AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿನಾಡಿನಲ್ಲಿ ಮಂಗಳಮುಖಿಯರ ಬಾಳಿಗೆ ಬೆಳಕಾಯ್ತು ಚಿಕ್ಕಿ ಘಟಕ

ಬಳ್ಳಾರಿ: ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶದಿಂದ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಪ್ರಥಮವಾಗಿ ಯೋಜನೆಯೊಂದನ್ನ ಜಾರಿಗೊಳಿಸಲಾಗಿದೆ. ಬಳ್ಳಾರಿ ಜಿಲ್ಲಾಧಿಕಾರಿ ಎಸ್​ಎಸ್ ನಕುಲ್ ಅವರ ಮಾರ್ಗದರ್ಶನದಂತೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಅಂಗನವಾಡಿ ಮಕ್ಕಳಿಗೆ ವಿತರಣೆ ಮಾಡಲು ಶೇಂಗಾ ಚಿಕ್ಕಿ ಘಟಕ ಆರಂಭಿಸಲಾಗಿದೆ. ಹೊಸಪೇಟೆ ರೇಣುಕಾ ಯಲ್ಲಮ್ಮ ಟ್ರಾನ್ಸ್​ಜೆಂಡರ್​ ಸ್ವಸಹಾಯ ಸಂಘದ ಶೇಂಗಾ ಚಿಕ್ಕಿ ಘಟಕವನ್ನು ಹೊಸಪೇಟೆ ನಗರದಲ್ಲಿ ಪ್ರಾರಂಭಿಸಲಾಗಿದೆ. ಚಿಕ್ಕಿ ಘಟಕ ಆರಂಭ: ರಾಜ್ಯ ಮಹಿಳಾ ಅಭಿವೃದ್ಧಿ […]

ಗಣಿನಾಡಿನಲ್ಲಿ ಮಂಗಳಮುಖಿಯರ ಬಾಳಿಗೆ ಬೆಳಕಾಯ್ತು ಚಿಕ್ಕಿ ಘಟಕ
ಸಾಧು ಶ್ರೀನಾಥ್​
| Edited By: |

Updated on:Jun 10, 2020 | 7:26 PM

Share

ಬಳ್ಳಾರಿ: ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶದಿಂದ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಪ್ರಥಮವಾಗಿ ಯೋಜನೆಯೊಂದನ್ನ ಜಾರಿಗೊಳಿಸಲಾಗಿದೆ.

ಬಳ್ಳಾರಿ ಜಿಲ್ಲಾಧಿಕಾರಿ ಎಸ್​ಎಸ್ ನಕುಲ್ ಅವರ ಮಾರ್ಗದರ್ಶನದಂತೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಅಂಗನವಾಡಿ ಮಕ್ಕಳಿಗೆ ವಿತರಣೆ ಮಾಡಲು ಶೇಂಗಾ ಚಿಕ್ಕಿ ಘಟಕ ಆರಂಭಿಸಲಾಗಿದೆ. ಹೊಸಪೇಟೆ ರೇಣುಕಾ ಯಲ್ಲಮ್ಮ ಟ್ರಾನ್ಸ್​ಜೆಂಡರ್​ ಸ್ವಸಹಾಯ ಸಂಘದ ಶೇಂಗಾ ಚಿಕ್ಕಿ ಘಟಕವನ್ನು ಹೊಸಪೇಟೆ ನಗರದಲ್ಲಿ ಪ್ರಾರಂಭಿಸಲಾಗಿದೆ.

ಚಿಕ್ಕಿ ಘಟಕ ಆರಂಭ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಸಾಲ ಸೌಲಭ್ಯ ಪಡೆದು ಅಂಗನವಾಡಿ ಮಕ್ಕಳಿಗೆ ಶೇಂಗಾ ಚಿಕ್ಕಿ ತಯಾರಿಸುವ ಘಟಕವನ್ನ ಆರಂಭಿಸಲಾಗಿದೆ. ಈ ಮೂಲಕ ಜಿಲ್ಲೆಯ ಕೆಲ ಮಂಗಳಮುಖಿಯರು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಹೊಸಪೇಟೆಯಲ್ಲಿರುವ 300 ಮಂಗಳಮುಖಿಯರ ಪೈಕಿ 12 ಜನರನ್ನ ಗುರುತಿಸಿ ಶ್ರೀ ರೇಣುಕಾ ಎಲ್ಲಮ್ಮ ಟ್ರಾನ್ಸ್​ಜೆಂಡರ್ ಸ್ವಸಹಾಯ ಸಂಘ ರಚಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಗ್ರಾಮಾಂತರ ಸ್ತ್ರೀ ಶಕ್ತಿ ಒಕ್ಕೂಟದ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2 ಲಕ್ಷ ಸಾಲ ಸೌಲಭ್ಯ ನೀಡಲಾಗಿದೆ. ಇನ್ನೂ ಶೇಂಗಾ ಚಿಕ್ಕಿ ಘಟಕ ಆರಂಭ ಮಾಡುವ ಮುನ್ನ 15 ದಿನಗಳ ಕಾಲ ಎಲ್ಲಾ ಸದಸ್ಯರಿಗೆ ಸೂಕ್ತ ತರಬೇತಿ ನೀಡಲಾಗಿದೆ.

ಅಪೌಷ್ಠಿಕ ನಿವಾರಿಸುವಲ್ಲಿ ಶೇಂಗಾ ಚಿಕ್ಕಿ ಪ್ರಮುಖ ಪಾತ್ರ: ಹೊಸಪೇಟೆ ತಾಲೂಕಿನಲ್ಲಿ 385 ಅಂಗನವಾಡಿ ಕೇಂದ್ರಗಳಿದ್ದು, ಈ ಕೇಂದ್ರಗಳಿಗೆ ಹಿಂದೆ ಶೇಂಗಾ ಮತ್ತು ಬೆಲ್ಲದ ಉಂಡೆ ನೀಡಲಾಗುತ್ತಿತ್ತು. ಈಗ ಇದರ ಬದಲಾಗಿ 11 ಗ್ರಾಂ ಮಕ್ಕಳಿಗೆ ಹಾಗೂ 15ಗ್ರಾಂ ಗರ್ಭಿಣಿ, ಬಾಣಂತಿ ಮಹಿಳೆಯರಿಗೆ ನೀಡಲಾಗುತ್ತಿದೆ. ಪ್ರತಿ ತಿಂಗಳು 7 ಲಕ್ಷ ಚಿಕ್ಕಿ ಬೇಡಿಕೆ ಇದೆ. ಆದರೆ ಪ್ರತಿ ದಿನ ಮಂಗಳಮುಖಿಯರು 4 ಸಾವಿರ ಚಿಕ್ಕಿ ತಯಾರು ಮಾಡುತ್ತಿದ್ದು, ಈ ಪ್ರಮಾಣವನ್ನ ಮತ್ತಷ್ಟು ಹೆಚ್ಚು ಮಾಡಲು ಮುಂದಾಗಿದ್ದಾರೆ. ಅಪೌಷ್ಠಿಕ ನಿವಾರಿಸುವಲ್ಲಿ ಶೇಂಗಾ ಚಿಕ್ಕಿ ಪ್ರಮುಖ ಪಾತ್ರ ವಹಿಸುತ್ತಿದೆ. ಜೊತೆಗೆ ಮಂಗಳಮುಖಿಯರು ಸ್ವಾವಲಂಬಿಗಳಾಗಿ ಜೀವನ ಸಾಗಿಸಬಹುದು ಅನ್ನೋ ದೃಷ್ಟಿಯಿಂದ ಜಿಲ್ಲಾಡಳಿತ ಇಂತಹ ಯೋಜನೆಯನ್ನ ಜಾರಿಗೊಳಿಸಿದೆ.

ರಾಜ್ಯದಲ್ಲಿಯೇ ಮೊದಲ ಪ್ರಯೋಗ: ಲಿಂಗತ್ವ ಅಲ್ಪಸಂಖ್ಯಾತರನ್ನ ಸಮಾಜದ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ ಜಿಲ್ಲಾಡಳಿತ ಕೈಗೊಂಡ ಈ ಯೋಜನೆ ರಾಜ್ಯದಲ್ಲಿಯೇ ಮೊದಲ ಪ್ರಯೋಗವಾಗಿದೆ.ಇನ್ನೂ ಈ ಹಿಂದೆ ಬಳ್ಳಾರಿಯಲ್ಲಿ ದಮನಿತ ಮಹಿಳೆರಿಗಾಗಿ ಚಿಕ್ಕಿ ಘಟಕ ಆರಂಭಿಸಿ ರಾಜ್ಯದಲ್ಲಿಯೇ ಗಮನ ಸೆಳೆದಿದ್ದ ಬಳ್ಳಾರಿ ಜಿಲ್ಲಾಡಳಿತ ಈಗ ಮಂಗಳಮುಖಿಯರಿಗೂ ಚಿಕ್ಕಿ ಘಟಕ ತಯಾರಿಸಿ ಕೊಡುವ ಮೂಲಕ ಮತ್ತೊಮ್ಮೆ ಪ್ರಶಂಸೆಗೆ ಪಾತ್ರವಾಗಿದೆ.ದಮನಿತರು ಹಾಗೂ ಮಂಗಳಮುಖಿಯರ ಸ್ವಾವಲಂಬನೆ ಜೀವನಕ್ಕೆ ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸಿರುವುದು ಉತ್ತಮ ಬೆಳವಣಿಗೆ.

Published On - 7:26 pm, Wed, 10 June 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್