AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Impact: ಟಿವಿ9 ನಿರಂತರ ವರದಿ ಬಳಿಕ ಎಚ್ಚೆತ್ತ ವಿಜಯನಗರ ಜಿಲ್ಲಾಡಳಿತ, ಮಕರಬ್ಬಿ ಗ್ರಾಮದಲ್ಲಿ ಮತ್ತೆ ತಾತ್ಕಾಲಿಕ ಆಸ್ಪತ್ರೆ ಆರಂಭ

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಳೆದ ತಿಂಗಳು 23 ರಿಂದ 29 ರವರೆಗೆ ತಾತ್ಕಾಲಿಕ ಆಸ್ಪತ್ರೆ ಆರಂಭವಾಗಿತ್ತು. ಈಗ ಮತ್ತೆ ನಿನ್ನೆಯಿಂದ ಸರ್ಕಾರಿ ಶಾಲೆಯಲ್ಲಿ ತಾತ್ಕಾಲಿಕ ಆಸ್ಪತ್ರೆ ಆರಂಭ ಮಾಡಲಾಗಿದೆ.

Tv9 Impact: ಟಿವಿ9 ನಿರಂತರ ವರದಿ ಬಳಿಕ ಎಚ್ಚೆತ್ತ ವಿಜಯನಗರ ಜಿಲ್ಲಾಡಳಿತ, ಮಕರಬ್ಬಿ ಗ್ರಾಮದಲ್ಲಿ ಮತ್ತೆ ತಾತ್ಕಾಲಿಕ ಆಸ್ಪತ್ರೆ ಆರಂಭ
ಕಲುಷಿತ ನೀರು ಸೇವಿಸಿ ವಾಂತಿ, ಭೇದಿ
TV9 Web
| Edited By: |

Updated on: Oct 06, 2021 | 12:25 PM

Share

ಬಳ್ಳಾರಿ: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ 6 ಜನರ ಸಾವು ಕೇಸ್ಗೆ ಸಂಬಂಧಿಸಿ ಟಿವಿ9 ನಿರಂತರ ವರದಿ ಬಳಿಕ ವಿಜಯನಗರ ಜಿಲ್ಲಾಡಳಿತ ಎಚ್ಚೆತ್ತಿದೆ. ಮಕರಬ್ಬಿ ಗ್ರಾಮದಲ್ಲಿ ಮತ್ತೆ ತಾತ್ಕಾಲಿಕ ಆಸ್ಪತ್ರೆ ಆರಂಭ ಮಾಡಿದೆ.

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಳೆದ ತಿಂಗಳು 23 ರಿಂದ 29 ರವರೆಗೆ ತಾತ್ಕಾಲಿಕ ಆಸ್ಪತ್ರೆ ಆರಂಭವಾಗಿತ್ತು. ಈಗ ಮತ್ತೆ ನಿನ್ನೆಯಿಂದ ಸರ್ಕಾರಿ ಶಾಲೆಯಲ್ಲಿ ತಾತ್ಕಾಲಿಕ ಆಸ್ಪತ್ರೆ ಆರಂಭ ಮಾಡಲಾಗಿದೆ. ದಿನದ 24 ಗಂಟೆಯೂ ಆರೋಗ್ಯ ಇಲಾಖೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತುರ್ತು ಸೇವೆಗೆ ಮಕರಬ್ಬಿ ಗ್ರಾಮದಲ್ಲಿ 2 ಌಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಮನೆಮನೆಯ ಸರ್ವೆ ಮಾಡಲಾಗುತ್ತಿದೆ. ವಾಂತಿ, ಭೇದಿ ಲಕ್ಷಣ ಇದ್ದವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಕೆಲ ದಿನಗಳಿಂದ ಮಕರಬ್ಬಿಯಲ್ಲಿ ಕಲುಷಿತ ನೀರಿನ ಸಮಸ್ಯೆ ಎದುರಾಗಿದೆ. ಕಲುಷಿತ ನೀರು ಸೇವಿಸಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿ ಕೆಲ ಕುಟುಂಬಗಳು ಗ್ರಾಮವನ್ನು ತೊರೆದು ಹೋಗಿವೆ. ಕೆಲ ಜನರು ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಅಸ್ವಸ್ಥಗೊಂಡ ಕೆಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಹುಬ್ಬಳ್ಳಿ, ದಾವಣಗೆರೆ, ಹಾವೇರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಕರಬ್ಬಿ ಗ್ರಾಮದಲ್ಲಿ ಶಾಲೆಗೆ ತಾತ್ಕಾಲಿಕವಾಗಿ ರಜೆ ಘೋಷಣೆ ಮಾಡಲಾಗಿದೆ.

ವಾಂತಿಭೇದಿಯಿಂದ ಅಸ್ವಸ್ಥರಾಗಬಹುದೆಂಬ ಆತಂಕದಲ್ಲಿ ತಮ್ಮ ತಮ್ಮ ಮಕ್ಕಳನ್ನು ಗ್ರಾಮಸ್ಥರು ಸಂಬಂಧಿಕರ ಮನೆಗಳಿಗೆ ಕಳುಹಿಸಿದ್ದಾರೆ. ಸರಣಿ ಸಾವಿನಿಂದ ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಉಳಿದವರಿಗೆ ಚಿಕಿತ್ಸೆ ಮುಂದುವರಿದಿದ್ದು, ಗ್ರಾಮದ ಸರ್ಕಾರಿ ಶಾಲೆಯಲ್ಲಿ 7-8 ತರಗತಿ ಮಕ್ಕಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಮೃತ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿ ಅಡಿ ಪರಿಹಾರ ನೀಡಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ವರದಿ ತರಿಸಿಕೊಳ್ಳಲು ಡಿಸಿಗೆ ಸೂಚನೆ ನೀಡಲಾಗುವುದು. ಗ್ರಾಮಕ್ಕೆ ಭೇಟಿ ನೀಡಲು ಡಿಸಿಗೆ ಸೂಚನೆ ನೀಡಲಾಗಿದೆ. ನೀರು ಯಾವ ಕಾರಣಕ್ಕೆ ಕಲುಷಿತವಾಗಿದೆ ಅನ್ನೋ ಬಗ್ಗೆ ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ನೀರು ಕಲುಷಿತಗೊಳ್ಳಲು ಕಾರಣವೇನು? ಬೋರ್ ವೆಲ್ನಿಂದ ಹೊಸ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು ಈ ವೇಳೆ, ಹಳೆ ಪೈಪ್ ಗಳಿಗೆ ಡ್ಯಾಮೇಜ್ ಆಗಿದೆ. ಡ್ಯಾಮೇಜ್ ಆದ ಪೈಪ್ ನೊಳಗೆ ಚರಂಡಿ ನೀರು ಮಿಶ್ರವಾಗಿದ್ದು, ಇದೇ ನೀರನ್ನು ಮಕರಬ್ಬಿ ಗ್ರಾಮಸ್ಥರು ಸೇವಿಸಿದ್ದಾರೆ. ಸುಮಾರು 2 ಸಾವಿರಕ್ಕೂ ಅಧಿಕ ಜನಸಂಖ್ಯೆ ಇರೋ ಮಕರಬ್ಬಿ ಗ್ರಾಮದಲ್ಲಿ ಈ ಕಾರಣದಿಂದ ಸುಮಾರು 200 ಕ್ಕೂ ಜನರು ವಾಂತಿಬೇಧಿಯಿಂದ ಬಳಲಿದ್ದರು. ಹುಬ್ಬಳ್ಳಿ, ದಾವಣಗೆರೆ, ಹಾವೇರಿ ಆಸ್ಪತ್ರೆಯಲ್ಲಿ ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇದುವರೆಗೆ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹಾಗೂ ಜಿಲ್ಲಾಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಆಗಮಿಸಿಲ್ಲ. ಈ ಕುರಿತು ಜಿಲ್ಲಾಡಳಿತದ ವಿರುದ್ದ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಜಯನಗರ: ಕಲುಷಿತ ನೀರು ಸೇವಿಸಿ 6 ಜನರ ಸಾವು ಪ್ರಕರಣ, ಇಬ್ಬರು ಅಧಿಕಾರಿಗಳು ಅಮಾನತು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!