AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ಕಲುಷಿತ ನೀರು ಸೇವನೆ ಪ್ರಕರಣ; ಮಕರಬ್ಬಿ ಗ್ರಾಮದಲ್ಲಿ ಮುಂದುವರಿದ ಸಾವಿನ ಸರಣಿ

ಸೆಪ್ಟೆಂಬರ್ 23 ರಂದು ಕಲುಷಿತ ನೀರು ಸೇವನೆ ಮಾಡಿ ಅಸ್ವಸ್ಥಗೊಂಡಿದ್ದ ವೃದ್ಧೆ ನಾಗಮ್ಮ ದೊಡ್ಡಬಾರಿಕೇರ( 72) ಮೃತಪಟ್ಟಿದ್ದಾರೆ. ಮಕರಬ್ಬಿಯ ತಾತ್ಕಾಲಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಗಮ್ಮನನ್ನು ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ಕೊಂಡೊಯ್ಯುವಾಗ ಕಾಂತೆಬೆನ್ನೂರು ಬಳಿ ವೃದ್ದೆ ಮೃತಪಟ್ಟಿದ್ದಾರೆ.

ವಿಜಯನಗರ: ಕಲುಷಿತ ನೀರು ಸೇವನೆ ಪ್ರಕರಣ; ಮಕರಬ್ಬಿ ಗ್ರಾಮದಲ್ಲಿ ಮುಂದುವರಿದ ಸಾವಿನ ಸರಣಿ
ಕಲುಷಿತ ನೀರು (ಸಂಗ್ರಹ ಚಿತ್ರ)
TV9 Web
| Updated By: preethi shettigar|

Updated on: Oct 11, 2021 | 8:38 AM

Share

ವಿಜಯನಗರ: ಕಲುಷಿತ ನೀರು ಸೇವಸಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಗ್ರಾಮಸ್ಥರು ಸಾವನ್ನಪ್ಪುತ್ತಿದ್ದಾರೆ. ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಈಗಾಗಲೇ 6 ಮಂದಿ ಸಾವನ್ನಪ್ಪಿದ್ದಾರೆ. ಆದರೆ ಇಂದು (ಅಕ್ಟೋಬರ್ 11) ಮತ್ತೊಬ್ಬರನ್ನು ಕಲುಷಿತ ನೀರು ಬಲಿ ಪಡೆದಿದೆ. ಸೆಪ್ಟೆಂಬರ್ 23 ರಂದು ಕಲುಷಿತ ನೀರು ಸೇವನೆ ಮಾಡಿ ಅಸ್ವಸ್ಥಗೊಂಡಿದ್ದ ವೃದ್ಧೆ ನಾಗಮ್ಮ ದೊಡ್ಡಬಾರಿಕೇರ( 72) ಮೃತಪಟ್ಟಿದ್ದಾರೆ. ಮಕರಬ್ಬಿಯ ತಾತ್ಕಾಲಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಗಮ್ಮನನ್ನು ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ಕೊಂಡೊಯ್ಯುವಾಗ ಕಾಂತೆಬೆನ್ನೂರು ಬಳಿ ವೃದ್ದೆ ಮೃತಪಟ್ಟಿದ್ದಾರೆ. ಆ ಮೂಲಕ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ನೀರು ಕಲುಷಿತಗೊಳ್ಳಲು ಕಾರಣವೇನು? ಬೋರ್ ವೆಲ್​ನಿಂದ ಹೊಸ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು ಈ ವೇಳೆ, ಹಳೆ ಪೈಪ್ ಗಳಿಗೆ ಡ್ಯಾಮೇಜ್ ಆಗಿದೆ. ಡ್ಯಾಮೇಜ್ ಆದ ಪೈಪ್ ನೊಳಗೆ ಚರಂಡಿ ನೀರು ಮಿಶ್ರವಾಗಿದ್ದು, ಇದೇ ನೀರನ್ನು ಮಕರಬ್ಬಿ ಗ್ರಾಮಸ್ಥರು ಸೇವಿಸಿದ್ದಾರೆ. ಸುಮಾರು 2 ಸಾವಿರಕ್ಕೂ ಅಧಿಕ ಜನಸಂಖ್ಯೆ ಇರೋ ಮಕರಬ್ಬಿ ಗ್ರಾಮದಲ್ಲಿ ಈ ಕಾರಣದಿಂದ ಸುಮಾರು 200 ಕ್ಕೂ ಜನರು ವಾಂತಿಬೇಧಿಯಿಂದ ಬಳಲಿದ್ದರು. ಹುಬ್ಬಳ್ಳಿ, ದಾವಣಗೆರೆ, ಹಾವೇರಿ ಆಸ್ಪತ್ರೆಯಲ್ಲಿ ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮ ತೊರೆದ ಜನರು, ಶಾಲೆಗೆ ರಜೆ ಘೋಷಣೆ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ 7 ಜನ ಸಾವನ್ನಪ್ಪಿರುವ ಕಾರಣ ಆತಂಕಗೊಂಡ ಕೆಲ ಕುಟುಂಬಗಳು ಗ್ರಾಮವನ್ನು ತೊರೆದು ಹೋಗಿವೆ. ಕೆಲ ಜನರು ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಅಸ್ವಸ್ಥಗೊಂಡ ಕೆಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಹುಬ್ಬಳ್ಳಿ, ದಾವಣಗೆರೆ, ಹಾವೇರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಕರಬ್ಬಿ ಗ್ರಾಮದಲ್ಲಿ ಶಾಲೆಗೆ ತಾತ್ಕಾಲಿಕವಾಗಿ ರಜೆ ಘೋಷಣೆ ಮಾಡಲಾಗಿದೆ.

ವಾಂತಿಭೇದಿಯಿಂದ ಅಸ್ವಸ್ಥರಾಗಬಹುದೆಂಬ ಆತಂಕದಲ್ಲಿ ತಮ್ಮ ತಮ್ಮ ಮಕ್ಕಳನ್ನು ಗ್ರಾಮಸ್ಥರು ಸಂಬಂಧಿಕರ ಮನೆಗಳಿಗೆ ಕಳುಹಿಸಿದ್ದಾರೆ. ಸರಣಿ ಸಾವಿನಿಂದ ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಉಳಿದವರಿಗೆ ಚಿಕಿತ್ಸೆ ಮುಂದುವರಿದಿದ್ದು, ಗ್ರಾಮದ ಸರ್ಕಾರಿ ಶಾಲೆಯಲ್ಲಿ 7-8 ತರಗತಿ ಮಕ್ಕಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ವಿಜಯನಗರದಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವು ಪ್ರಕರಣ; ಗ್ರಾಮ ತೊರೆದ ಜನರು, ಶಾಲೆಗೆ ರಜೆ ಘೋಷಣೆ

ಕಲುಷಿತ ನೀರು ಸೇವಿಸಿ ಆರು ಮಂದಿ ಮೃತಪಟ್ಟಿದ್ದ ಮಕರಬ್ಬಿ ಗ್ರಾಮಕ್ಕೆ ಮನೀಶ್ ಮೌದ್ಗೀಲ್ ಭೇಟಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ