Bangalore: ಬಿಬಿಎಂಪಿ ಜಂಟಿ ಆಯುಕ್ತರ ಕಾರು ಅಪಘಾತ; ಕಾರು ಚಾಲಕ ವಶಕ್ಕೆ

ಮನೆಗೆ ಹೋಗುತ್ತಿದ್ದ ಬಿಬಿಎಂಪಿ ಜಂಟಿ ಆಯುಕ್ತರ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಡಿಕ್ಕಿ ಹೊಡೆದ ಕಾರಿನ ಚಾಲಕ ಮದ್ಯ ಸೇವನೆ ಮಾಡಿರುವುದು ತಿಳಿದುಬಂದಿದೆ.

Bangalore: ಬಿಬಿಎಂಪಿ ಜಂಟಿ ಆಯುಕ್ತರ ಕಾರು ಅಪಘಾತ; ಕಾರು ಚಾಲಕ ವಶಕ್ಕೆ
ಬಿಬಿಎಂಪಿ ಜಂಟಿ ಆಯುಕ್ತರ ಕಾರು ಅಪಘಾತ
Edited By:

Updated on: Aug 16, 2022 | 7:29 AM

ಬೆಂಗಳೂರು: ಮನೆಗೆ ಹೋಗುತ್ತಿದ್ದ ಬಿಬಿಎಂಪಿ ಜಂಟಿ ಆಯುಕ್ತರ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ರಾಜರಾಜೇಶ್ವರಿ ನಗರದ ಗೇಟ್​ ಬಳಿ ಜಂಟಿ ಆಯುಕ್ತರ ಕಾರಿನ ಮುಂಭಾಗದಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಘಟನೆ ಸಂಬಂಧ ಕಾರು ಚಾಲಕನನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಆತ ಮದ್ಯಪಾನ ಸೇವನೆ ಮಾಡಿರುವುದು ತಿಳಿದುಬಂದಿದೆ.

ಕರ್ತವ್ಯ ಮುಗಿಸಿ ಬಿಬಿಎಂಪಿ ಜಂಟಿ ಆಯುಕ್ತರು ಕಾರು ಮೂಲಕ ಮನೆಗೆ ವಾಪಸ್ಸಾಗುತ್ತಿದ್ದರು. ಆರ್​ಆರ್ ನಗರ ಗೇಟ್ ಬಳಿ ಕಾರು ತಲುಪುತ್ತಿದ್ದಂತೆ ಮುಂಭಾಗದಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಘಟನೆ ಸಂಬಂದ ಕಾರು ಚಾಲಕ ಶಿವಶಂಕರ್​ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದ ತಪಾಸಣೆ ನಡೆಸಿದ್ದಾರೆ. ಈ ವೇಳೆ ಶಿವಶಂಕರ್ ಮದ್ಯಪಾನ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಬ್ಯಾಟರಾಯನ ಸಂಚಾರಿ ಠಾಣಾ ಪೊಲೀಸರು ಶಿವಶಂಕರ್ ವಿರುದ್ಧ ಡಿಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 am, Tue, 16 August 22