ಸೋದರಿಯರ ಮದುವೆ ಸಾಲ ತೀರಿಸಲು ಶಾಲೆಯ ಹಣ ಬಳಸಿಕೊಂಡ ಮುಖ್ಯ ಶಿಕ್ಷಕ; 36 ಲಕ್ಷ ರೂ ಲೂಟಿ, ಸೈಬರ್ ಕ್ರೈಂ ಠಾಣೆಗೆ ದೂರು

ಕಳೆದ ಒಂದು ವರ್ಷದಿಂದ ಶಾಲೆಯ ಬ್ಯಾಂಕ್ ಖಾತೆಯಲ್ಲಿದ್ದ ಇಡುಗಂಟು ( ಫಿಕ್ಸೆಡ್ ಡಿಪಾಜಿಟ್ ) ಸೆಲ್ಫ್ ಚೆಕ್ ಮೂಲಕ ಖಾತೆಯಲ್ಲಿದ್ದ ಹಣವನ್ನು ಮಹಮ್ಮದ್ ಪಿರಾನಾ ಆಗಾಗ್ಗೆ ಡ್ರಾ ಮಾಡಿಕೊಳ್ಳುತ್ತಲೇ ಬಂದಿದ್ದರು. ಕಳೆದ ಎರಡು ದಿನಗಳ ಹಿಂದೆ ಶಾಲೆಯ ಶಿಕ್ಷಕರೊಬ್ಬರಿಗೆ ಬ್ಯಾಂಕ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಸೋದರಿಯರ ಮದುವೆ ಸಾಲ ತೀರಿಸಲು ಶಾಲೆಯ ಹಣ ಬಳಸಿಕೊಂಡ ಮುಖ್ಯ ಶಿಕ್ಷಕ; 36 ಲಕ್ಷ ರೂ ಲೂಟಿ, ಸೈಬರ್ ಕ್ರೈಂ ಠಾಣೆಗೆ ದೂರು
ಮುನ್ಸಿಪಲ್ ಹೈಸ್ಕೂಲ್ ಮುಖ್ಯ ಶಿಕ್ಷಕ ಮಹಮ್ಮದ್ ಪಿರಾನಾ
Follow us
TV9 Web
| Updated By: ಆಯೇಷಾ ಬಾನು

Updated on:Mar 18, 2022 | 4:04 PM

ಬಳ್ಳಾರಿ: ಜಿಲ್ಲೆಯ ಮುನ್ಸಿಫಲ್ ಹೈಸ್ಕೂಲ್ನ ಮುಖ್ಯ ಶಿಕ್ಷಕರೊಬ್ಬರು ಶಾಲೆ ಹೆಸರಿನ ಖಾತೆಯಲ್ಲಿದ್ದ 36.64 ಲಕ್ಷ ರೂಪಾಯಿಗಳನ್ನು ವೈಯಕ್ತಿಕ ಕೆಲಸಕ್ಕೆ ಬಳಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಮುಖ್ಯ ಶಿಕ್ಷಕರೇ ಹಣ ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಮುನ್ಸಿಪಲ್ ಹೈಸ್ಕೂಲ್ ಮುಖ್ಯ ಶಿಕ್ಷಕ ಮಹಮ್ಮದ್ ಪಿರಾನಾ ಎಂಬುವರು ಹಣ ದುರುಪಯೋಗ ಮಾಡಿಕೊಂಡ ಮುಖ್ಯಶಿಕ್ಷಕರಾಗಿದ್ದು ಶಿಕ್ಷಕನನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ಒಂದು ವರ್ಷದಿಂದ ಶಾಲೆಯ ಬ್ಯಾಂಕ್ ಖಾತೆಯಲ್ಲಿದ್ದ ಇಡುಗಂಟು ( ಫಿಕ್ಸೆಡ್ ಡಿಪಾಜಿಟ್ ) ಸೆಲ್ಫ್ ಚೆಕ್ ಮೂಲಕ ಖಾತೆಯಲ್ಲಿದ್ದ ಹಣವನ್ನು ಮಹಮ್ಮದ್ ಪಿರಾನಾ ಆಗಾಗ್ಗೆ ಡ್ರಾ ಮಾಡಿಕೊಳ್ಳುತ್ತಲೇ ಬಂದಿದ್ದರು. ಕಳೆದ ಎರಡು ದಿನಗಳ ಹಿಂದೆ ಶಾಲೆಯ ಶಿಕ್ಷಕರೊಬ್ಬರಿಗೆ ಬ್ಯಾಂಕ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ನಂತರ ನಿವೃತ್ತ ಪ್ರಾಚಾರ್ಯರೊಬ್ಬರು ಹಣ ದುರ್ಬಳಕೆ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಣ ದುರ್ಬಳಕೆ ಆಗಿರುವುದನ್ನ ಪತ್ತೆ ಮಾಡಿದ್ದಾರೆ.

ತಪ್ಪೊಪ್ಪಿಕೊಂಡ ಮುಖ್ಯ ಶಿಕ್ಷಕ ಮುನ್ಸಿಫಲ್ ಹೈಸ್ಕೂಲ್ ಗೆ 2020 ಮೇ 13 ರಿಂದ ಶಾಲೆ ಪ್ರಾಂಶುಪಾಲರಾಗಿ ನೇಮಕವಾದ್ದ ಮಹಮ್ಮದ್ ಪಿರಾನಾ ಶಾಲೆಯ ಖಾತೆಯಲ್ಲಿದ್ದ 36.64 ಲಕ್ಷ ರೂಪಾಯಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಶಾಲೆಯ ಖಾತೆಯಲ್ಲಿ ಸದ್ಯ 64 ರೂಪಾಯಿ ಮಾತ್ರ ಉಳಿದಿದ್ದು. ಈ ಹಣವನ್ನ ಕುಟುಂಬ ನಿರ್ವಹಣೆ ಹಾಗೂ 6 ಸಹೋದರಿಯರ ಮದುವೆಗೆ ಮಾಡಿದ್ದ ಸಾಲ ಹಾಗೂ ಬಡ್ಡಿ ಕಟ್ಟಲು ಹಣ ಬಳಕೆ ಮಾಡಿಕೊಂಡಿರುವುದಾಗಿ ಮುಖ್ಯ ಶಿಕ್ಷಕ ಮಹಮ್ಮದ್ ಪಿರಾನಾ ತಪ್ಪೊಪ್ಪಿಕೊಂಡಿದ್ದಾರೆ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಣ ಬಳಸಿಕೊಂಡಿರುವುದಾಗಿ ಒಪ್ಪಿಕೊಂಡು ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾರೆ.

ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಡಿಡಿಪಿಐಗೆ ವರದಿ ಸಲ್ಲಿಸಿದ್ದು ಮೇಲಧಿಕಾರಿಗಳ ಸೂಚನೆಯಂತೆ ಮುಖ್ಯಶಿಕ್ಷಕನ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಮುಖ್ಯಶಿಕ್ಷಕ ಇದೇ ಮುನ್ಸಿಪಲ್ ಕಾಲೇಜಿನಲ್ಲಿಯೇ ಪದವಿ ಪೂರ್ವ ಶಿಕ್ಷಣ ಮುಗಿಸಿದ್ದಾರೆ ಎಂಬುದು ಗಮನಾರ್ಹ. ನನಗೆ ಆರು ಜನ ಸಹೋದರಿಯರಿದ್ದು, ಅವರ ಮದುವೆ ಮಾಡಲು ಮಾಡಿದ ಸಾಲ ತೀರಿಸಲು ಕಷ್ಟವಾದ ಹಿನ್ನೆಲೆಯಲ್ಲಿ ಶಾಲೆಯಲ್ಲಿದ್ದ ಇಡುಗಂಟನ್ನು ಬಳಸಿಕೊಂಡಿದ್ದೇನೆ ಎಂದು ಆರೋಪಿ ಮಹಮ್ಮದ್ ಪಿರಾನಾ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಸೈಬರ್ ಕ್ರೈಂ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಮಲ ಹೊರುವ ಪದ್ಧತಿ ಇನ್ನೂ ಇದೆ, ಮತ್ತೆ ಹೇಗೆ ಸ್ವಚ್ಛ ಭಾರತ್ ಎಂದು ಮಾತಾಡುತ್ತಾರೆ: ಬರಗೂರು ರಾಮಚಂದ್ರಪ್ಪ ಆಕ್ರೋಶ

Bhagavad Gita: ಶಾಲೆಗಳಲ್ಲಿ ಭಗವಗ್ದೀತೆ ಬೋಧನೆ -ಮಾಜಿ ಸಿಎಂ ಕುಮಾರಸ್ವಾಮಿ ಅಪಸ್ವರ, ಶಿಕ್ಷಣಕ್ಕೆ ಒತ್ತು ನೀಡಿ ಎಂದರು

Published On - 4:02 pm, Fri, 18 March 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ