ವಿಜಯನಗರ: ಡಿವೈಡರ್​​ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು, ನಾಲ್ವರಿಗೆ ಗಾಯ

ಇಳಕಲ್‍ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎರಿಟಿಗಾ ಕಾರು ನಿಯಂತ್ರಣ ತಪ್ಪಿ ಡಿವೈಡರ್​ಗೆ ಕಾರು ಡಿಕ್ಕಿಯಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. ಓರ್ವರ ಸ್ಥಿತಿ ಚಿಂತಾಜನಕವಾಗಿದೆ. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯನಗರ: ಡಿವೈಡರ್​​ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು, ನಾಲ್ವರಿಗೆ ಗಾಯ
ಸಾವು
Edited By:

Updated on: Jun 30, 2024 | 8:59 AM

ವಿಜಯನಗರ, ಜೂನ್.30: ಡಿವೈಡರ್​​ಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟ (Death) ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ಬಳಿ ಹೆದ್ದಾರಿಯಲ್ಲಿ ತಡರಾತ್ರಿ ನಡೆದಿದೆ. ಚಾಲಕ ವಿನಯ್ (27), ಚನ್ನಬಸವ (28) ಮೃತ ದುರ್ದೈವಿಗಳು. ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗಾಯಾಳುಗಳನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇಳಕಲ್‍ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎರಿಟಿಗಾ ಕಾರಿನಲ್ಲಿ 7 ಜನರು ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಕಾರು ಡಿಕ್ಕಿಯಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. ಓರ್ವರ ಸ್ಥಿತಿ ಚಿಂತಾಜನಕವಾಗಿದೆ. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಾಲಭಾದೆಗೆ ಹೆದರಿ ಯುವಕ ಆತ್ಮಹತ್ಯೆ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ಸಾಲಬಾಧೆ ತಾಳಲಾಗದೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡೆತ್​ನೋಟ್​ ಬರೆದಿಟ್ಟು ನೇಣುಬಿಗಿದುಕೊಂಡು ಕೆ.ಆರ್.ತಾಲೂಕಿನ ಹೆಬ್ಬಾಳು ಕೊಪ್ಪಲು ಗ್ರಾಮದ ಯತೀಕ್(25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಸಮಸ್ಯೆ ಹಿನ್ನೆಲೆ ಯತೀಕ್ ಕ್ರೆಡಿಟ್ ಕಾರ್ಡ್, ಪರ್ಸನಲ್ ಲೋನ್ ಪಡೆದಿದ್ದ. ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಯತೀಕ್, ಇಎಂಐ ಕಟ್ಟಲು ಸಾಧ್ಯವಾಗದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬ ವಿಚಾರ; ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದಿಂದ ಸ್ಪಷ್ಟನೆ

ಆತ್ಮಹತ್ಯೆಗೆ ಯತ್ನ.. ಮಕ್ಕಳು ಸಾವು, ತಾಯಿ ಬಚಾವ್

ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಕ್ಕಳಿಬ್ಬರು ಮೃತಪಟ್ಟು ತಾಯಿ ಗಂಭೀರವಾಗಿ ಆಸ್ಪತ್ರೆ ಸೇರಿದ್ದಾಳೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದ ನಂದ್ರೊಳ್ಳಿಯಲ್ಲಿ ಘಟನೆ ನಡೆದಿದ್ದು, ಶೀಲಾ ಎಂಬಾಕೆ ತನ್ನ ಮಕ್ಕಳಾದ ಧನರಾಜ್ ಮತ್ತು ಛಾಯಳನ್ನ ತಗೊಂಡು ಕೆರೆಗೆ ಹಾರಿದ್ದಾಳೆ. ಸದ್ಯ ಮಕ್ಕಳಿಬ್ಬರು ಮೃತಪಟ್ಟಿದ್ದು, ತಾಯಿಗೆ ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ.

ಚಾಕುವಿನಿಂದ ಇರಿದು, ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ

ಚಾಕುವಿನಿಂದ ಇರಿದು, ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಜೀವನಹಳ್ಳಿ ಬಳಿ ರೈಲ್ವೆ ಟ್ರ್ಯಾಕ್ ಬಳಿ ಅಪ್ಪು ಎಂಬಾತನ ಬರ್ಬರ ಹತ್ಯೆ ನಡೆದಿದೆ. 7ರಿಂದ 8 ದುಷ್ಕರ್ಮಿಗಳ ಗ್ಯಾಂಗ್​ನಿಂದ ಕೃತ್ಯ ನಡೆದಿದೆ. ಹತ್ಯೆಯಾದ ಅಪ್ಪು ವಿರುದ್ಧ ಕೊಲೆ ಯತ್ನ ಆರೋಪದ ಕೇಸ್​ ಇತ್ತು. ಸಂಜೆ ರಾಜಿಸಂಧಾನಕ್ಕೆಂದು ಕರೆಸಿಕೊಂಡು ಕೊಂದಿರುವ ಅನುಮಾನ ವ್ಯಕ್ತವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ