ಮಕ್ಕಳನ್ನು ತಬ್ಬಲಿ ಮಾಡಿ ಇಹಲೋಕ ತ್ಯಜಿಸಿದ ದಂಪತಿ; ಮುಗಿಲು ಮುಟ್ಟಿದ ಮಕ್ಕಳ ಆಕ್ರಂದನ
ಕೊರೊನಾ ಹಾವಳಿ ದೇಶದಲ್ಲಿ ಹೆಚ್ಚಾಗುತ್ತಿದ್ದು, ಮನೆಯ ಆಧಾರ ಸ್ತಂಬದಂತಿದ್ದ ದಂಪತಿ ಕೊರೊನಾ ಸೋಂಕು ತಗುಲಿ ಬಲಿಯಾಗಿದ್ದಾರೆ. ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು: ಮಕ್ಕಳನ್ನು ತಬ್ಬಲಿ ಮಾಡಿ ದಂಪತಿ ಇಹಲೋಕ ತ್ಯಜಿಸಿದ ಧಾರುಣ ಘಟನೆಯೊಂದು ನಡೆದಿದೆ. ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದೆ. ಕೊರೊನಾ ಹಾವಳಿಯ ಅತೀರೇಕ ಕುಟುಂಬದ ಆಧಾರಸ್ತಂಭವನ್ನೇ ಕಿತ್ತೆಸೆಯುತ್ತಿದೆ. ದಂಪತಿಯರಿಬ್ಬರು ಮೂರು ದಿನಗಳ ಹಿಂದೆ ನ್ಯುಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದರು. ಹಾಗಾಗಿ ಮೆಗಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಟೆಸ್ಟ್ ಮಾಡಿಸಿದಾಗ ಕೊವಿಡ್ ಪಾಸಿಟಿವ್ ರಿಪೋರ್ಟ್ ಬಂದಿದೆ.
ಇಬ್ಬರನ್ನೂ ಜೊತೆಯಲ್ಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಗುರವಾರ ಸಾವಿಗೀಡಾಗಿದ್ದಾರೆ. ಪಿಪಿಇ ಕಿಟ್ ಹಾಕಿಕೊಂಡು ಮೃತದೇಹಕ್ಕೆ ಮಗನು ಪೂಜೆ ಸಲ್ಲಿಸಿದ್ದಾರೆ. ಚಿತಾಗಾರದ ಮುಂದೆಯೇ ಶಾಸ್ತ್ರೋಸ್ತ್ರವಾಗಿ ಪೂಜೆ ಸಲ್ಲಿಸಲಾಗಿದೆ.
ಆಸ್ಪತ್ರೆಯಲ್ಲಿ ಬೆಡ್ ಇಲ್ಲದೇ ಬೇರೊಂದು ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಹಾರಿ ಹೋದ ಪ್ರಾಣಪಕ್ಷಿ
ಕೊರೊನಾ ಎರಡನೇ ಅಲೆ ಆರ್ಭಟ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರನ್ನು ದಾಖಲಿಸಲು ಬೆಡ್ಗಳಿಲ್ಲದೇ ಜನರೆಲ್ಲ ಸಾವಿಗೀಡಾಗುತ್ತಿರುವ ಪರಿಸ್ಥಿತಿ ಎದುರಾಗಿದೆ. ಕೊರೊನಾ ಮಹಾಮಾರಿಯ ಹಾವಳಿ ಅಷ್ಟರ ಮಟ್ಟಿಗೆ ದೇಶಾದ್ಯಂತ ಆವರಿಸಿಕೊಂಡಿದೆ. ಬೆಂಗಳೂರಿನಲ್ಲಿ ಹಲವು ಸೋಂಕಿತರು ಸೂಕ್ತ ವ್ಯವಸ್ಥೆ ಇಲ್ಲದೇ ಪ್ರಾಣಾಪಾಯಕ್ಕೆ ಸಿಲುಕುತ್ತಿದ್ದು, ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ನಗರದಲ್ಲಿ ಕಳೆದ 3 ದಿನಗಳ ಹಿಂದೆ ಅನಾರೋಗ್ಯಕ್ಕೀಡಾದ ವ್ಯಕ್ತಿಯ ಕುಟುಂಬಸ್ಥರು ಅವರಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗಳಿಗೆ ಅಲೆದಾಡಿ ಬೆಡ್ಗಾಗಿ ಹುಡುಕಾಟ ನಡೆಸುವಷ್ಟರಲ್ಲಿ ವ್ಯಕ್ತಿಯ ಪ್ರಾಣಪಕ್ಷಿಯೇ ಹಾರಿಹೋದ ದಾರುಣ ಘಟನೆಯೊಂದು ನಡೆದಿದೆ.
ವ್ಯಕ್ತಿಯ ಆರೋಗ್ಯದಲ್ಲಿ ಅನಾರೋಗ್ಯ ಕಾಣಿಸಿಕೊಂಡ ಕಾರಣ ಮೊದಲು ಅವರನ್ನು ಕರೆದುಕೊಂಡು ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ಕೊರೊನಾ ಟೆಸ್ಟ್ ಮಾಡಿಸಿದಾಗ ಕೊವಿಡ್ ನೆಗೆಟಿವ್ ರಿಪೋರ್ಟ್ ಬಂದಿದೆ. ಆದರೆ ನಂತರ ಜ್ವರ, ಉಸಿರಾಟದ ಸಮಸ್ಯೆ ಕಾಡುತ್ತಿತ್ತು. ಆದ್ದರಿಂದ ಮತ್ತೊಮ್ಮೆ ಕೊರೊನಾ ಟೆಸ್ಟ್ ಮಾಡಿಸಲಾಗಿ ಪಾಸಿಟಿವ್ ರಿಪೋರ್ಟ್ ಬಂದಿದೆ. ದುರದೃಷ್ಟವಶಾತ್ ಆಸ್ಪತ್ರೆಯಲ್ಲಿ ದಾಖಲಿಸಲು ಬೆಡ್ಗಳ ಕೊರತೆ ಇದೆ ಎಂದು ತಿಳಿಸಿದ್ದರಿಂದ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಿದ್ದಾರೆ. ದುರಂತವೆಂದರೆ ರಾಮಯ್ಯ ಆಸ್ಪತ್ರೆಯಲ್ಲಿಯೂ ಬೆಡ್ ಸಮಸ್ಯೆ ಎದುರಾಗಿದೆ. ನಂತರ ಬೇರೆ ದಾರಿಯಿಲ್ಲದೇ ರಾಜನಕುಂಟೆಯ ಚಿಗುರು ಆಸ್ಪತ್ರೆಗೆ ಹೋಗುವ ಸಂದರ್ಭ ಎದುರಾಗಿದೆ. ಆದರೆ, ಅಲ್ಲಿಗೆ ಹೋಗಿ ತಲುಪಿ ಚಿಕಿತ್ಸೆ ಪಡೆಯುವಾಗ ವ್ಯಕ್ತಿಯ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ.
ಇದನ್ನೂ ಓದಿ: ಕೊವಿಡ್ನಿಂದ ಮೃತಪಟ್ಟವರನ್ನು ಚಿತಾಗಾರಕ್ಕೆ ಸಾಗಿಸಲು ಯಾವುದೇ ಶುಲ್ಕ ಇಲ್ಲ: ಬಿಬಿಎಂಪಿ ಸ್ಪಷ್ಟನೆ
Covid World Update: ಜಗತ್ತಿನಲ್ಲಿ ಕೊವಿಡ್ ಸೋಂಕಿತರ ಸಂಖ್ಯೆ 13.88 ಕೋಟಿ, 29 ಲಕ್ಷ ದಾಟಿದ ಸಾವಿನ ಸಂಖ್ಯೆ