Bengaluru: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣ: ನಾಲ್ವರು ಆರ್‌ಒಗಳ ಬಂಧನ

ಬೆಂಗಳೂರಿನಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು, ನಾಲ್ವರು ಆರ್​ಒಗಳನ್ನು ಬಂಧಿಸಿದ್ದಾರೆ.

Bengaluru: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣ: ನಾಲ್ವರು ಆರ್‌ಒಗಳ ಬಂಧನ
ಸಾಂಧರ್ಬಿಕ ಚಿತ್ರ
Edited By: Rakesh Nayak Manchi

Updated on: Nov 26, 2022 | 9:16 PM

ಬೆಂಗಳೂರು: ನಗರದಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ (Illegal in voter ID revision) ಪ್ರಕರಣ ಸಂಬಂಧ ಹಲಸೂರು ಗೇಟ್ ಠಾಣೆ ಪೊಲೀಸರು ನಾಲ್ವರು ಆರ್‌ಒಗಳ ಬಂಧಿಸಿದ್ದಾರೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಆರ್‌ಒ ವಿ.ಬಿ.ಭೀಮಾಶಂಕರ್, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಆರ್‌ಒ ಸೊಹೇಲ್ ಅಹ್ಮದ್‌, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಆರ್​ಒ ಮಹೇಶ್​, ಮಹದೇವಪುರ ವಿಧಾನಸಭಾ ಕ್ಷೇತ್ರದ ಆರ್‌ಒ ಚಂದ್ರಶೇಖರ್ ಬಂಧಿತರು. ಬಿಎಲ್‌ಒ ಕಾರ್ಡ್‌ಗಳನ್ನು ಅಕ್ರಮವಾಗಿ ಮಾಡಿಕೊಟ್ಟಿದ್ದ ಆರೋಪ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) 15 ರಿಟರ್ನಿಂಗ್ ಆಫೀಸರ್​ಗಳಿಗೆ (ಆರ್​ಒ) ನೊಟೀಸ್ ಜಾರಿ ಮಾಡಿದ್ದರು.

ಏನಿದು ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ?

ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿರುದ್ಧ ಹಲಸೂರುಗೇಟ್‌ ಮತ್ತು ಕಾಡುಗೋಡಿ ಪೊಲೀಸ್‌ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಮತದಾರರ ಪಟ್ಟಿವಿಶೇಷ ಪರಿಷ್ಕರಣೆ 2023 ಕಾರ್ಯಚಟುವಟಿಕೆಗಳ ಕುರಿತು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಶೈಕ್ಷಣಿಕ ಸಾಂಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಷರತ್ತುಬದ್ಧ ಅನುಮತಿಯನ್ನು ಬಿಬಿಎಂಪಿ ನೀಡಿತ್ತು.

ಇದನ್ನೂ ಓದಿ: ವೋಟರ್ ಐಡಿ ಪರಿಷ್ಕರಣೆಯಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧವೂ ಕ್ರಮಗೈಕೊಳ್ಳಲಾಗುವುದು: ಸಿಎಂ ಬೊಮ್ಮಾಯಿ

ಈ ಸಂಸ್ಥೆಯ ವಿರುದ್ಧ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದಿದ್ದು ಷರತ್ತು ಉಲ್ಲಂಘಿಸಿರುವುದನ್ನು ಪರಿಗಣಿಸಿ ಅನುಮತಿ ಪತ್ರವನ್ನು ರದ್ದುಪಡಿಸಲಾಗಿದೆ. ಜೊತೆಗೆ ಈ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ಹಲಸೂರುಗೇಟ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:16 pm, Sat, 26 November 22

Web contact

TV9 Kannada

Read More
Follow Us