AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sandur Bypoll: ಸಂಡೂರು ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ, ಅಭ್ಯರ್ಥಿಯೂ ಅಲ್ಲ: ಶ್ರೀರಾಮುಲು ಸ್ಪಷ್ಟನೆ

ಸಂಡೂರು ಕ್ಷೇತ್ರಕ್ಕೆ ಶ್ರೀರಾಮುಲು ಆಕಾಂಕ್ಷಿ ಎಂದು ಹೇಳುತ್ತಿರವ ಹೊತ್ತಲ್ಲೇ ಅವರು ಸ್ಪಷ್ಟನೆ ನೀಡಿದ್ದಾರೆ. ಸಂಡೂರು ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ, ಅಭ್ಯರ್ಥಿಯೂ ಅಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ. ಸಂಡೂರು ಸೇರಿದಂತೆ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ, ಅಭ್ಯರ್ಥಿಗಳ ಊಹಾಪೋಹಗಳು ಶುರುವಾಗಿದೆ, ರಾಜಕೀಯ ವಲಯದಲ್ಲಿ ಸಂಡೂರಿನಿಂದ ಶ್ರೀರಾಮುಲು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಶ್ರೀರಾಮುಲು ಸ್ಪಷ್ಟನೆ ನೀಡಿದ್ದು, ನಾನು ಆಕಾಂಕ್ಷಿಯೂ ಅಲ್ಲ, ಅಭ್ಯರ್ಥಿಯೂ ಅಲ್ಲ ಎಂದು ಹೇಳಿದ್ದಾರೆ.

Sandur Bypoll: ಸಂಡೂರು ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ, ಅಭ್ಯರ್ಥಿಯೂ ಅಲ್ಲ: ಶ್ರೀರಾಮುಲು ಸ್ಪಷ್ಟನೆ
ಶ್ರಿರಾಮುಲುImage Credit source: Mint
ಕಿರಣ್​ ಹನಿಯಡ್ಕ
| Edited By: |

Updated on:Oct 18, 2024 | 11:55 AM

Share

ಸಂಡೂರು ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ, ಅಭ್ಯರ್ಥಿಯೂ ಅಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ. ಸಂಡೂರು ಸೇರಿದಂತೆ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ, ಅಭ್ಯರ್ಥಿಗಳ ಬಗ್ಗೆ ಊಹಾಪೋಹಗಳು ಶುರುವಾಗಿದೆ, ರಾಜಕೀಯ ವಲಯದಲ್ಲಿ ಸಂಡೂರಿನಿಂದ ಶ್ರೀರಾಮುಲು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಶ್ರೀರಾಮುಲು ಸ್ಪಷ್ಟನೆ ನೀಡಿದ್ದು, ನಾನು ಆಕಾಂಕ್ಷಿಯೂ ಅಲ್ಲ, ಅಭ್ಯರ್ಥಿಯೂ ಅಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಪಕ್ಷದ ಸಂಘಟನೆಯಷ್ಟೇ ನನ್ನ ಮುಂದಿನ ಹೆಜ್ಜೆಯಾಗಿರಲಿದೆ, ನಾನು ಸ್ಪರ್ಧೆ ಮಾಡುವ ಕುರಿತು ಯಾವ ಚರ್ಚೆಯೂ ನಡೆಸಿಲ್ಲ, ಕಾರ್ಯಕರ್ತರಲ್ಲಿ ಈ ಕುರಿತು ಯಾವುದೇ ಗೊಂದಲ ಬೇಡ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಸಾಮಾನ್ಯ ಕಾರ್ಯಕರ್ತರಾಗಿ ಸಂಡೂರು ಗೆಲುವಿಗೆ ಶ್ರಮಿಸುತ್ತೇವೆ, ಮತ್ತೆ ಬಳ್ಳಾರಿ ಬಿಜೆಪಿ ಭದ್ರಕೋಟೆಯಾಗಲಿದೆ ಎಂದು ಹೇಳಿದ್ದಾರೆ.

ಸಂಡೂರು ಸೇರಿ 3 ಕ್ಷೇತ್ರಗಳಲ್ಲೂ ಗೆಲ್ಲಬೇಕೆಂಬುದೇ ನಮ್ಮ ಗುರಿಯಾಗಿದೆ, ನಮ್ಮ ಕಾರ್ಯಕರ್ತರ ಶಕ್ತಿ ಮುಂದೆ ಕಾಂಗ್ರೆಸ್ ಧೂಳೀಪಟ ಆಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಚಿವ ಶ್ರೀರಾಮುಲು ಪೋಸ್ಟ್​ ಮಾಡಿದ್ದಾರೆ.

ಬಳ್ಳಾರಿಯಿಂದ ಕಾಂಗ್ರೆಸ್ ಗೇಟ್​ಪಾಸ್​ಗೆ ಸಿದ್ಧವಾಗಿದೆ, ನನ್ನ ಹೆಸರು, ಮೋದಿ ಹೆಸರು ಹೇಳುತ್ತಿರುವ ಕಾಂಗ್ರೆಸ್ ನಾಯಕರಿಗೆ ನನ್ನ ಕಿವಿಮಾತಿದೆ, ಜಮೀರ್ ಅಲ್ಲ, ಮುಖ್ಯಮಂತ್ರಿಗಳು ಸಿದ್ದರಾಮಯ್ಯನವರು ನಿಂತರೂ ಈ ಬಾರಿ ಗೆಲುವು ಬಿಜೆಪಿಯದ್ದೇ. ನಮ್ಮ ಕಾರ್ಯಕರ್ತನ ಶಕ್ತಿ ಮುಂದೆ ಕಾಂಗ್ರೆಸ್ ಧೂಳೀಪಟ ಆಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಮತ್ತಷ್ಟು ಓದಿ: ವ್ಯಕ್ತಿ ಪ್ರತಿಷ್ಠೆಗೆ ಸಾಕ್ಷಿಯಾಗಲಿದೆ ಸಂಡೂರು ಉಪಚುನಾವಣೆ: ಯಾರಿಗೆ ಟಿಕೆಟ್​​?

ಜಮೀರ್ ಅಹ್ಮದ್ ಏನು ಹೇಳಿದ್ದರು? ಸಂಡೂರಿನಲ್ಲಿ ಶ್ರೀರಾಮುಲು ಅಲ್ಲ, ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ಮಾಡಿದ್ರೂ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಜಮೀರ್ ಅಹ್ಮದ್ ಖಾನ್ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಸಂಡೂರು ಅಭ್ಯರ್ಥಿಯನ್ನ ಶೀಘ್ರದಲ್ಲೇ ಘೋಷಣೆ ಮಾಡುತ್ತೇವೆ. ಶಿಗ್ಗಾವಿಯಲ್ಲಿ ಅಲ್ಪಸಂಖ್ಯಾತರ ಪ್ರಾಬಲ್ಯ ಇದೆ ಕಳೆದ ಐದಾರು ಬಾರಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡಲಾಗಿದೆ. ಈ ಬಾರಿಯೂ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವಂತೆ ಒತ್ತಾಯ ಮಾಡುತ್ತೇವೆ ಎಂದು ಹೇಳಿದ್ದರು.

ಚನ್ನಪಟ್ಟಣದಲ್ಲೂ ಕಾಂಗ್ರೆಸ್‌ ಗೆಲ್ಲುತ್ತೆ. ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಮಾಡೋದು ಅವರ ಪಕ್ಷಕ್ಕೆ ಬಿಟ್ಟದ್ದು ಯೋಗೇಶ್ವರ್ ಕಾಂಗ್ರೆಸ್‌ಗೆ ಕರೆತರುವ ಬಗ್ಗೆ ಆಲೋಚನೆ ಇಲ್ಲ. ಅಲ್ಲಿ ಕಾಂಗ್ರೆಸ್ ಪಕ್ಷದ ಸಮರ್ಥ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ ಎಂದು ಹೇಳಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:54 am, Fri, 18 October 24