ಬೆಂಗಳೂರು: ಕೆಎಸ್ಆರ್ಟಿಸಿ (KSRTC) ಬಸ್ ನಿಲ್ದಾಣ, ಘಟಕ, ವಿಭಾಗೀಯ ಕಛೇರಿಗಳಲ್ಲಿ ಧೂಮಪಾನ (Smoking), ಬಯಲು ಮೂತ್ರ ವಿಸರ್ಜನೆ, ಉಗುಳುವಿಕೆಯನ್ನು (Spiting) ಇಲಾಖೆ ನಿಷೇಧಿಸಿದ್ದು, ಒಂದು ವೇಳೆ ನಿಯಮ ಉಲ್ಲಂಘಿಸಿದರೇ ದಂಡ ಕಟ್ಟಬೇಕಾಗುತ್ತದೆ. ಹೀಗೆ ದಂಡದ ಮೂಲಕ ಕೆಎಸ್ಆರ್ಟಿಸಿಗೆ ಲಕ್ಷ ಲಕ್ಷ ರೂ. ಆದಾಯ ಹರಿದುಬಂದಿದೆ. 2022-23ನೇ ಸಾಲಿನಲ್ಲಿ ನಿಯಮ ಉಲ್ಲಂಘಿಸಿದವರಿಂದ ಒಟ್ಟು 53 ಲಕ್ಷದ 89 ಸಾವಿರದ 100 ರೂ. ದಂಡ ವಸೂಲಿ ಮಾಡಲಾಗಿದೆ.
ದೂಮಪಾನ ಮಾಡಬಾರದು ಎಂಬ ನಿಯಮ ಉಲ್ಲಂಘಿಸಿದ ಒಬ್ಬ ವ್ಯಕ್ತಿಗೆ 200 ರೂ. ದಂಡ ವಿಧಿಸಲಾಗಿದ್ದು ಒಟ್ಟು 29,51,200 ರೂಪಾಯಿ ದಂಡ ವಸೂಲಿ ಮಾಡಿಕೊಳ್ಳಲಾಗಿದೆ. ಬಯಲು ಮೂತ್ರ ವಿಸರ್ಜನೆ ಮಾಡಬಾರದು ನಿಯಮ ಉಲ್ಲಂಘಿಸಿದ ಒಬ್ಬ ವ್ಯಕ್ತಿಗೆ 100 ರೂ. ದಂಡ ವಿಧಿಸಲಾಗಿದ್ದು ಒಟ್ಟು 17,12,800 ರೂ. ದಂಡ ವಸೂಲಿಯಾಗಿದೆ. ಉಗುಳುವಿಕೆ ನಿಷೇಧಿಸಿದೆ ನಿಯಮ ಉಲ್ಲಂಘಿಸಿದ ವ್ಯಕ್ತಿಗೆ 100 ರೂ. ದಂಡ ವಿಧಿಸಲಾಗಿದ್ದು ಒಟ್ಟು 7,25,100 ರೂ. ದಂಡ ವಸೂಲಿ ಮಾಡಲಾಗಿದೆ.
ಇದನ್ನೂ ಓದಿ: ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳಿಗೆ ರಾಮಲಿಂಗಾ ರೆಡ್ಡಿ ಅಧ್ಯಕ್ಷ; ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ
ಶಕ್ತಿ ಸ್ಮಾರ್ಟ್ಕಾರ್ಡ್ ಅನ್ನು ವಿತರಿಸುವವರೆಗೆ ಭಾರತ ಸರ್ಕಾರ/ ಕರ್ನಾಟಕ ಸರ್ಕಾರದ ಇಲಾಖೆ / ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಉಚಿತ ಟಿಕೆಟ್ ವಿತರಿಸುವ ಸ೦ದರ್ಭದಲ್ಲಿ ಪರಿಗಣಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಾಲ್ಕು ಸಂಸ್ಥೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದ್ದು, ಕೆಲವೊಂದು ಷರತ್ತುಗಳೊಂದಿಗೆ ಸೌಲಭ್ಯ ಒದಗಿಸಲು ಆದೇಶಿಸಲಾಗಿದೆ. ರಾಜ್ಯದ ನಾಲ್ಕು ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.ನಿಗಮ), ಬೆ೦ಗಳೂರು ಮಹಾನಗರ ಸಾರಿಗೆ ಸ೦ಸ್ಥೆ (ಬೆ೦.ಮ.ಸಾ.ಸ೦ಸ್ಥೆ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ (ವಾ.ಕ.ರ.ಸಾ.ಸ೦ಸ್ಥೆ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕ.ಕ.ರ.ಸಾ.ನಿಗಮ) ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ನಗರ, ಸಾಮಾನ್ಯ ಹಾಗೂ ವೇಗದೂತ (ಐ/65) ಬಸ್ಸುಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಅಧಿಸೂಚನೆ ತಿಳಿಸಿದೆ.
ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್ಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ