ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ, ವೆಂಟಿಲೇಟರ್ ಸ್ಥಗಿತ: ಮೂವರು ರೋಗಿಗಳ ದಾರುಣ ಸಾವು

| Updated By: ಸಾಧು ಶ್ರೀನಾಥ್​

Updated on: Sep 14, 2022 | 9:36 PM

Bellary VIMS Hospital; ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ, ವೆಂಟಿಲೇಟರ್ ಸ್ಥಗಿತ: ಮೂವರು ರೋಗಿಗಳ ದಾರುಣ ಸಾವು

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ, ವೆಂಟಿಲೇಟರ್ ಸ್ಥಗಿತ: ಮೂವರು ರೋಗಿಗಳ ದಾರುಣ ಸಾವು
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ, ವೆಂಟಿಲೇಟರ್ ಸ್ಥಗಿತ: ಮೂವರು ರೋಗಿಗಳ ಸಾವು
Follow us on

ಬಳ್ಳಾರಿ: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆಯಿಂದ (electricity failure) ವೆಂಟಿಲೇಟರ್ (Ventilator) ಸ್ಥಗಿತಗೊಂಡು, ಮೂವರು ರೋಗಿಗಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ವೆಂಟಿಲೇಟರ್​ ಮೇಲ್ಲಿದ್ದ ರೋಗಿಗಳಾದ ಮೌಲಾ ಹುಸೇನ್ ಹಾಗೂ ಚೆಟ್ಟೆಮ್ಮ ಕೊನೆಯುಸಿರೆಳೆದ ದುರ್ದೈವಿಗಳು. ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದ ಮತ್ತೊಬ್ಬ ರೋಗಿ ಸಹ ಸಾವನ್ನಪ್ಪಿದ್ದಾರೆ. ಐಸಿಯುನಲ್ಲಿದ್ದ 10 ರೋಗಿಗಳ ಪೈಕಿ, ಈ ಮೂವರು ರೋಗಿಗಳು ಅಸುನೀಗಿದ್ದಾರೆ.

ವಿಮ್ಸ್ ಆಸ್ಪತ್ರೆಯ (VIMS Hospital in Bellary) ವಿರುದ್ಧ ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಹಿನ್ನೆಲೆಯಲ್ಲಿ ಸಂಭವಿಸಿರುವ ದುರ್ಘಟನೆ ಬಗ್ಗೆ ಸ್ಪಷ್ಟನೆ ನೀಡಲು ವಿಮ್ಸ್ ಆಡಳಿತ ಮಂಡಳಿ ನಿರಾಕರಿಸಿದೆ.

ಆದರೆ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ಗಂಗಾಧರ ಗೌಡ ಅವರು ಮಾಧ್ಯಮ ಹೇಳಿಕೆ ನೀಡಿದ್ದು, ಮೂವರ ಸಾವಿಗೆ ಬೇರೆಯದ್ದೇ ಕಾರಣ ನೀಡಿದ್ದಾರೆ.

ನಿರ್ದೇಶಕ ಡಾ. ಗಂಗಾಧರ ಗೌಡ ಸ್ಪಷ್ಟನೆ ಹೀಗಿದೆ:

ಈ ದಿನ ವಿಮ್ಸ್ ಆಸ್ಪತ್ರೆಯಲ್ಲಿ ಆಗಿರುವ ಸಾವುಗಳು ವಿವಿಧ ತೀವ್ರತರದ ಆರೋಗ್ಯ ಸಮಸ್ಯೆ ಗಳಿಂದ ಸಂಭವಿಸಿವೆ. ಒಬ್ಬ ರೋಗಿಯು ವಿಷಪೂರಿತ ಹಾವಿನ ಕಡಿತದಿಂದ ದೇಹದಲ್ಲಿ ಆಂತರಿಕ ರಕ್ತಸ್ರಾವವಾಗಿ ಸಾವಿಗೀಡಾಗಿದ್ದರೆ; ಇನ್ನೊಬ್ಬ ಮೃತರು ಬಹು ಅಂಗಾಗ ವೈಫಲ್ಯದಿಂದ ನಮ್ಮ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ, ಕೊನೆಗೆ ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟಿರುತ್ತಾರೆ. ಹಾಗೆಯೇ ಮತ್ತೊಬ್ಬ ರೋಗಿಯು ಹಲವಾರು ದಿನಗಳಿಂದ ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದು ಕೊನೆಗೆ ಬಹು ಅಂಗಾಗಳ ಸೋಂಕಿನಿಂದ ಸಹಜ ಸಾವನ್ನಪ್ಪಿದ್ದಾರೆ.

ವಿಮ್ಸ್ ಆಸ್ಪತ್ರೆಯು ಉನ್ನತ ಚಿಕಿತ್ಸಾ ಕೇಂದ್ರವಾಗಿದ್ದು ಎಲ್ಲಾ ಕೇಂದ್ರಗಳಲ್ಲಿ ಚಿಕಿತ್ಸೆ ಫಲಕಾರಿಯಾಗದಿದ್ದಲ್ಲಿ ಕೊನೆಗೆ ಪರಿಸ್ಥಿತಿ ಉಲ್ಬಣಗೊಂಡ ನಂತರ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಬರುವುದರಿಂದ ಸಾವುಗಳು ಆಗುವ ಸಂಭವನೀಯತೆ ಹೆಚ್ಚಾಗುತ್ತದೆ. ಬೆಳಗ್ಗೆ ಅದೇ ಸಮಯದಲ್ಲಿ ವಿದ್ಯುತ್ ಸಂಪರ್ಕ ಕೈಕೊಟ್ಟಿರುವುದು ಕಾಕತಾಳೀಯವಾಗಿದ್ದು, ವಿಮ್ಸ್ ಆಸ್ಪತ್ರೆ ಯಾವಾಗಲೂ ರೋಗಿಗಳ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತದೆ ಎಂದು ಈ ಮೂಲಕ ಸಾರ್ವಜನಿಕರಿಗೆ ಹಾಗೂ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡುತ್ತೇನೆ ಎಂದಿದ್ದಾರೆ.

Published On - 9:29 pm, Wed, 14 September 22