ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕ ಸಾವು

ಬಳ್ಳಾರಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಹರಪನಹಳ್ಳಿ ತಾಲೂಕಿನ ಮಾಚಿಹಳ್ಳಿ ತಾಂಡಾದ ಬಳಿ ನಡೆದಿದೆ. ಶಾಲೆಯಿಂದ ಮನೆಗೆ ಬರುವಾಗ ದಾರಿಯಲ್ಲಿ ಸಿಕ್ಕ ಕೃಷಿ ಹೊಂಡದಲ್ಲಿ ಈಜಾಡಲು ಎಂದು ಹೋಗಿದ್ದ ಗಗನ್ (12) ಹಾಗೂ ಧನರಾಜ್ (12) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೃಷಿ ಹೊಂಡ ಆಳವಿದ್ದ ಕಾರಣ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕ ಸಾವು
ಸಾಧು ಶ್ರೀನಾಥ್​

Updated on: Jan 17, 2020 | 8:31 PM

ಬಳ್ಳಾರಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಹರಪನಹಳ್ಳಿ ತಾಲೂಕಿನ ಮಾಚಿಹಳ್ಳಿ ತಾಂಡಾದ ಬಳಿ ನಡೆದಿದೆ. ಶಾಲೆಯಿಂದ ಮನೆಗೆ ಬರುವಾಗ ದಾರಿಯಲ್ಲಿ ಸಿಕ್ಕ ಕೃಷಿ ಹೊಂಡದಲ್ಲಿ ಈಜಾಡಲು ಎಂದು ಹೋಗಿದ್ದ ಗಗನ್ (12) ಹಾಗೂ ಧನರಾಜ್ (12) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೃಷಿ ಹೊಂಡ ಆಳವಿದ್ದ ಕಾರಣ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us