ಹಂಪಿ ಸಮೀಪ ತಲೆಯೆತ್ತಲಿದೆ ಪ್ರವಾಸೋದ್ಯಮ ಇಲಾಖೆಯಿಂದ ವಿಶ್ವ ದರ್ಜೆಯ 100 ಕೊಠಡಿಗಳ ತ್ರೀಸ್ಟಾರ್ ಹೋಟಲ್! ವಿವರ ಇಲ್ಲಿದೆ

ಈ ವಿಶ್ವ ದರ್ಜೆಯ ತ್ರಿಸ್ಟಾರ್ ಹೋಟೆಲ್‍ನಲ್ಲಿ 100 ಕೊಠಡಿಗಳಿರಲಿದ್ದು ಅವುಗಳಲ್ಲಿ 96 ಡಿಲಕ್ಸ್ ಕೊಠಡಿಗಳು, 4 ಸೂಟ್ ರೂಮ್ಸ್, ಪಾರ್ಕಿಂಗ್, ಜಿಮ್, ಓಪನ್ ರೆಸ್ಟೋರೆಂಟ್, ಸ್ಪಾ, ಈಜುಕೊಳ ಸೇರಿದಂತೆ ಇತರೆ ಸೌಲಭ್ಯಗಳು ಒಳಗೊಂಡಿರಲಿವೆ. ಕಮಲಾಪುರ ಪಟ್ಟಣದ ಅಟಲ್ ಬಿಹಾರಿ ವಾಜಪೇಯಿ ಜೂಯಲಾಜಿಕಲ್ ಪಾರ್ಕ್ ಹತ್ತಿರದ 15 ಎಕರೆ ಜಾಗದಲ್ಲಿ ಈ ವಿಶ್ವ ದರ್ಜೆಯ ತ್ರೀಸ್ಟಾರ್ ಹೋಟಲ್ ತಲೆಎತ್ತಲಿದೆ.

ಹಂಪಿ ಸಮೀಪ ತಲೆಯೆತ್ತಲಿದೆ ಪ್ರವಾಸೋದ್ಯಮ ಇಲಾಖೆಯಿಂದ ವಿಶ್ವ ದರ್ಜೆಯ 100 ಕೊಠಡಿಗಳ ತ್ರೀಸ್ಟಾರ್ ಹೋಟಲ್! ವಿವರ ಇಲ್ಲಿದೆ
ಹಂಪಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Apr 20, 2022 | 9:27 PM

ವಿಜಯನಗರ: ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪಿ ಸಮೀಪದ ಕಮಲಾಪುರದಲ್ಲಿ 28.20 ಕೋಟಿ ರೂ. ವೆಚ್ಚದಲ್ಲಿ ವಿಶ್ವ ದರ್ಜೆಯ ತ್ರಿಸ್ಟಾರ್ ಹೋಟಲ್ ಶೀಘ್ರದಲ್ಲಿಯೇ ತಲೆ ಎತ್ತಲಿದೆ. ಇನ್ಮುಂದೆ ವಿಶ್ವ ಪರಂಪರೆಯ ತಾಣ ಹಾಗೂ ಅದರ ಸುತ್ತಮುತ್ತಲಿನ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಆಗಮಿಸುವ ಜನರಿಗೆ ತಂಗುವ ಸಮಸ್ಯೆಗೆ ಇತಿಶ್ರೀ ಬೀಳಲಿದ್ದು, ಸಕಲ ಸೌಕರ್ಯವುಳ್ಳ ತ್ರಿಸ್ಟಾರ್ ಹೋಟಲ್ ಪ್ರವಾಸಿಗರಿಗೆ ಅವಶ್ಯಕತೆಗಳನ್ನು ಪೂರೈಸಲಿದೆ.

ಈ ವಿಶ್ವ ದರ್ಜೆಯ ತ್ರಿಸ್ಟಾರ್ ಹೋಟೆಲ್‍ನಲ್ಲಿ 100 ಕೊಠಡಿಗಳಿರಲಿದ್ದು ಅವುಗಳಲ್ಲಿ 96 ಡಿಲಕ್ಸ್ ಕೊಠಡಿಗಳು, 4 ಸೂಟ್ ರೂಮ್ಸ್, ಪಾರ್ಕಿಂಗ್, ಜಿಮ್, ಓಪನ್ ರೆಸ್ಟೋರೆಂಟ್, ಸ್ಪಾ, ಈಜುಕೊಳ ಸೇರಿದಂತೆ ಇತರೆ ಸೌಲಭ್ಯಗಳು ಒಳಗೊಂಡಿರಲಿವೆ. ಕಮಲಾಪುರ ಪಟ್ಟಣದ ಅಟಲ್ ಬಿಹಾರಿ ವಾಜಪೇಯಿ ಜೂಯಲಾಜಿಕಲ್ ಪಾರ್ಕ್ ಹತ್ತಿರದ 15 ಎಕರೆ ಜಾಗದಲ್ಲಿ ಈ ವಿಶ್ವ ದರ್ಜೆಯ ತ್ರೀಸ್ಟಾರ್ ಹೋಟಲ್ ತಲೆಎತ್ತಲಿದೆ.

ತ್ರೀಸ್ಟಾರ್ ಹೋಟೆಲ್ ನಿರ್ಮಿಸಲು ಪ್ರವಾಸೋದ್ಯಮ ಇಲಾಖೆ ಉದ್ದೇಶಿಸಿದೆ: ಕಟ್ಟಡ ನಿರ್ಮಾಣಕ್ಕೆ ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ ಸಚಿವ ಆನಂದ ಸಿಂಗ್ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಆನಂದ ಸಿಂಗ್ ಅವರು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಮತ್ತು ವಿಶ್ವ ಪಾರಂಪರಿಕ ತಾಣವಾಗಿರುವ ಹಂಪಿಗೆ ಭೇಟಿ ನೀಡುವ ಪ್ರವಾಸಿಗರು, ತುಂಗಾಭದ್ರಾ ಅಣೆಕಟ್ಟು, ಆನೆಗುಂದಿ, ಅಂಜನಾದ್ರಿ ಬೆಟ್ಟ, ಪಂಪಸರೋವರ ಹಾಗೂ ಇತರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಈ ತ್ರೀಸ್ಟಾರ್ ಹೋಟೆಲ್ ನಿರ್ಮಿಸಲು ಪ್ರವಾಸೋದ್ಯಮ ಇಲಾಖೆ ಉದ್ದೇಶಿಸಿದೆ. 12ರಿಂದ 18 ತಿಂಗಳೊಳಗೆ ಈ ತ್ರೀಸ್ಟಾರ್ ಹೋಟಲ್ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

ರಾಜ್ಯದಲ್ಲಿ 04 ಸ್ಥಳಗಳಲ್ಲಿ ಒಟ್ಟಾರೆ ರೂ. 83.97 ಕೋಟಿಗಳ ಅಂದಾಜು ವೆಚ್ಚದಲ್ಲಿ ವಿಶ್ವ ದರ್ಜೆಯ ತ್ರಿಸ್ಟಾರ್ ಹೋಟೆಲ್ ನಿರ್ಮಾಣ ಮಾಡಲು ಸರ್ಕಾರವು ಅನುಮೋದನೆ ನೀಡಿದೆ. ಅದರಂತೆ 20.71 ಕೋಟಿ ರೂ.ವೆಚ್ಚದಲ್ಲಿ ಬೇಲೂರುನಲ್ಲಿ 75 ಕೊಠಡಿಗಳ ವಿಶ್ವ ದರ್ಜೆಯ ತ್ರಿಸ್ಟಾರ್ ಹೋಟೆಲ್ ನಿರ್ಮಾಣ, 18.32 ಕೋಟಿ ರೂ.ವೆಚ್ಚದಲ್ಲಿ ಬಾದಾಮಿಯಲ್ಲಿ 75 ಕೊಠಡಿಗಳ ತ್ರಿಸ್ಟಾರ್ ಹೋಟೆಲ್ ನಿರ್ಮಾಣ, 16.74 ಕೋಟಿ ವೆಚ್ಚದಲ್ಲಿ ವಿಜಯಪುರದಲ್ಲಿ 75 ಕೊಠಡಿಗಳ ತ್ರಿಸ್ಟಾರ್ ಹೋಟೆಲ್ ನಿರ್ಮಾಣ ಮತ್ತು ಹಂಪಿಯಲ್ಲಿ ರೂ. 28.20 ಕೋಟಿ ವೆಚ್ಚದಲ್ಲಿ 100 ಕೊಠಡಿಗಳ ಸುಸಜ್ಜಿತ ತ್ರಿಸ್ಟಾರ್ ಹೋಟೆಲ್ ನಿರ್ಮಾಣ ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು. ಈಗಾಗಲೇ ಬಾದಾಮಿ, ಬೇಲೂರು ಮತ್ತು ವಿಜಯಪುರ ಪ್ರವಾಸಿ ತಾಣದಲ್ಲಿ 03 ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ಟಿ. ವೆಂಕಟೇಶ್, ಅರಣ್ಯ ವಸತಿ ಮತ್ತು ವಿಹಾರಧಾಮ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಮನೋಜ್ ಕುಮಾರ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಜಿ.ಜಗದೀಶ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಡಾ. ಎಸ್. ತಿಪ್ಪೇಸ್ವಾಮಿ, ಕಮಲಾಪುರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಗೇಶ ಮತ್ತಿತರರು ಇದ್ದರು. -ವೀರಪ್ಪ ದಾನಿ, ಟಿವಿ9, ಬಳ್ಳಾರಿ

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ