Covid19: ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ
ಓರ್ವ ಸೋಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದ ನಾಲ್ವರನ್ನು ಕ್ವಾರಂಟೈನ್ ಮಾಡಲಾಗಿದೆ. ಜಿಯೋಮಿಕ್ ಸಿಕ್ವೆನ್ಸ್ ಟೆಸ್ಟ್ಗೆ ಕಳಿಸಲು ಆರೋಗ್ಯ ಅಧಿಕಾರಿಗಳು ನಿರ್ಧಾರ ಮಾಡಿದ್ದಾರೆ.
ಬಳ್ಳಾರಿ: ಗುಜರಾತ್‌ನಿಂದ ಬಳ್ಳಾರಿಗೆ ಬಂದಿದ್ದ ಐವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬಳ್ಳಾರಿ ಜಿಲ್ಲೆಯ ಶಿರಗುಪ್ಪ ನಗರದ ಐವರಿಗೆ ಕೊರೊನಾ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈಗ ಆರೋಗ್ಯ ಸಿಬ್ಬಂದಿ ಐವರ ಟ್ರಾವೆಲ್ ಹಿಸ್ಟರಿ ಕಲೆಹಾಕುತ್ತಿದ್ದಾರೆ. ಓರ್ವ ಸೋಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದ ನಾಲ್ವರನ್ನು ಕ್ವಾರಂಟೈನ್ ಮಾಡಲಾಗಿದೆ. ಜಿಯೋಮಿಕ್ ಸಿಕ್ವೆನ್ಸ್ ಟೆಸ್ಟ್ಗೆ ಕಳಿಸಲು ಆರೋಗ್ಯ ಅಧಿಕಾರಿಗಳು ನಿರ್ಧಾರ ಮಾಡಿದ್ದಾರೆ.
ಚಾಮರಾಜನಗರ: ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಆಗ್ರಹಿಸಿ ವಾಟಾಳ್ ನಾಗರಾಜ್ ಚಾಮರಾಜನಗರ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ಮಾಡಿದ್ದಾರೆ. ರಾಜ್ಯದಲ್ಲಿ ಶಾಲಾ ಮಕ್ಕಳಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಶಾಲಾ ಮಕ್ಕಳಿಗೆ ಇನ್ನೂ ಲಸಿಕೆ ನೀಡಿಲ್ಲ. ಲಸಿಕೆ ಹಾಕದೆ ಶಾಲೆ ಪ್ರಾರಂಭ ಮಾಡಿದ್ದು ಸರಿಯಲ್ಲ. ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಬೇಕು. ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣ ನೀಡಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹ ವ್ಯಕ್ತಪಡಿಸಿದ್ದಾರೆ.
ವಿಜಯಪುರ: ಇಬ್ಬರಲ್ಲಿ ಕೊರೊನಾ ಪಾಸಿಟಿವ್ ವಿಜಯಪುರ ಜಿಲ್ಲೆಯಲ್ಲಿ ಇಂದು ಇಬ್ಬರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ನೆರೆಯ ಮಹಾರಾಷ್ಟ್ರದಿಂದ ವಾಪಸ್ ಬಂದಿದ್ದ ಇಬ್ಬರು ಪುರುಷರು ಕೊವಿಡ್19 ಸೋಂಕಿಗೆ ತುತ್ತಾಗಿರುವುದು ದೃಢವಾಗಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದೇ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ಆಗಿದೆ. ಇಬ್ಬರು ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಎರಡು ಪ್ರಕರಣಗಳು ಪಾಸಿಟಿವ್ ಬಂದ ಕಾರಣ ಗಡಿ ಭಾಗದ ಚೆಕ್ ಪೋಸ್ಟ್ನಲ್ಲಿ ವ್ಯಾಪಕ ತಪಾಸಣೆ ಮಾಡಲಾಗುತ್ತಿದೆ. ಕಳೆದ ನವೆಂಬರ್ 19ರ ನಂತರ ಜಿಲ್ಲೆಯಲ್ಲಿಲ ಈಗ ಎರಡು ಪಾಸಿಟಿವ್ ಪ್ರಕರಣಗಳು ಪತ್ತೆ ಆಗಿವೆ.
ಹೊನ್ನಾಳಿ: ಕಾಲೇಜುಗಳಿಗೆ ಸುತ್ತಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿಯ ಕಾಲೇಜುಗಳಿಗೆ ಸುತ್ತಿ ಕೊರೊನಾ ಬಗ್ಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಜಾಗೃತಿ ಮೂಡಿಸುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಕಾಲೇಜುಗಳಿಗೆ ರೇಣುಕಾಚಾರ್ಯ ಸುತ್ತುತ್ತಿದ್ದಾರೆ. ಮೃತ್ಯುಂಜಯ ಪದವಿ ಕಾಲೇಜ್ ಹಾಗೂ ಚನ್ನೇಶ್ವರ ಪಿಯು ಕಾಲೇಜ್ ಭೇಟಿ ನೀಡಿ 1400 ವಿದ್ಯಾರ್ಥಿಗಳಿಗೆ ಕೊರೊನಾ ಮೂರನೇ ಅಲೆ ಬಗ್ಗೆ ತಿಳಿಹೇಳಿದ್ದಾರೆ. ಸುರಕ್ಷಿತವಾಗಿರಲು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ಇದನ್ನೂ ಓದಿ: ಮುಂದಿನ ಕೊರೊನಾ ರೂಪಾಂತರಿ ವೈರಸ್ ಹೆಚ್ಚು ಮಾರಕ, ಸಾಂಕ್ರಾಮಿಕವಾಗಿರಲಿದೆ; ಆಕ್ಸ್ಫರ್ಡ್ ವಿಜ್ಞಾನಿ ಎಚ್ಚರಿಕೆ
ಇದನ್ನೂ ಓದಿ: ವಾರದಿಂದ ವಾರಕ್ಕೆ ತನ್ನ ಓಟ ಹೆಚ್ಚಿಸಿದ ಮಹಾಮಾರಿ; ಕೊರೊನಾಗೆ ಈ ಬಾರಿ ಮಕ್ಕಳೇ ಹೆಚ್ಚು ಟಾರ್ಗೆಟ್