AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ನಾಡಿನ ದಿಟ್ಟ ಮಹಿಳಾ ಅರಣ್ಯಾಧಿಕಾರಿ ಇವರು! ಸಾವಿರಾರು ಹೆಕ್ಟೇರ್ ಅರಣ್ಯ ಸಂರಕ್ಷಕಿ

ಬಳ್ಳಾರಿ: ಆ ತಾಲೂಕು ರಾಜ್ಯದಲ್ಲಿಯೇ ಅತ್ಯಂತ ಬರಪೀಡಿತ ತಾಲೂಕು ಅಂತಾ ಪ್ರತಿ ವರ್ಷ ಘೋಷಣೆಯಾಗುತ್ತಲೇ ಇದೆ. ಅದೇ ತಾಲೂಕಿನಲ್ಲಿಯೇ ಅತಿಹೆಚ್ಚು ಅರಣ್ಯ ಪ್ರದೇಶ ಕೂಡ ಇದೆ. ಮರಗಳ್ಳರ ಹಾವಳಿ, ಮರುಳು ಮಾಫಿಯಾ ಅರಣ್ಯ ಪ್ರದೇಶಗಳಲ್ಲಿ ಎಗ್ಗಿಲ್ಲದೇ ನಡೆಯುತ್ತಿತ್ತು. ಆದರೆ ಇದುವರೆಗೆ ಅರಣ್ಯಾಧಿಕಾರಿಗಳು ಅಷ್ಟೊಂದು ತಲೆಕೆಡಿಸಿಕೊಂಡಿದಿಲ್ಲ. ಇದರಿಂದಾಗಿ ಆ ತಾಲೂಕಿನ ಸಾವಿರಾರು ಹೆಕ್ಟೇರ್ ಅರಣ್ಯ ಪ್ರದೇಶಗಳಲ್ಲಿದ್ದ ಗಿಡ ಮರಗಳು ಅಳಿವಿನಂಚಿನಲ್ಲಿತ್ತು. ಆದ್ರೆ ಈ ತಾಲೂಕಿಗೆ ಬಂದ ದಿಟ್ಟ ಮಹಿಳಾ ಅಧಿಕಾರಿ ಅಕ್ರಮಗಳಿಗೆ ಕಡಿವಾಣ ಹಾಕಿ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿದ್ದ […]

ಗಣಿ ನಾಡಿನ ದಿಟ್ಟ ಮಹಿಳಾ ಅರಣ್ಯಾಧಿಕಾರಿ ಇವರು! ಸಾವಿರಾರು ಹೆಕ್ಟೇರ್ ಅರಣ್ಯ ಸಂರಕ್ಷಕಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 08, 2020 | 6:11 PM

Share

ಬಳ್ಳಾರಿ: ಆ ತಾಲೂಕು ರಾಜ್ಯದಲ್ಲಿಯೇ ಅತ್ಯಂತ ಬರಪೀಡಿತ ತಾಲೂಕು ಅಂತಾ ಪ್ರತಿ ವರ್ಷ ಘೋಷಣೆಯಾಗುತ್ತಲೇ ಇದೆ. ಅದೇ ತಾಲೂಕಿನಲ್ಲಿಯೇ ಅತಿಹೆಚ್ಚು ಅರಣ್ಯ ಪ್ರದೇಶ ಕೂಡ ಇದೆ. ಮರಗಳ್ಳರ ಹಾವಳಿ, ಮರುಳು ಮಾಫಿಯಾ ಅರಣ್ಯ ಪ್ರದೇಶಗಳಲ್ಲಿ ಎಗ್ಗಿಲ್ಲದೇ ನಡೆಯುತ್ತಿತ್ತು. ಆದರೆ ಇದುವರೆಗೆ ಅರಣ್ಯಾಧಿಕಾರಿಗಳು ಅಷ್ಟೊಂದು ತಲೆಕೆಡಿಸಿಕೊಂಡಿದಿಲ್ಲ.

ಇದರಿಂದಾಗಿ ಆ ತಾಲೂಕಿನ ಸಾವಿರಾರು ಹೆಕ್ಟೇರ್ ಅರಣ್ಯ ಪ್ರದೇಶಗಳಲ್ಲಿದ್ದ ಗಿಡ ಮರಗಳು ಅಳಿವಿನಂಚಿನಲ್ಲಿತ್ತು. ಆದ್ರೆ ಈ ತಾಲೂಕಿಗೆ ಬಂದ ದಿಟ್ಟ ಮಹಿಳಾ ಅಧಿಕಾರಿ ಅಕ್ರಮಗಳಿಗೆ ಕಡಿವಾಣ ಹಾಕಿ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿದ್ದ ಅರಣ್ಯ ಪ್ರದೇಶವನ್ನ ಸಂರಕ್ಷಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನಲ್ಲಿ ಕೂಡ್ಲಿಗಿ ಮತ್ತು ಗುಡೇಕೋಟೆ ವಲಯ ಎಂಬ 2 ಅರಣ್ಯ ವಿಭಾಗಗಳು ಇವೆ. ಕೂಡ್ಲಿಗಿ ವಲಯದ ವ್ಯಾಪ್ತಿಗೆ 24,460 ಹೆಕ್ಟೇರ್ ಪ್ರದೇಶ ಅರಣ್ಯ ಇದೆ. ಚಿರಿಬಿ ಕಾಯ್ದಿಟ್ಟ ಅರಣ್ಯ ಪ್ರದೇಶ, ಸುಂಕದಕಲ್ಲು ಕಾಯ್ದಿಟ್ಟ ಅರಣ್ಯ ಪ್ರದೇಶ, ಕಕ್ಕುಪ್ಪಿ ಕಾಯ್ದಿಟ್ಟ ಅರಣ್ಯ ಪ್ರದೇಶ, ಬಣವಿಕಲ್ಲು ಕಾಯ್ದಿಟ್ಟ ಅರಣ್ಯ ಪ್ರದೇಶ, ಜರ್ಮಲಿ ಕಾಯ್ದಿಟ್ಟ ಅರಣ್ಯ ಪ್ರದೇಶ, ಸಂಡೂರು ತಾಲೂಕಿನ ಬಂಡ್ರಿ ಕಾಯ್ದಿಟ್ಟ ಅರಣ್ಯ ಪ್ರದೇಶ, ಸೋಮಲಾಪುರ ಕಾಯ್ದಿಟ್ಟ ಅರಣ್ಯ ಪ್ರದೇಶ ಬರುತ್ತೆ.

ಈ ವ್ಯಾಪ್ತಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಅಕ್ರಮ ಮರುಳು ಸಾಗಾಣಿಕೆ, ಮರಗಳ್ಳತನ, ಕಾಡು ಪ್ರಾಣಿಗಳ ಬೇಟೆಗೆ ಈಗ ಬ್ರೇಕ್ ಬಿದ್ದಿದೆ. ಕೂಡ್ಲಿಗಿ ವಲಯ ಅರಣ್ಯಾಧಿಕಾರಿಯಾಗಿರುವ ರೇಣುಕಾ ಅರಣ್ಯ ಅಕ್ರಮ ದಂಧೆಕೋರರಿಗೆ ಸಿಂಹ ಸ್ವಪ್ನ ಆಗಿದ್ದಾರೆ.

ಅರಣ್ಯ ಇಲಾಖೆಯ ಕಾನೂನುಗಳಿಗೆ ಮರುಜೀವ: ಅರಣ್ಯ, ಪರಿಸರ, ಪ್ರಾಕೃತಿಕ ಸಂಪತ್ತು ಕೊಳ್ಳೆ ಹೊಡೆದರೆ ಯಾವ ರೀತಿ ಕಾನೂನಿನಲ್ಲಿ ಶಿಕ್ಷೆ ಇದೆ ಎಂಬುದನ್ನು ಜನರಿಗೆ ಈ ಮಹಿಳಾ ಅಧಿಕಾರಿ ಪರಿಚಯ ಮಾಡಿಕೊಟ್ಟಿದ್ದಾರೆ. ಇಲ್ಲಿಯವರೆಗೂ ಸದ್ದೇ ಮಾಡದ ಅರಣ್ಯ ಇಲಾಖೆಯ ಕಾಯ್ದೆ ಕಾನೂನುಗಳಿಗೆ ಇಲ್ಲಿ ಮರುಜೀವ ಬಂದಂತಾಗಿದೆ. ಯಾವುದೇ ಟ್ರ್ಯಾಕ್ಟರ್ ಅಕ್ರಮವಾಗಿ ಅರಣ್ಯ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆ ಮಾಡಿದರೆ 25 ಸಾವಿರ ದಂಡವನ್ನು ಕಟ್ಟಲೇಬೇಕು.

ಅಕ್ರಮ ಮರುಳು ಮಾಫಿಯಾ, ಮರಗಳ್ಳರಿಂದ ಈಗಾಗಲೇ ಅರಣ್ಯವನ್ನು ಬಹುತೇಕ ರಕ್ಷಣೆ ಮಾಡುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ರೇಣುಕಾ ಬೇಸಿಗೆ ಕಾಲದಲ್ಲಿ ಬೆಂಕಿಯಿಂದಲೂ ಅರಣ್ಯವನ್ನು ರಕ್ಷಣೆ ಮಾಡಲು 24 ತಾಸು ಅರಣ್ಯ ಇಲಾಖೆಯ ತಂಡವನ್ನು ರಚಿಸಿದ್ದು, 24 ತಾಸು ಗಸ್ತುವಾಹನ ತಂಡ ರೆಡಿ ಇರುತ್ತದೆ. ಕಾಡ್ಗಿಚ್ಚು ಅಲ್ಲದೇ ರಾತ್ರಿ ಅಕ್ರಮ ಮರಳು ತುಂಬಿದರೆ, ಕಾಡು ಕಡಿದರೆ ಈ ತಂಡ ಮಧ್ಯರಾತ್ರಿಯಾದರೂ ಅಲ್ಲಿಗೆ ಹಾಜರು. ಕಳ್ಳರನ್ನು ರಾತ್ರಿಯೇ ಹಿಡಿದು ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಭಯವಿದ್ರೂ ಲೆಕ್ಕಿಸದೇ ಈ ಮಹಿಳಾ ಅಧಿಕಾರಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸುತ್ತಿದೆ.

ಕೂಡ್ಲಿಗಿ ವಲಯ ಅರಣ್ಯಾಧಿಕಾರಿ ಆಗಿರುವ ರೇಣುಕಾ ಅವರ ಕಾರ್ಯಕ್ಷಮತೆಯಿಂದಾಗಿ ಸಾವಿರಾರು ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿನ ಗಿಡ-ಮರಗಳು ಪ್ರಾಕೃತಿಕ ಸಂಪತ್ತು ಉಳಿದಿದೆ. ಜೊತೆಗೆ ಕಾಡಿನಲ್ಲಿ ವಾಸಿಸುವ ಕಾಡು ಪ್ರಾಣಿಗಳಿಗೆ, ಪಕ್ಷಿಗಳು, ಸಹಸ್ರಾರು ಜೀವವೈವಿಧ್ಯಗಳಿಗೆ ನೆಲೆ ಒದಗಿದಂತಾಗಿದೆ.

Published On - 5:44 pm, Mon, 8 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?