ಬಳ್ಳಾರಿ: ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು(Students) ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ತಡರಾತ್ರಿ ಸಂಭವಿಸಿದೆ. ಎಮ್ಮಿಗನೂರಿನ ಕನಕರಾಜು(19), ಮುರುಡಿ ಗ್ರಾಮದ ಶಂಕರ(18), ಸಂಡೂರು ತಾಲೂಕಿನ ನಾಗೇನಹಳ್ಳಿಯ ಹೊನ್ನೂರ(22) ಮೃತ ದುರ್ದೈವಿಗಳು.
ಮಧ್ಯರಾತ್ರಿ 2 ಗಂಟೆ ಸುಮಾರಿಗೆ ರಸ್ತೆ ಕ್ರಾಸ್ ಮಾಡುವ ವೇಳೆ ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಎಸ್ಸಿ, ಎಸ್ಟಿ ಹಾಸ್ಟಲ್ ವಿದ್ಯಾರ್ಥಿಗಳು. ಇವರು 2 ದಿನದ ಹಿಂದೆ ಹಾಸ್ಟಲ್ ಬಿಟ್ಟು ಹೋಗಿದ್ದರು. ಘಟನೆ ಸಂಬಂಧ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿಗಳು ಮಧ್ಯರಾತ್ರಿ ಹಲಕುಂದಿ ಬಳಿ ಯಾಕೆ ಹೋಗಿದ್ದರು ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಚುರುಕುಗೊಂಡ ಡಬಲ್ ಮರ್ಡರ್ ಪ್ರಕರಣದ ತನಿಖೆ; ಆರೋಪಿಗಳ ಬಂಧನಕ್ಕೆ ವಿಶೇಷ ತಂಡಗಳ ರಚನೆ
ಟಾಟಾ ಏಸ್ಗೆ ಬೈಕ್ ಡಿಕ್ಕಿ ಸವಾರ ಗಂಭಿರ ಗಾಯ
ರಾಮನಗರ ತಾಲೂಕಿನ ಮಾದಾಪುರ ಗ್ರಾಮದ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಫಘಾತ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುವಾಗ ಟಾಟಾ ಏಸ್ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಡಿಕ್ಕಿ ರಭಸಕ್ಕೆ ಬೈಕ್ ಹೊತ್ತಿ ಉರಿದಿದೆ. ಗಾಯಾಳು ಬೈಕ್ ಸವಾರ ರಾಮನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಬೈಕ್ಗೆ ಹೊತ್ತಿಕೊಂಡಿದ್ದ ಬೆಂಕಿ ನಂದಿಸಿದ್ದಾರೆ. ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗದು ಚಿನ್ನ ಕದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಚಿತ್ರದುರ್ಗ ಪೊಲೀಸ್
ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ಠಾಣೆ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿದ್ದಾರೆ. ಹೊಸದುರ್ಗ ತಾಲೂಕಿನ ಕನ್ನಾಗುಂದಿ ಗ್ರಾಮದ ಈರಪ್ಪ, ಚಿಕ್ಕಮಗಳೂರು ಮೂಲದ ಕಿರಣ್ ಬಂಧಿತ ಆರೋಪಿಗಳು. ಬಂಧಿತರಿಂದ 20 ಗ್ರಾಂ ಚಿನ್ನ, 25 ಸಾವಿರ ನಗದು ಜಪ್ತಿ ಮಾಡಲಾಗಿದೆ. ಈ ಆರೋಪಿಗಳು ಹೊಸದುರ್ಗ ಸೇರಿ ಹಲವೆಡೆ ಮನೆಬೀಗ ಮುರಿದು ಕಳ್ಳತನ ಮಾಡಿದ್ದರು. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:11 am, Mon, 19 December 22