AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಚ್ಚಿಬಿದ್ದ ಬಳ್ಳಾರಿ: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತನ ಬರ್ಬರ ಕೊಲೆ

ಬಳ್ಳಾರಿಯಲ್ಲಿ ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತ ನಬಿ ರಸೂಲ್ ರಿಸೆಪ್ಷನ್ ಮುಗಿದ ಕೆಲವೇ ಗಂಟೆಗಳಲ್ಲಿ ಬರ್ಬರವಾಗಿ ಕೊಲೆಯಾಗಿದ್ದಾರೆ. ರಾತ್ರಿ 11.30ರ ಸುಮಾರಿಗೆ ಸ್ನೇಹಿತ ಕರೆದ ಅಂತಾ ರಸೂಲ್​​ ಹೊರಹೋಗಿದ್ದರು. ಆದರೆ ಅವರು ರಾತ್ರಿ 2 ಗಂಟೆ ಆದ್ರೂ ಬಂದಿರಲಿಲ್ಲ. ಹೀಗಾಗಿ ಮನೆ ಸುತ್ತ ಪೋಷಕರು ಮತ್ತು ಸಂಬಂಧಿಕರು ಹುಡುಕಾಡಿದಾಗ ಮನೆಯಿಂದ 700 ಮೀಟರ್ ದೂರದಲ್ಲಿ ರಸೂಲ್ ಶವ ಪತ್ತೆಯಾಗಿದೆ.

ಬೆಚ್ಚಿಬಿದ್ದ ಬಳ್ಳಾರಿ: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತನ ಬರ್ಬರ ಕೊಲೆ
ನವ ವಿವಾಹಿತನ ಕೊಲೆImage Credit source: tv9 Kannada
ವಿನಾಯಕ ಬಡಿಗೇರ್​
| Edited By: |

Updated on:Jul 17, 2026 | 12:10 PM

Share

ಮುಖ್ಯಾಂಶಗಳು

  • ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತನ ಬರ್ಬರ ಕೊಲೆ
  • ಬಳ್ಳಾರಿ ನಗರದ ಬಟ್ಟಿ ಏರಿಯಾದಲ್ಲಿ ನಿನ್ನೆ ನಡೆದ ಘಟನೆ
  • ರಿಸೆಪ್ಷನ್ ಮುಗಿದ ಕೆಲವೇ ಹೊತ್ತಿನಲ್ಲಿ ಹೆಣವಾದ ಯುವಕ

ಬಳ್ಳಾರಿ, ಜುಲೈ 17: ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಳ್ಳಾರಿ ನಗರದ ಬಟ್ಟಿ ಏರಿಯಾದಲ್ಲಿ ನಿನ್ನೆ (ಜುಲೈ 16) ರಾತ್ರಿ ನಡೆದಿದೆ. ನಬಿ ರಸೂಲ್​​​ ಮೃತ ವ್ಯಕ್ತಿಯಾಗಿದ್ದು, ದುರ್ದೈವ ಅಂದರೆ ಮದುವೆಯ ರಿಸೆಪ್ಷನ್ ಕಾರ್ಯಕ್ರಮ ಮುಗಿದ ಕೆಲವೇ ಹೊತ್ತಿನಲ್ಲಿ ಇವರ ಉಸಿರು ನಿಂತಿದೆ. ರಾತ್ರಿ 11 ಗಂಟೆಗೆ ಮನೆಯಿಂದ ಹೊರಹೋಗಿದ್ದ ರಸೂಲ್​​​​ ಶವವಾಗಿ ಪತ್ತೆಯಾಗಿದ್ದಾರೆ.

ನಬಿ ರಸೂಲ್​​​​​ ವಿಚ್ಛೇದಿತ ಮಹಿಳೆಯೋರ್ವಳನ್ನು ಪ್ರೀತಿಸುತ್ತಿದ್ದು, 15 ದಿನಗಳ ಹಿಂದೆ ಆಕೆಯನ್ನು ಕರೆದೊಯ್ದಿದ್ದರು. ಕೆಲವು ದಿನಗಳ ಬಳಿಕ ಇಬ್ಬರು ಮನೆಗೆ ವಾಪಸ್ ಆಗಿದ್ದರು. ಈ ವೇಳೆ ರಸೂಲ್​​ ಸಂಬಂಧಿಕರು ಒಪ್ಪಿ ಇವರ ಮದುವೆ ಮಾಡಿಸಿದ್ದರು. ನಿನ್ನೆ ಮನೆಯಲ್ಲಿಯೇ ರಸೂಲ್​ ಮದುವೆ ನಡೆದಿತ್ತು. ಸಂಭ್ರಮದಿಂದ ಮದುವೆ ಮತ್ತು ರಿಸೆಪ್ಷನ್ ಕಾರ್ಯಕ್ರಮ ನಡೆದ ಕೆಲ ಸಮಯದ ಬಳಿಕ ಅಂದರೆ, ರಾತ್ರಿ 11.30ರ ಸುಮಾರಿಗೆ ಸ್ನೇಹಿತ ಕರೆದ ಅಂತಾ ರಸೂಲ್​​ ಹೊರಹೋಗಿದ್ದರು. ಆದರೆ ಅವರು ರಾತ್ರಿ 2 ಗಂಟೆ ಆದ್ರೂ ಬಂದಿರಲಿಲ್ಲ. ಹೀಗಾಗಿ ಮನೆ ಸುತ್ತ ಪೋಷಕರು ಮತ್ತು ಸಂಬಂಧಿಕರು ಹುಡುಕಾಡಿದಾಗ ಮನೆಯಿಂದ 700 ಮೀಟರ್ ದೂರದಲ್ಲಿ ರಸೂಲ್ ಶವ ಪತ್ತೆಯಾಗಿದೆ.

ಇದನ್ನೂ ಓದಿ: ಬಿ.ಸಿ.ರೋಡ್​ ಬಸ್​ ನಿಲ್ದಾಣದಲ್ಲಿ ತಲ್ವಾರ್​ನಿಂದ ಯುವತಿಯ ಹತ್ಯೆ! ಮಗಳನ್ನು ಕೊಂದು ತಂದೆಗೆ ಕರೆ ಮಾಡಿದ ಪಾಗಲ್ ಪ್ರೇಮಿ ಪೊಲೀಸರ ವಶ

ಮಹಿಳೆಯ ಪೋಷಕರಿಂದ ಈ ಮದುವೆಗೆ ವಿರೋಧವಿತ್ತು, ಆಕೆಯ ಸಂಬಂಧಿಕರು ಈ‌ ಹಿಂದೆ ರಸೂಲ್‌ಗೆ ವಾರ್ನಿಂಗ್ ಕೂಡ ಕೊಟ್ಟಿದ್ದರು ಎಂಬ ವಿಚಾರವೂ ಬಯಲಾಗಿದೆ. ಹೀಗಾಗಿ ವಿಚ್ಛೇದಿತ ಮಹಿಳೆಯನ್ನ ಮದುವೆಯಾಗಿದ್ದೇ ಕೊಲೆಗೆ ಕಾರಣವಾಗಿರಬುದೆಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಎಸ್​​​ಪಿ ಸುಮನ್.ಡಿ ಪನ್ನೇಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೌಲ್​ ಬಜಾರ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:49 am, Fri, 17 July 26

Follow Us
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!