ಶಾಸಕರ ಕಚೇರಿ ತೆರವು; ಬಯಸಿದ ಖಾತೆ ಸಿಗದೇ ರಾಜೀನಾಮೆ ನೀಡುವುದಾಗಿ ಒತ್ತಡ ಹಾಕುತ್ತಿದ್ದಾರೆಯೇ ಸಚಿವ ಆನಂದ್ ಸಿಂಗ್?

ಖಾತೆ ಬದಲಾವಣೆಗಾಗಿ ಬಿಗಿಪಟ್ಟು ವಿಜಯನಗರ ಕ್ಷೇತ್ರದ ಶಾಸಕ ಆನಂದ್‌ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ 2 ದಿನಗಳ ಗಡುವು ನೀಡಿದ್ದರು.

ಶಾಸಕರ ಕಚೇರಿ ತೆರವು; ಬಯಸಿದ ಖಾತೆ ಸಿಗದೇ ರಾಜೀನಾಮೆ ನೀಡುವುದಾಗಿ ಒತ್ತಡ ಹಾಕುತ್ತಿದ್ದಾರೆಯೇ ಸಚಿವ ಆನಂದ್ ಸಿಂಗ್?
ಆನಂದ್ ಸಿಂಗ್
Follow us
TV9 Web
| Updated By: guruganesh bhat

Updated on:Aug 10, 2021 | 9:32 PM

ಬಳ್ಳಾರಿ: ತಮಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ನೀಡಿರುವ ಕಾರಣ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ಹೊಸಪೇಟೆಯ ರಾಣಿಪೇಟೆ ನಿವಾಸದಲ್ಲಿದ್ದ ತಮ್ಮ ಶಾಸಕರ ಕಚೇರಿಯನ್ನು ತೆರವುಗೊಳಿಸಿದ್ದಾರೆ. ಖಾತೆ ಬದಲಾವಣೆಗಾಗಿ ಬಿಗಿಪಟ್ಟು ವಿಜಯನಗರ ಕ್ಷೇತ್ರದ ಶಾಸಕ ಆನಂದ್‌ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ 2 ದಿನಗಳ ಗಡುವು ನೀಡಿದ್ದರು. ತಮ್ಮ ಕಚೇರಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವ ಮೂಲಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂದೂ ಅವರು ಒತ್ತಡ ಹೇರಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬಯಸಿದ ಖಾತೆ ಸಿಗದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯೂ ಇದೆ ಎಂದು ಅವರ ಆಪ್ತಮೂಲಗಳು ತಿಳಿಸಿವೆ.

ಅಸಮಾಧಾನ ಹೊರ ಹಾಕಿರುವ ಅನಂದ್ ಸಿಂಗ್ ಕೇಳಿದ ಖಾತೆ ಏಕೆ ನೀಡಲಿಲ್ಲ ಅನ್ನೋದು ನನಗೆ ತಿಳಿಸಬೇಕು. ಸಿಎಂ ಬೊಮ್ಮಾಯಿರನ್ನು ಭೇಟಿಯಾಗಿ ಮನವಿ ಮಾಡುವೆ. ನನಗೆ ಅರ್ಹತೆ ಇಲ್ವಾ?, ನಾನು ಭ್ರಷ್ಟಾಚಾರ ಮಾಡಿದ್ದೀನಾ? ನನಗೆ ಸಾಮರ್ಥ್ಯ ಇಲ್ವಾ? ನಾನೇನು ಅನ್ ಫಿಟ್ ಇದೀನಾ? ಎಂದು ಕೇಳುವೆ. ಅವರು ನೀನು ನಾಲಾಯಕ್ ಅಂತ ಅನ್ನೋದನ್ನಾದ್ರೂ ಹೇಳಲಿ. ಸರ್ಕಾರ ಬರಲಿಕ್ಕೆ ಕಾರಣವಾದವರಲ್ಲಿ ನಾನೂ ಮೊದಲಿಗ. ಮೊದಲಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು ನಾನೇ. ನಾನು ರಾಜೀನಾಮೆ ನೀಡಿದಾಗ ಯಾರೂ ಕೊಟ್ಟಿರಲಿಲ್ಲ. ನಾನು ಕೇಳಿದ ಖಾತೆ ನನಗೆ ಮತ್ತು ಸಿಎಂಗೆ ಮಾತ್ರ ಗೊತ್ತು. ಕೇಳಿದ ಖಾತೆ ಸಿಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಅವರು ಬಳ್ಳಾರಿ ನಗರದಲ್ಲಿ ಎಚ್ಚರಿಕೆ ನೀಡಿದ್ದಾರೆ.

ನನ್ನ ನಡೆಯನ್ನೆಲ್ಲಾ ಸಿಎಂಗೆ ಹೇಳಿದ್ದೇನೆ. ನನ್ನ ಬೇಡಿಕೆ ಈಡೇರಿಲ್ಲ. ಬಿಜೆಪಿಗೆ ಸೇರಬೇಕಾದಾಗ ನಾನು ಇಟ್ಟಿದ್ದ ಬೇಡಿಕೆ ಈಡೇರಿಲ್ಲ. ಯಡಿಯೂರಪ್ಪ ಅವರೇ ಇದ್ದಿದ್ರೆ ನಾವು ಅದನ್ನ ಕೇಳುತ್ತಿರಲಿಲ್ಲ. ಮಂತ್ರಿ ಮಂಡಲ ಬದಲಾಗಿದ್ದಕ್ಕೆ ನಾವು ಕೇಳುತ್ತಿದ್ದೇವೆ. ಹೊರಗಡೆ ಯಾವುದನ್ನೂ ಮಾತನಾಡಬೇಡಿ ಎಂದು ಹೇಳಿದ್ದಾರೆ. ಯಾವುದೇ ನಿರ್ಧಾರವನ್ನ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ಎಲ್ಲಾ ಕೂಡ ಮುಖ್ಯಮಂತ್ರಿಯವರ ಕೈಯಲ್ಲಿ ಇದೆ. ಸಿಎಂ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ನನ್ನ ಬೇಡಿಕೆಯನ್ನೆಲ್ಲಾ ಸಿಎಂ ಮುಂದೆ ಇಟ್ಟಿದ್ದೇನೆ. ಯಾವಾಗ ತೀರ್ಮಾನ ತೆಗೆದುಕೊಳ್ತಾರಾ ನೋಡಬೇಕು. ಸದ್ಯಕ್ಕೆ ಮುಖ್ಯಮಂತ್ರಿ ಸಮಯವನ್ನ ಕೇಳಿದ್ದಾರೆ ಎಂದು  ಟಿವಿ9ಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: 

ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

ಚಿತ್ರೀಕರಣ ವೇಳೆ ನಿಯಮಗಳನ್ನು ಪಾಲಿಸುತ್ತಿಲ್ಲ, ಕಠಿಣ ನಿಯಮಗಳನ್ನು ಜಾರಿ ಮಾಡಿ ಶೀಘ್ರದಲ್ಲೇ ಆದೇಶ; ಸಿಎಂ ಬಸವರಾಜ ಬೊಮ್ಮಾಯಿ

(Tourism Minister Vijayapura MLA Anand Singh Clear of his office likely he pressuring to resign)

Published On - 9:17 pm, Tue, 10 August 21

ಕೇರಳದ ಸೀರೆ ತೊಟ್ಟು, ಸಂವಿಧಾನದ ಪುಸ್ತಕ ಹಿಡಿದು ಪ್ರಿಯಾಂಕಾ ಪ್ರಮಾಣವಚನ
ಕೇರಳದ ಸೀರೆ ತೊಟ್ಟು, ಸಂವಿಧಾನದ ಪುಸ್ತಕ ಹಿಡಿದು ಪ್ರಿಯಾಂಕಾ ಪ್ರಮಾಣವಚನ
ಖಾಲಿಯಿದ್ದಾಗೆಲ್ಲ ಇಬ್ರಾಹಿಂ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ: ಮಂಜುನಾಥ
ಖಾಲಿಯಿದ್ದಾಗೆಲ್ಲ ಇಬ್ರಾಹಿಂ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ: ಮಂಜುನಾಥ
‘ಬುರುಡೆ ಒಡೆಯುತ್ತೀನಿ’ ಎಂದ ರಜತ್​ಗೆ ಉಗ್ರಂ ಮಂಜು ಪ್ರತ್ಯುತ್ತರ
‘ಬುರುಡೆ ಒಡೆಯುತ್ತೀನಿ’ ಎಂದ ರಜತ್​ಗೆ ಉಗ್ರಂ ಮಂಜು ಪ್ರತ್ಯುತ್ತರ
ಊಟ ಮಾಡುವಾಗ ಮಾತನಾಡಬಾರದು ಯಾಕೆ? ಇಲ್ಲಿದೆ ಆಧ್ಯಾತ್ಮಿಕ ಹಿನ್ನೆಲೆ
ಊಟ ಮಾಡುವಾಗ ಮಾತನಾಡಬಾರದು ಯಾಕೆ? ಇಲ್ಲಿದೆ ಆಧ್ಯಾತ್ಮಿಕ ಹಿನ್ನೆಲೆ
ದಿನ ಭವಿಷ್ಯ: ಗುರು ಅನುಗ್ರಹದ ಈ ದಿನ ಯಾವ ರಾಶಿವರಿಗೆಲ್ಲ ಶುಭ ಫಲ ನೋಡಿ
ದಿನ ಭವಿಷ್ಯ: ಗುರು ಅನುಗ್ರಹದ ಈ ದಿನ ಯಾವ ರಾಶಿವರಿಗೆಲ್ಲ ಶುಭ ಫಲ ನೋಡಿ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ