AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ನಿಲ್ದಾಣ, ಘಟಕಗಳಲ್ಲಿ ಧೂಮಪಾನ, ಮೂತ್ರ ವಿಸರ್ಜನೆ, ಉಗುಳುವಿಕೆ ನಿಷೇಧ: ಕೆಎಸ್​ಆರ್​ಟಿಸಿಗೆ ಹರಿದು ಬಂತು ಲಕ್ಷ ಲಕ್ಷ ಆದಾಯ

ಕೆಎಸ್ಆರ್​ಟಿಸಿ ಬಸ್ ನಿಲ್ದಾಣ, ಘಟಕ, ವಿಭಾಗೀಯ ಕಛೇರಿಗಳಲ್ಲಿ ಧೂಮಪಾನ, ಬಯಲು ಮೂತ್ರ ವಿಸರ್ಜನೆ, ಉಗುಳುವಿಕೆಯನ್ನು ಇಲಾಖೆ ನಿಷೇಧಿಸಿದ್ದು, ಒಂದು ವೇಳೆ ನಿಯಮ ಉಲ್ಲಂಘಿಸಿದರೇ ದಂಡ ಕಟ್ಟಬೇಕಾಗುತ್ತದೆ. ಹೀಗೆ ದಂಡದ ಮೂಲಕ ಕೆಎಸ್​ಆರ್​ಟಿಸಿಗೆ ಲಕ್ಷ ಲಕ್ಷ ರೂ. ಆದಾಯ ಹರಿದುಬಂದಿದೆ.

ಬಸ್ ನಿಲ್ದಾಣ, ಘಟಕಗಳಲ್ಲಿ ಧೂಮಪಾನ, ಮೂತ್ರ ವಿಸರ್ಜನೆ, ಉಗುಳುವಿಕೆ ನಿಷೇಧ: ಕೆಎಸ್​ಆರ್​ಟಿಸಿಗೆ ಹರಿದು ಬಂತು ಲಕ್ಷ ಲಕ್ಷ ಆದಾಯ
ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣ
Follow us
ವಿವೇಕ ಬಿರಾದಾರ
|

Updated on: Jun 06, 2023 | 2:39 PM

ಬೆಂಗಳೂರು: ಕೆಎಸ್ಆರ್​ಟಿಸಿ (KSRTC) ಬಸ್ ನಿಲ್ದಾಣ, ಘಟಕ, ವಿಭಾಗೀಯ ಕಛೇರಿಗಳಲ್ಲಿ ಧೂಮಪಾನ (Smoking), ಬಯಲು ಮೂತ್ರ ವಿಸರ್ಜನೆ, ಉಗುಳುವಿಕೆಯನ್ನು (Spiting) ಇಲಾಖೆ ನಿಷೇಧಿಸಿದ್ದು, ಒಂದು ವೇಳೆ ನಿಯಮ ಉಲ್ಲಂಘಿಸಿದರೇ ದಂಡ ಕಟ್ಟಬೇಕಾಗುತ್ತದೆ. ಹೀಗೆ ದಂಡದ ಮೂಲಕ ಕೆಎಸ್​ಆರ್​ಟಿಸಿಗೆ ಲಕ್ಷ ಲಕ್ಷ ರೂ. ಆದಾಯ ಹರಿದುಬಂದಿದೆ. 2022-23ನೇ ಸಾಲಿನಲ್ಲಿ ನಿಯಮ ಉಲ್ಲಂಘಿಸಿದವರಿಂದ ಒಟ್ಟು 53 ಲಕ್ಷದ 89 ಸಾವಿರದ 100 ರೂ. ದಂಡ ವಸೂಲಿ ಮಾಡಲಾಗಿದೆ.

ದೂಮಪಾನ ಮಾಡಬಾರದು ಎಂಬ ನಿಯಮ ಉಲ್ಲಂಘಿಸಿದ ಒಬ್ಬ ವ್ಯಕ್ತಿಗೆ 200 ರೂ. ದಂಡ ವಿಧಿಸಲಾಗಿದ್ದು ಒಟ್ಟು 29,51,200 ರೂಪಾಯಿ ದಂಡ ವಸೂಲಿ ಮಾಡಿಕೊಳ್ಳಲಾಗಿದೆ. ಬಯಲು ಮೂತ್ರ ವಿಸರ್ಜನೆ ಮಾಡಬಾರದು ನಿಯಮ ಉಲ್ಲಂಘಿಸಿದ ಒಬ್ಬ ವ್ಯಕ್ತಿಗೆ 100 ರೂ. ದಂಡ ವಿಧಿಸಲಾಗಿದ್ದು ಒಟ್ಟು 17,12,800 ರೂ. ದಂಡ ವಸೂಲಿಯಾಗಿದೆ. ಉಗುಳುವಿಕೆ ನಿಷೇಧಿಸಿದೆ ನಿಯಮ ಉಲ್ಲಂಘಿಸಿದ ವ್ಯಕ್ತಿಗೆ 100 ರೂ. ದಂಡ ವಿಧಿಸಲಾಗಿದ್ದು ಒಟ್ಟು 7,25,100 ರೂ. ದಂಡ ವಸೂಲಿ ಮಾಡಲಾಗಿದೆ.

ಇದನ್ನೂ ಓದಿ: ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳಿಗೆ ರಾಮಲಿಂಗಾ ರೆಡ್ಡಿ ಅಧ್ಯಕ್ಷ; ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ

ಕೆಎಸ್​ಆರ್​ಟಿಸಿ ಬಸ್​​ಗಳಲ್ಲಿ ಸ್ಮಾರ್ಟ್​​ಕಾರ್ಡ್ ದೊರೆಯುವವರೆಗೆ ಉಚಿತ ಪ್ರಯಾಣ ಹೇಗೆ?

ಶಕ್ತಿ ಸ್ಮಾರ್ಟ್‌ಕಾರ್ಡ್‌ ಅನ್ನು ವಿತರಿಸುವವರೆಗೆ ಭಾರತ ಸರ್ಕಾರ/ ಕರ್ನಾಟಕ ಸರ್ಕಾರದ ಇಲಾಖೆ / ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಉಚಿತ ಟಿಕೆಟ್‌ ವಿತರಿಸುವ ಸ೦ದರ್ಭದಲ್ಲಿ ಪರಿಗಣಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಾಲ್ಕು ಸಂಸ್ಥೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದ್ದು, ಕೆಲವೊಂದು ಷರತ್ತುಗಳೊಂದಿಗೆ ಸೌಲಭ್ಯ ಒದಗಿಸಲು ಆದೇಶಿಸಲಾಗಿದೆ. ರಾಜ್ಯದ ನಾಲ್ಕು ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.ನಿಗಮ), ಬೆ೦ಗಳೂರು ಮಹಾನಗರ ಸಾರಿಗೆ ಸ೦ಸ್ಥೆ (ಬೆ೦.ಮ.ಸಾ.ಸ೦ಸ್ಥೆ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ (ವಾ.ಕ.ರ.ಸಾ.ಸ೦ಸ್ಥೆ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕ.ಕ.ರ.ಸಾ.ನಿಗಮ) ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ನಗರ, ಸಾಮಾನ್ಯ ಹಾಗೂ ವೇಗದೂತ (ಐ/65) ಬಸ್ಸುಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಅಧಿಸೂಚನೆ ತಿಳಿಸಿದೆ.

ಯಾವೆಲ್ಲ ಬಸ್​ಗಳಲ್ಲಿ ಉಚಿತ ಪ್ರಯಾಣ?

ಕೆಎಸ್​ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್​​ಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಯಾವೆಲ್ಲ ಬಸ್​ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಇಲ್ಲ?

  • ಎಸಿ, ನಾನ್​ ಎಸಿ ಸ್ಲೀಪರ್​ ಬಸ್​ಗಳು
  • ಎಸಿ ಮತ್ತು ಐಷಾರಾಮಿ ಬಸ್​ಗಳು
  • ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್​ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್​ ಬಸ್​ಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ
  • ಅಂತಾರಾಜ್ಯ ಪ್ರಯಾಣಕ್ಕಿಲ್ಲ ಉಚಿತ ಸೌಲಭ್ಯ
  • ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಶೇ 50ರಷ್ಟು ಸೀಟ್ ಪುರುಷರಿಗೆ ಮೀಸಲು

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ