ಡಿಜಿಟಲೀಕರಣಕ್ಕೆ ಮುಂದಾದ ಕಂದಾಯ ಇಲಾಖೆ: ಬಳ್ಳಾರಿ ಜಿಲ್ಲೆಗೆ ಮೊದಲ ಸ್ಥಾನ

ಕಂದಾಯ ಇಲಾಖೆಯ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ಮುಂದಾಗಿದೆ. ವಿಶೇಷವೆಂದರೆ, ರಾಜ್ಯದಲ್ಲಿ ಡಿಜಿಟಲೀಕರಣ ಮಾಡುವುದರಲ್ಲಿ ಬಳ್ಳಾರಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಇಚ್ಚಾಶಕ್ತಿಯಿಂದ ಇಡೀ ಇಲಾಖೆಯ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ಮುಂದಾಗಿದೆ.

ಡಿಜಿಟಲೀಕರಣಕ್ಕೆ ಮುಂದಾದ ಕಂದಾಯ ಇಲಾಖೆ: ಬಳ್ಳಾರಿ ಜಿಲ್ಲೆಗೆ ಮೊದಲ ಸ್ಥಾನ
ದಾಖಲೆ ಡಿಜಿಟಲೀಕರಣ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 27, 2023 | 3:02 PM

ಬೀಳ್ಳಾರಿ​, ನವೆಂಬರ್​​ 27: ಜಿಲ್ಲೆಯಲ್ಲಿ ಕಂದಾಯ ಇಲಾಖೆ (Revenue Department) ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದು, ಕಂದಾಯ ಇಲಾಖೆಯ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ಹೊರಟಿದೆ. ವಿಶೇಷವೆಂದರೆ ರಾಜ್ಯದಲ್ಲಿ ಡಿಜಿಟಲೀಕರಣ ಮಾಡುವುದರಲ್ಲಿ ಬಳ್ಳಾರಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಕಂಪ್ಯೂಟರ್ ಬಂದ ಮೇಲೆ ಮೊದಲು ಖಾಸಗಿ ಸಂಸ್ಥೆಗಳು ಇದೀಗ ಸರ್ಕಾರದ ಎಲ್ಲ ಇಲಾಖೆಗಳು ಆಧುನಿಕತೆಗೆ ತಕ್ಕಂತೆ ಎಲ್ಲ ರೀತಿಯ ತಂತ್ರಾಂಶವನ್ನು ಬದಲಾವಣೆ ಮಾಡಿಕೊಂಡಿವೆ. ಆದರೆ, ಈ ವಿಚಾರದಲ್ಲಿ ಕಂದಾಯ ಇಲಾಖೆ ಮಾತ್ರ ಬಹಳ ಹಿಂದೆ ಬಿದ್ದಿತ್ತು. ಇದೀಗ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಇಚ್ಚಾಶಕ್ತಿಯಿಂದ ಇಡೀ ಇಲಾಖೆಯ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ಮುಂದಾಗಿದೆ.

ಬ್ರಿಟಿಷರ, ನಿಜಾಮರ ಕಾಲದ ದಾಖಲೆ ಸೇರಿದಂತೆ ದಶಕಗಳಿಂದಲೂ ಕಂದಾಯ ಇಲಾಖೆ ಯಲ್ಲಿ ಕಾಗದದ ರೂಪದಲ್ಲಿರೋ ಎಲ್ಲಾ ದಾಖಲೆಗಳನ್ನು ಇಂದಿನ ದಿನಮಾನಕ್ಕೆ ತಕ್ಕಂತೆ ಬದಲಾವಣೆ ಮಾಡುವುದರ ಜೊತೆ ಎಲ್ಲವನ್ನು ಸ್ಕಾನಿಂಗ್ ಮಾಡಿ ಸಂಗ್ರಹ ಮಾಡುವ ಕೆಲಸ ಮಾಡಲಾಗುತ್ತಿದೆ. ಈ ರೀತಿಯಲ್ಲಿ ಡಿಜಿಟಲೀಕರಣ ಮಾಡುವುದರಿಂದ ಇಲಾಖೆಗೂ ಸೇರಿದಂತೆ ಸಾರ್ವಜನಿಕರಿಗೂ ದಾಖಲೆಗಳು ಬೇಕಾದಾಗ ಲಭ್ಯವಿರುತ್ತದೆ. ವಿಶೇಷವೆಂದರೆ ಈಗಾಗಲೇ 80ರಷ್ಟು ಡಿಜಿಟಲೀಕರಣ ಮಾಡುವ ಮೂಲಕ ರಾಜ್ಯದಲ್ಲಿಯೇ ಬಳ್ಳಾರಿ ಮೊದಲ ಸ್ಥಾನದಲ್ಲಿದೆ.

ಇದನ್ನೂ ಓದಿ: ಬೀದರ್​ನಲ್ಲಿ ಅಕ್ರಮ ಕೆಂಪು ಮಣ್ಣು ಸಾಗಾಟ ದಂಧೆ: ಕಂಡು ಕಾಣದಂತೆ ಕುಳಿತ ಅಧಿಕಾರಿಗಳು

ಕಾಗದದ ರೂಪದಲ್ಲಿರೋ ದಾಖಲೆಗಳನ್ನು ಅದೆಷ್ಟೋ ಬಾರಿ ತಿರುಚಿದ್ದಾರೆ. ಕೆಲವೊಮ್ಮೆ ದಾಖಲೆಗಳನ್ನು ಸುಟ್ಟಿವೆ. ಕಳೆದು ಹೋಗಿವೆ ಎನ್ನುವ ಸಿದ್ಧ ಉತ್ತರವನ್ನು ಅಧಿಕಾರಿಗಳು ನೀಡಿದ ಉದಾಹರಣೆಗಳಿವೆ. ಹೀಗಾಗಿ ಈ ರೀತಿಯಲ್ಲಿ ಎಲ್ಲಾ ದಾಖಲೆಗಳನ್ನು ಡಿಜಿಟಿಲಿಕರಣ ಮಾಡಿ ಸಾಫ್ಟವೇರ್ಗಳಿಗೆ ಅಪ್ಲೋಡ ಮಾಡಿಟ್ಟರೇ ಕಂದಾಯ ಇಲಾಖೆ ದಾಖಲೆಗಳು ಶಾಶ್ವತವಾಗಿ ಸುರಕ್ಷಿತವಾಗಿರತ್ತವೆ ಅನ್ನೋದು ಸರ್ಕಾರದ ಲೆಕ್ಕಾಚಾರ. ಅಲ್ಲದೇ ಹಣಕ್ಕಾಗಿ ಕೆಲ ಬ್ರೋಕರ್ಗಳು ದಾಖಲೆಗಳನ್ನು ಮರುಸೃಷ್ಠಿ ಮಾಡಿ ಸರ್ಕಾರಿ ಸ್ಥಳವನ್ನು ಕಬಳಿಸೋದು ತಪ್ಪುತ್ತದೆ.

ಇದನ್ನೂ ಓದಿ: ಬಿಸಿ ಊಟ ಯೋಜನೆಗೆ ಹಣ ನೀಡಿದ ಸರ್ಕಾರ: ಸ್ವಂತ ದುಡ್ಡಲ್ಲಿ ಶಿಕ್ಷಕರಿಂದ ಮಕ್ಕಳಿಗೆ ಊಟ

ಇದು ಕೇವಲ ಅಕ್ರಮ ತಡೆಯೋದು ಮಾತ್ರವಲ್ಲದೇ ಎಲ್ಲರಿಗೂ ಎಲ್ಲ ಕಾಲಕ್ಕೂ ದಾಖಲೆಗಳು ಅವಶಕತೆಗೆ ತಕ್ಕಂತೆ ಶೀಘ್ರದಲ್ಲಿ ಸಿಗುತ್ತದೆ. ಅಲ್ಲದೇ ದಶಕಗಳ ದಾಖಲೆಗಳನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ತೆಗೆದುಕೊಂಡಿರೋ ಕ್ರಮ ನಿಜಕ್ಕೂ ವಿಷೇಶವಾಗಿದೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ