ರಕ್ಷಣಾ ಇಲಾಖೆಯ ಮೊರೆ ಹೋದ ಬಿಬಿಎಂಪಿ; ತಾತ್ಕಾಲಿಕ ಫೀಲ್ಡ್ ಆಸ್ಪತ್ರೆ ನಿರ್ಮಾಣಕ್ಕೆ ಮನವಿ

ರಕ್ಷಣಾ ಇಲಾಖೆ ಹಾಗೂ ವಾಯು ಸೇನೆಗೆ ಸೇರಿದ ಕಮಾಂಡೋ ಆಸ್ಪತ್ರೆಯಲ್ಲಿ ಬೆಡ್ ನೀಡುವಂತೆ ಬಿಬಿಎಂಪಿ ಮನವಿ ಮಾಡಿದೆ. ಸರ್ಕಾರದ ಮುಖಾಂತರ ನಗರದಲ್ಲಿ ತಾತ್ಕಾಲಿಕ ಫೀಲ್ಡ್ ಹಾಸ್ಪಿಟಲ್ ನಿರ್ಮಾಣಕ್ಕೆ ಕೂಡ ಬಿಬಿಎಂಪಿ ಕೋರಿದ್ದು, ಇದಕ್ಕೂ ಮುನ್ನ ಬೆಡ್‌ಗಳನ್ನು ನೀಡುವಂತೆ ಮನವಿ ಮಾಡಿದೆ.

ರಕ್ಷಣಾ ಇಲಾಖೆಯ ಮೊರೆ ಹೋದ ಬಿಬಿಎಂಪಿ; ತಾತ್ಕಾಲಿಕ ಫೀಲ್ಡ್ ಆಸ್ಪತ್ರೆ ನಿರ್ಮಾಣಕ್ಕೆ ಮನವಿ
ಪ್ರಾತಿನಿಧಿಕ ಚಿತ್ರ
Follow us
preethi shettigar
|

Updated on: May 03, 2021 | 9:36 AM

ಬೆಂಗಳೂರು: ಕೊರೊನಾ ಎರಡನೇ ಅಲೆಯ ಪ್ರಸರಣ ಅತೀ ವೇಗವಾಗಿದ್ದು, ಸಾವಿನ ಸಂಖ್ಯೆಯಲ್ಲೂ ಕೂಡ ಹೆಚ್ಚಳ ಕಂಡು ಬಂದಿದೆ. ಇನ್ನು ಬೆಂಗಳೂರಿನಲ್ಲಿ ಕೊರೊನಾ ಸೋಂಕು ತೀವ್ರ ರೂಪ ಪಡೆದುಕೊಂಡಿದ್ದು, ಸಿಲಿಕಾನ್ ಸಿಟಿಯಲ್ಲಿ ಆತಂಕ ಮೂಡಿದೆ. ಹೀಗಾಗಿ ಬಿಬಿಎಂಪಿ ಈ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ರಕ್ಷಣಾ ಇಲಾಖೆಯ ಮೊರೆ ಹೋಗಿದೆ. ನಗರದಲ್ಲಿರುವ ಆಸ್ಪತ್ರೆಗಳು ಮತ್ತು ಕೋವಿಡ್ ಕೇರ್ ಸೆಂಟರ್​ಗಳು ಸೋಂಕಿತರಿಂದ ಭರ್ತಿಯಾಗಿವೆ. ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳ ಅಭಾವ ಉಂಟಾಗುವ ಮೊದಲೇ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಬಿಬಿಎಂಪಿ ಈ ನಿರ್ಧಾರ ತೆಗೆದುಕೊಂಡಿದೆ.

ಈ ನಿಟ್ಟಿನಲ್ಲಿ ರಕ್ಷಣಾ ಇಲಾಖೆ ಹಾಗೂ ವಾಯು ಸೇನೆಗೆ ಸೇರಿದ ಕಮಾಂಡೋ ಆಸ್ಪತ್ರೆಯಲ್ಲಿ ಬೆಡ್ ನೀಡುವಂತೆ ಬಿಬಿಎಂಪಿ ಮನವಿ ಮಾಡಿದೆ. ಸರ್ಕಾರದ ಮುಖಾಂತರ ನಗರದಲ್ಲಿ ತಾತ್ಕಾಲಿಕ ಫೀಲ್ಡ್ ಹಾಸ್ಪಿಟಲ್ ನಿರ್ಮಾಣಕ್ಕೆ ಕೂಡ ಬಿಬಿಎಂಪಿ ಕೋರಿದ್ದು, ಇದಕ್ಕೂ ಮುನ್ನ ಬೆಡ್‌ಗಳನ್ನು ನೀಡುವಂತೆ ಮನವಿ ಮಾಡಿದೆ.

ಈಗಾಗಲೇ ಬೆಡ್ ಭರ್ತಿಯಾಗಿದ್ದು, ಐಸಿಯು ಬೆಡ್‌ಗಳ ಸಂಖ್ಯೆ ಕಡಿಮೆ ಇದೆ ಎಂದು ಬಿಬಿಎಂಪಿ ರಕ್ಷಣಾ ಇಲಾಖೆಗೆ ಮಾಹಿತಿ ನೀಡಿದೆ. ಫೀಲ್ಡ್ ಆಸ್ಪತ್ರೆಯನ್ನು ಆದಷ್ಟು ಬೇಗ ನಿರ್ಮಾಣ ಮಾಡಿಕೊಡಿ ಎಂದು ಮನವಿ ಮಾಡಿದೆ. ಆದರೆ ಈಗಾಗಲೇ ಸೇನೆಯಲ್ಲಿರುವ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರಿಗೆ ಬೆಡ್​ಗಳನ್ನು ನೀಡಿದ್ದು, ಹೀಗಾಗಿ ಬೆಡ್ ಭರ್ತಿಯಾಗಿದೆ. ಅಲ್ಲದೇ ಐಸಿಯು ಬೆಡ್​ಗಳ ಸಂಖ್ಯೆ ಕಡಿಮೆ ಇರುವ ಬಗ್ಗೆ ಕೂಡ ಕಮಾಂಡೋ ಆಸ್ಪತ್ರೆ ಮಾಹಿತಿ ನೀಡಿದೆ.

ಈ ನಿಟ್ಟಿನಲ್ಲಿ ಇದಕ್ಕೆ ಪರ್ಯಾಯವಾಗಿ ಫೀಲ್ಡ್ ಹಾಸ್ಪಿಟಲ್​ಗಳನ್ನ ನಿರ್ಮಾಣ ಮಾಡಿ, ಅಗತ್ಯ ಸೇವೆ ನೀಡುವ ವ್ಯವಸ್ಥೆ ಮಾಡಿಕೊಡಲು ರಕ್ಷಣಾ ಇಲಾಖೆಗೆ ಸರ್ಕಾರದ ಮುಖಾಂತರ ಬಿಬಿಎಂಪಿ ಮನವಿ ಮಾಡಿದೆ.

ಇದನ್ನೂ ಓದಿ:

ಜೀವಂತವಾಗಿದೆಯೇ ಬಿಬಿಎಂಪಿ ಆರೋಗ್ಯ ವಿಭಾಗ? ಶವ ದಹನ ಹೊಗೆಯಿಂದ ಕಂಗಾಲಾಗಿದ್ದಾರೆ ಸ್ಥಳೀಯರು

ಖಾಸಗಿ ಆಸ್ಪತ್ರೆಗಳು ಸುಖಾಸುಮ್ಮನೆ ಬೆಡ್ ಇಲ್ಲ ಎನ್ನುವಂತಿಲ್ಲ; ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಸಿಟಿಜನ್​​ ಹೆಲ್ಪ್​ ಡೆಸ್ಕ್

(Bangalore BBMP Seeking Defense ministry for preparing field Hospital in Bengaluru)

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ