AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಬರಕ್ಕೆ ಕಂಗೆಟ್ಟ ಬಳ್ಳಾರಿ: ಬತ್ತಿರುವ 200ಕ್ಕೂ ಹೆಚ್ಚು ಕೊಳವೆ ಬಾವಿಗಳು; ಕುಡಿಯುವ ನೀರಿಗೂ ಸಂಕಷ್ಟ

ಬಳ್ಳಾರಿ ಜಿಲ್ಲೆಯಲ್ಲಿ ಭೀಕರ ಅಭಾವದಿಂದ ಅಂತರ್ಜಲ ಮಟ್ಟ ಕುಸಿದಿದ್ದು 200ಕ್ಕೂ ಹೆಚ್ಚು ಕೊಳವೆಬಾವಿಗಳು ಬತ್ತಿಹೋಗಿವೆ. ಕುಡಿಯುವ ನೀರಿನ ಅಭಾವ ತೀವ್ರಗೊಂಡಿದ್ದು, ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಕೊಳವೆಬಾವಿಗಳು ಬತ್ತಲು ಆರಂಭಿಸಿರುವುದರಿಂದ ಆರ್‌ಒ ಘಟಕಗಳಿಗೂ ನೀರಿನ ಲಭ್ಯತೆ ಮೇಲೆ ಪರಿಣಾಮ ಬೀರಿದೆ.

ಭೀಕರ ಬರಕ್ಕೆ ಕಂಗೆಟ್ಟ ಬಳ್ಳಾರಿ: ಬತ್ತಿರುವ 200ಕ್ಕೂ ಹೆಚ್ಚು ಕೊಳವೆ ಬಾವಿಗಳು; ಕುಡಿಯುವ ನೀರಿಗೂ ಸಂಕಷ್ಟ
ಸಾಂದರ್ಭಿಕ ಚಿತ್ರImage Credit source: Getty Images
ಪ್ರಸನ್ನ ಹೆಗಡೆ
|

Updated on:Sep 23, 2026 | 6:53 PM

Share

ಬಳ್ಳಾರಿ, ಸೆಪ್ಟೆಂಬರ್​​ 23: ಕರ್ನಾಟಕದಲ್ಲಿ ಮಳೆಯ ತೀವ್ರ ಅಭಾವದ ನಡುವೆ ಬಳ್ಳಾರಿಯಲ್ಲಿ ಬೇಸಿಗೆಗಿಂತಲೂ ತೀವ್ರವಾದ ಬಿಸಿಲು ಮುಂದುವರಿದಿದೆ. ಪರಿಣಾಮ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿದ್ದು, ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಅತ್ಯಂತ ಕಳಪೆಯಾಗಿದ್ದು, ಪರಿಣಾಮವಾಗಿ ಬಹುತೇಕ ಎಲ್ಲಾ ಜಲಮೂಲಗಳು ಬತ್ತಿಹೋಗಿವೆ. ಇದರಿಂದ ಕೃಷಿಗೆ ಹಾಗಿರಲಿ, ಕನಿಷ್ಠ ಕುಡಿಯುವ ನೀರಿಗೂ ಜಿಲ್ಲೆಯ ಜನರು ಪರದಾಡಬೇಕಿರುವ ಸ್ಥಿತಿ ಉದ್ಭವಿಸಿದೆ.

ಬತ್ತಿರುವ 200ಕ್ಕೂ ಹೆಚ್ಚು ಕೊಳವೆ ಬಾವಿಗಳು

ಪ್ರಸ್ತುತ ಮುಂಗಾರು ಅವಧಿಯಲ್ಲಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಒಟ್ಟು 2,178 ಕೊಳವೆಬಾವಿಗಳನ್ನು ಕೊರೆಸಲಾಗಿದೆ. ಬಳ್ಳಾರಿಯಲ್ಲಿ 512, ಕೂಡ್ಲಿಗಿಯಲ್ಲಿ 288, ಕಂಪ್ಲಿಯಲ್ಲಿ 273, ಸಿರುಗುಪ್ಪದಲ್ಲಿ 665 ಹಾಗೂ ಸಂಡೂರಿನಲ್ಲಿ 440 ಕೊಳವೆಬಾವಿಗಳನ್ನು ಕೊರೆಯಲಾಗಿದೆ. ಇವುಗಳಲ್ಲಿ ಕೆಲವು ಕೊಳವೆಬಾವಿಗಳನ್ನು ಕುಡಿಯುವ ನೀರು ಪೂರೈಕೆಗೆ ಬಳಸಲಾಗುತ್ತಿದ್ದು, ಹಲವು ಗ್ರಾಮಗಳು ಇವುಗಳನ್ನೇ ಅವಲಂಬಿಸಿವೆ. ಆದರೆ, ನೀರಿನ ಕೊರತೆಯಿಂದ ಈಗಾಗಲೇ 200ಕ್ಕೂ ಹೆಚ್ಚು ಕೊಳವೆಬಾವಿಗಳು ಬತ್ತಿಹೋಗಿವೆ. ಅಂತರ್ಜಲ ಮಟ್ಟ ಮತ್ತಷ್ಟು ಕುಸಿದರೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಕೊಳವೆಬಾವಿಗಳು ಬತ್ತಿಹೋಗುವ ಸಾಧ್ಯತೆಯಿದ್ದು, ಕುಡಿಯುವ ನೀರಿನ ಲಭ್ಯತೆ ಬಗ್ಗೆ ಆತಂಕ ಹೆಚ್ಚಾಗಿದೆ.

LIVE TV

ಇದನ್ನೂ ಓದಿ:  2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!

ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಜಿಲ್ಲೆಯ ಐದು ತಾಲೂಕುಗಳನ್ನೂ ರಾಜ್ಯ ಸರ್ಕಾರ ಬರಪೀಡಿತ ಎಂದು ಘೋಷಿಸಿದೆ. ನೀರಿನ ಕೊರತೆ ಎದುರಿಸುತ್ತಿರುವ ಹಲವು ಗ್ರಾಮಗಳಿಗೆ ಈಗಾಗಲೇ ಟ್ಯಾಂಕರ್‌ಗಳು ಹಾಗೂ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಆರಂಭಿಸಲಾಗಿದೆ. ಹಲವು ಗ್ರಾಮಗಳಲ್ಲಿ ಕುಡಿಯುವ ನೀರು ಪ್ರಮುಖ ಸಮಸ್ಯೆಯಾಗಿ ಪರಿಣಮಿಸಿದ್ದು, ಆರ್‌ಒ ಘಟಕಗಳೂ ಕೊಳವೆಬಾವಿ ನೀರನ್ನೇ ಅವಲಂಬಿಸಿವೆ. ಕೊಳವೆಬಾವಿಗಳು ಬತ್ತಲು ಆರಂಭಿಸಿರುವುದರಿಂದ ಆರ್‌ಒ ಘಟಕಗಳಿಗೂ ನೀರಿನ ಲಭ್ಯತೆ ಮೇಲೆ ಪರಿಣಾಮ ಬೀರಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:53 pm, Wed, 23 September 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್