7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಯುವ ಮುಖಂಡ ಅರೆಸ್ಟ್
ಬಿಜೆಪಿ ಯುವ ಮುಖಂಡನ ವಿರುದ್ಧ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದ್ದು, ಸಂಬಂಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಜಿಲ್ಲಾ ಪಂಚಾಯಿತಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮುಖಂಡನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಬಳ್ಳಾರಿ, (ಮಾರ್ಚ್ 19): ಬಿಜೆಪಿ ಯುವ ಮುಖಂಡನ(siruguppa BJP Youth Leader) ಮೇಲೆ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿ(Bellary) ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಿಜೆಪಿ ಯುವ ಮುಖಂಡ ದೇವು ನಾಯಕ ಎನ್ನುವಾತ ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ (pocso Case) ದಾಖಲಾಗಿದ್ದು, ಪೊಲೀಸರು ದೇವು ನಾಯಕನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಶಾಸಕರ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ಯುವಕ
ದೇವು ನಾಯಕ ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದಾನೆ. ಅಲ್ಲದೇ ರಾಜ್ಯ ಹಾಗೂ ರಾಷ್ಟ್ರ ನಾಯಕರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಅವುಗಳನ್ನು ಸಾಮಾಜಿಕ ಜಾತಾಲತಾಣಗಳಲ್ಲಿ ಹಂಚಿಕೊಂಡಿದ್ದಾನೆ. ಇದೀಗ ಮಣ್ಣು ತಿನ್ನುವ ಕೆಲಸ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ.