ವಿಜಯನಗರ: ಗೂಡ್ಸ್ ರೈಲಿಗೆ ಸಿಲುಕಿ ಕುರಿಗಾಹಿ ಮತ್ತು 18 ಕುರಿಗಳ ದಾರುಣ ಸಾವು

ರೈಲು ಡಿಕ್ಕಿ ಹೊಡೆದ ರಭಸಕ್ಕೆ ಕುರಿಗಾಹಿ ಚೌಟಗಿ ರಮೇಶ ಅವರ ದೇಹ ತುಂಡು ತಂಡಾಗಿ ಅಂಗಾಂಗಗಳು ರೈಲು ಹಳಿ ಬಳಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಅಲ್ಲದೇ ಕುರಿಗಳು ಕೂಡ ಸ್ಥಳದಲ್ಲಿಯೇ ಮೃತಪಟ್ಟಿವೆ.

ವಿಜಯನಗರ: ಗೂಡ್ಸ್ ರೈಲಿಗೆ ಸಿಲುಕಿ ಕುರಿಗಾಹಿ ಮತ್ತು 18 ಕುರಿಗಳ ದಾರುಣ ಸಾವು
ರೈಲು ಡಿಕ್ಕಿ ಹೊಡೆದು ದುರ್ಘಟನೆ
Follow us
TV9 Web
| Updated By: preethi shettigar

Updated on:Oct 25, 2021 | 12:34 PM

ವಿಜಯನಗರ: ಚಲಿಸುವ ಗೂಡ್ಸ್ ರೈಲಿಗೆ ಸಿಲುಕಿ ಓರ್ವ ಕುರಿಗಾಹಿ ಮತ್ತು 18 ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದ ರೈಲ್ವೆ ಗೇಟ್ ಬಳಿ ಸಂಭವಿಸಿದೆ. ಚೌಟಗಿ ರಮೇಶ್ (24) ಮೃತಪಟ್ಟ ಕುರಿಗಾಹಿ. ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಿಂದ 18ಕ್ಕೂ ಹೆಚ್ಚು ಕುರಿಗಳನ್ನು ತಂದು ಮತ್ತಿಹಳ್ಳಿ ಕ್ರಾಸ್ ಬಳಿಯ ರೈಲು ಹಳಿಗಳನ್ನು ದಾಟಿಸಿ, ಮೇಯಿಸಲೇಂದು ಕುರಿಗಾಹಿ ಚೌಟಗಿ ರಮೇಶ್ ತೆರಳುತ್ತಿರುವಾಗ ರೈಲು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ರೈಲು ಡಿಕ್ಕಿ ಹೊಡೆದ ರಭಸಕ್ಕೆ ಕುರಿಗಾಹಿ ಚೌಟಗಿ ರಮೇಶ ಅವರ ದೇಹ ತುಂಡು ತಂಡಾಗಿ ಅಂಗಾಂಗಗಳು ರೈಲು ಹಳಿ ಬಳಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಅಲ್ಲದೇ ಕುರಿಗಳು ಕೂಡ ಸ್ಥಳದಲ್ಲಿಯೇ ಮೃತಪಟ್ಟಿವೆ.

ಬೆಂಗಳೂರು: ಬೈಕ್‌ಗೆ ಟಿಪ್ಪರ್ ಡಿಕ್ಕಿ; ತಾಯಿ, ಮಗು ಸ್ಥಳದಲ್ಲೇ ಸಾವು ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು ತಾಯಿ, ಮಗು ಸ್ಥಳದಲ್ಲೇ ಮೃತಪಟ್ಟ ಮನಕಲಕುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ. ತಾಯಿ ಶ್ರೀದೇವಿ(21) ಮತ್ತು ಒಂದು ವರ್ಷದ ಮಗು ದೀಕ್ಷಿತ ಮೃತ ದುರ್ದೈವಿಗಳು.

ಕೆ.ಆರ್. ಪುರಂನಿಂದ ತಮಿಳುನಾಡಿನ ಧರ್ಮಪುರಿಗೆ ಬುಲೆಟ್ನಲ್ಲಿ ತೆರಳುತ್ತಿದ್ದ ವೇಳೆ ಮಾರತ್ತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಟಿಪ್ಪರ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಬೈಕ್ನ ಹಿಂಬದಿ ಕುಳಿತಿದ್ದ ತಾಯಿ-ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಶಿವಕುಮಾರ್ಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಎಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ: ಆಯತಪ್ಪಿ ಬಿದ್ದ ಬೈಕ್ ಸವಾರ ಸಾವು ರಸ್ತೆಯಲ್ಲಿ ಬಿದ್ದಿದ್ದ ಗುಂಡಿಯಿಂದ ಆಯತಪ್ಪಿ ಬೈಕ್ ಸವಾರ ಕೆಳಗೆ ಬಿದ್ದಿದ್ದು ಬೈಕ್ ಬೀಳುತ್ತಿದ್ದಂತೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕೂದಲೆಳೆ‌ ಅಂತರದಲ್ಲಿ ಬೈಕ್ ಸವಾರ ಪಾರಾದ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯಲ್ಲಿ ನಡೆದಿದೆ. ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಪ್ರತಿನಿತ್ಯ ಸಾವಿರಾರು ವಾಹನಗಳು ಓಡಾಡುವ ಪ್ರಮುಖ ರಸ್ತೆಯಲ್ಲಿ ಬೃಹತ್ ಗುಂಡಿ ಬಿದ್ದಿದ್ದು ಗುಂಡಿ ಮುಚ್ಚದ ನಗರಸಭೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಗಾಂಜಾ ಸೇದಲು ಬೆಂಕಿ ಪೊಟ್ಟಣ ನೀಡದಿದ್ದಕ್ಕೆ ಹಲ್ಲೆ; ಕುರಿಗಾಹಿಗಳನ್ನು ಮನಬಂದಂತೆ ಥಳಿಸಿದ ಪುಂಡರು

ನೀರಿನ ಹೊಂಡದಲ್ಲಿ ಕಾಲು ಜಾರಿ ಬಿದ್ದಿದ್ದ ಕುರಿಗಾಹಿ ಬಾಲಕನ ಜೀವ ಉಳಿಸಿ ತಾನು ಬಲಿಯಾದ 16 ವರ್ಷದ ಬಾಲಕಿ

Published On - 12:14 pm, Mon, 25 October 21

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ