AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರೆಗೆ ಬಲೂನ್ ಮಾರಲು ಬಂದಿದ್ದ ಬಾಲಕಿ ಅತ್ಯಾಚಾರ ಕೊಲೆ:ಕೀಚಕನಿಗೆ ಪೊಲೀಸ್ ಗುಂಡೇಟು

ಮೈಸೂರು ದಸರಾ ಸಂಭ್ರಮದ ನಡುವೆ ನಡೆದ ಪೈಶಾಚಿಕ ಘಟನೆಗೆ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕುಟುಂಬದ ಜೊತೆ ಮೈಸೂರು ದಸರಾ ಹಬ್ಬದ ವೇಳೆ ಬಲೂನು ಮಾರಾಟ ಮಾಡಲು ಬಂದಿದ್ದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಯಾಗಿದ್ದು, ಈ ಸಂಬಂಧ ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ತಪ್ಪಿಸಿಕೊಳ್ಳಲು ಯತ್ನಿಸಿದ ಕೀಚಕನಿಗೆ ಪೊಲೀಸರು ಗುಂಡೇಟು ಕೊಟ್ಟಿದ್ದಾರೆ. ಹಾಗಾದ್ರೆ, ಮುಗ್ಧ ಬಾಲಕಿಯನ್ನು ಕಿತ್ತು ತಿಂದ ಪಾಪಿ ಯಾರು ಎನ್ನುವ ವಿವರ ಇಲ್ಲಿದೆ.

ಮೈಸೂರು ದಸರೆಗೆ ಬಲೂನ್ ಮಾರಲು ಬಂದಿದ್ದ ಬಾಲಕಿ ಅತ್ಯಾಚಾರ ಕೊಲೆ:ಕೀಚಕನಿಗೆ ಪೊಲೀಸ್ ಗುಂಡೇಟು
ಕ್ರೈಂImage Credit source: Google
ರಾಮ್​, ಮೈಸೂರು
| Updated By: ಪ್ರಸನ್ನ ಹೆಗಡೆ|

Updated on:Oct 10, 2025 | 4:59 PM

Share

ಮೈಸೂರು, (ಅಕ್ಟೋಬರ್ 09): ಮೈಸೂರಿನಲ್ಲಿ (Mysuru) ಬಾಲಕಿ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಅಲೆಮಾರಿ ಬಾಲಕಿ ಮೇಲಿನ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಕೆಡವಿದ್ದಾರೆ. ಹೊಟ್ಟೆಪಾಡಿಗಾಗಿ ಬಲೂನ್ ವ್ಯಾಪಾರಕ್ಕಾಗಿ ಮೈಸೂರು ದಸರಾಕ್ಕೆ (Mysuru Dasara) ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ತಂಗಿದ್ದವು. ಆದ್ರೆ, ನಿನ್ನೆ ರಾತ್ರಿ ಟೆಂಟ್ ನಲ್ಲಿ ಮಲಗಿದ್ದ 10 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದ. ಸದ್ಯ ಸಿಸಿಟಿವಿ ಆಧಾರದ ಮೇಲೆ ಹಂತಕ ಕಾರ್ತಿಕನನ್ನು ಪೊಲೀಸರು ಬಂಧಿಸಿದ್ದಾರೆ.

ಕೃತ್ಯ ಎಸಗಿ ಮೈಸೂರು ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಪರಾರಿಯಾಗಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಇನ್ನು ಮೇಟಗಳ್ಳಿ ಬಳಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಗುಂಡು ಹಾರಿಸಿದ್ದರೆ. ಹೀಗಾಗಿ ಆರೋಪಿ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ತಕ್ಷಣವೇ ಆರೋಪಿಯನ್ನು ಬಂಧಿಸಿದ ಪೊಲೀಸರು, ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಇದನ್ನು ಓದಿ: ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿ ಶವ ಪತ್ತೆ, ಅತ್ಯಾಚಾರ ಶಂಕೆ

ಕಾನ್ಸ್‌ಟೇಬಲ್ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ

ಕೊಳ್ಳೇಗಾಲದಲ್ಲಿ ಸಿಕ್ಕ ಕಾರ್ತಿಕ್​ ಮೇಟಗಳ್ಳಿ ಬಳಿ  ಕಾನ್ಸ್‌ಟೇಬಲ್ ವೆಂಕಟೇಶ್‌ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಸಿದ್ದಾನೆ. ಈ ವೇಳೆ ಸಬ್ ಇನ್ಸ್‌ಪೆಕ್ಟರ್‌ ಜೈಕೀರ್ತಿ ಅವರು ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಸದ್ಯ ಆರೋಪಿ ಕಾರ್ತಿಕ್‌ ನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಗುತ್ತಿದ್ದು, ಆಸ್ಪತ್ರೆಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಭೇಟಿ ಮಾಹಿತಿ ಪಡೆದುಕೊಂಡರು.

ಕಠಿಣ ಕ್ರಮಕ್ಕೆ ಆಗ್ರಹ

ಪಾಪ ಹೊಟ್ಟೆ ಪಾಡಿಗಾಗಿ ದೂರ ಊರಿನಿಂದ ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದ ಕಾರ್ತಿಕ್ ಅರೆಸ್ಟ್ ಆಗುತ್ತಿದ್ದಂತೆ ಹಲವರು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಗಲ್ಲು ಶಿಕ್ಷೆಗೆ ಗುರಿಪಡಿಸುವಂತೆ ಕೆಲವರು ಒತ್ತಾಯಿಸಿದ್ದರೆ, ಇನ್ನು ಕೆಲವರು ಎನ್‌ಕೌಂಟರ್ ಮಾಡೇಕೆಂದು ಆಗ್ರಹಿಸಿದ್ದಾರೆ.

ಯಾರು ಈ ಕೀಚಕ ಕಾರ್ತಿಕ್?

ಮೈಸೂರಿನ ಸಿದ್ದಲಿಂಗಪುರ ನಿವಾಸಿಯಾಗಿರುವ ಕಾರ್ತಿಕ್, ಮಂಡ್ಯದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ. ಇನ್ನು ಈ ಪ್ರಕರಣದಲ್ಲಿ 2 ವರ್ಷ ಜೈಲಿನಲ್ಲಿದ್ದು, ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಆದ್ರೆ, ಊರಿಗೆ ಹೋಗದೆ ಮದ್ಯ ಸೇವಿಸಿ ಎಲ್ಲೆಂದರಲ್ಲಿ ಅಲೆಯುತ್ತಿದ್ದ. ಮದ್ಯ ವ್ಯಸನಿ ಕಾರ್ತಿಕ್ ಕಣ್ಣಿಗೆ ಪಾಪ 10 ವರ್ಷದ ಬಾಲಕಿ ಬಿದ್ದಿದ್ದು, ಆಕೆಯನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ.

ಹೊಟ್ಟೆಪಾಡಿಗಾಗಿ ಮೈಸೂರಿಗೆ ಬಂದಿದ್ದ ಕುಟುಂಬ

ದಸರಾ ಸಮಯದಲ್ಲಿ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ (Kalaburagi) ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50 ಕ್ಕೂ ಹೆಚ್ಚು ಕುಟುಂಬ ಬಂದಿವೆ. ಇವರು ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ನೆಲೆಸಿದ್ದರು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್ಸವ ಮುಗಿಸಿ, ಗುರುವಾರ ಬೇರೆ ಕಡೆ ತೆರಳಲು ಸಿದ್ಧತೆ ನಡೆಸಿದ್ದರು. ಆದ್ರೆ, ಹಿಂದಿನ ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಆದ್ರೆ, ಬೆಳಗ್ಗೆ ಎಲ್ಲರೂ ಎದ್ದಾಗ ಬಾಲಕಿ ಸ್ಥಳದಿಂದ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್‌ನಿಂದ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಇಂದು (ಅಕ್ಟೋಬರ್ 09) ಬೆಳಗ್ಗೆ 6:30ರ ಸುಮಾರಿಗೆ ಜೋಪಡಿಯ ಪಕ್ಕದ ಗುಂಡಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಶವದ ಮೇಲೆ ಸರಿಯಾಗಿ ಬಟ್ಟೆಯಿರಲಿಲ್ಲ, ಇದರಿಂದ ಕುಟುಂಬಸ್ಥರು ಅತ್ಯಾಚಾರ ಮತ್ತು ಕೊಲೆಯ ಶಂಕೆ ವ್ಯಕ್ತಪಡಿಸಿದ್ದರು. ಬಳಿಕ ಪೊಲೀಸರು ಸಿಸಿಟಿವಿ ಪರಿಶೀಲನೆ ಮಾಡಿದ ಬಳಿಕ ಕಾರ್ತಿಕ್ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:54 pm, Thu, 9 October 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!