನುವ ತೀರ್ಮಾನವನ್ನು ನಮ್ಮ ಮುಖ್ಯಮಂತ್ರಿಗಳು ಕೈಗೊಂಡಿದ್ದು, ಅದನ್ನು ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ ಅವರು, ಕಟ್ಟಡ ಕಾರ್ಮಿಕರಿಗೂ ಉಚಿತ ಬಸ್ ನೀಡುವ ನಿಟ್ಟಿನಲ್ಲಿ ಕೆಲ ಜಿಲ್ಲೆಗಳಲ್ಲಿ ಫೈಲಟ್ ಕಾರ್ಯಕ್ರಮವನ್ನಾಗಿ ಮಾಡಲಾಗುವುದು. ನಂತರ ಅಲ್ಲಿನ ಯಶಸ್ವಿಯಾಗಿರುವುದನ್ನು ನೋಡಿಕೊಂಡು ರಾಜ್ಯದ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಸಾರಿಗೆ ಇಲಾಖೆಯ ಬಲವರ್ಧನೆಗೆ ಶ್ರಮಿಸಲಾಗುವುದು ಎಂದು ಸ್ಪಷ್ಟಪಡಿಸಿದ ಸಚಿವ ಶ್ರೀರಾಮುಲು ಅವರು, ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಪ್ರದೇಶಗಳಲ್ಲಿ ತುಂಬಾ ಹಳೆಯ ಬಸ್ ಓಡಾಡುತ್ತಿವೆ. ನಮ್ಮ ಇಲಾಖೆಯಲ್ಲಿ ಸುಮಾರು 40 ಸಾವಿರ ಹಳೆ ಬಸ್‍ಗಳಿವೆ. ಈ 40 ಸಾವಿರ ಬಸ್‍ಗಳಿದ್ದು, ಡಿಸೇಲ್‍ಗಳಿಂದ ಬಹಳಷ್ಟು ನಷ್ಟವನ್ನು ಇಲಾಖೆ ಅನುಭವಿಸುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಬಸ್‍ಗಳನ್ನು ಸಿಎನ್‍ಜಿ ಬಸ್‍ಗಳನ್ನಾಗಿ ಮಾಡಲಾಗುವುದು, ಸರಕಾರ ಹಂತಹಂತವಾಗಿ ಎಲೆಕ್ಟ್ರೀಕ್ ಬಸ್‍ಗಳನ್ನು ಖರೀದಿ ಮಾಡಲು ಉದ್ದೇಶಿಸಿದ್ದು, ಹಂತಹಂತವಾಗಿ ಉತ್ತರ ಕರ್ನಾಟಕಕ್ಕೆ ಒಳ್ಳೆಯ ಬಸ್‍ಗಳನ್ನು ನೀಡುವ ಕೆಲಸವನ್ನು ಇಲಾಖೆ ಮಾಡಲಿದೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ, ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ, ಬುಡಾ ಅಧ್ಯಕ್ಷ ಪಾಲನ್ನ, ಎಪಿಎಂಸಿ ಅಧ್ಯಕ್ಷ ಉಮೇಶ, ಮಾಜಿ ಸಂಸದರಾದ ಜೆ.ಶಾಂತಾ, ಬಳ್ಳಾರಿ ಎನ್‍ಇಕೆಎಸ್‍ಆರ್‍ಟಿಸಿ ಜಿಲ್ಲಾ ಅಧಿಕಾರಿ ಇನಾಯತ್ ಭಾಗಬಾನ್, ವಿಭಾಗೀಯ ಸಂಚಾರ ಅಧಿಕಾರಿ ಕೆ.ಎಲ್.ಚಂದ್ರಶೇಖರ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:

ರವಿ ಚೆನ್ನಣ್ಣನವರ್ ಪ್ರಾಮಾಣಿಕ ವ್ಯಕ್ತಿ: ಸಾರಿಗೆ ಸಚಿವ ಶ್ರೀರಾಮುಲು

ಹುಬ್ಬಳ್ಳಿ: ಸ್ವಯಂಪ್ರೇರಿತರಾಗಿ ಬಸ್ ನಿಲ್ದಾಣದ ಸ್ವಚ್ಛತೆಗೆ ನಿಂತ ಸಾರಿಗೆ ಸಿಬ್ಬಂದಿ; ಶುಚಿತ್ವ ಕಾಪಾಡಲು ಮನವಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ