BBMP Election 2022: ವೋಟರ್ ಐಡಿಗೆ ಆಧಾರ್ ಕಾರ್ಡ್ ಜೋಡಣೆ ಮಾಡಲು ಮತದಾರರ ನಿರುತ್ಸಾಹ; ಶೇ.1ರಷ್ಟು ಮಾತ್ರ ಆಧಾರ್ ಜೋಡಣೆ

ಬಿಬಿಎಂಪಿ ಚುನಾವಣೆ: ಮತದಾನದ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಬೆಂಗಳೂರು ನಗರದ ಮತದಾರರು ನಿರುತ್ಸಾಹ ತೋರುತ್ತಿದ್ದಾರೆ. 94ಲಕ್ಷಕ್ಕೂ ಹೆಚ್ಚು ಮತದಾರರು ಇರುವ ನಗರದಲ್ಲಿ ಈವರೆಗೆ ಶೇ.1ರಷ್ಟು ಮಂದಿ ಆಧಾರ್ ಕಾರ್ಡ್ ಜೋಡಣೆ ಮಾಡಿದ್ದಾರೆ.

BBMP Election 2022: ವೋಟರ್ ಐಡಿಗೆ ಆಧಾರ್ ಕಾರ್ಡ್ ಜೋಡಣೆ ಮಾಡಲು ಮತದಾರರ ನಿರುತ್ಸಾಹ; ಶೇ.1ರಷ್ಟು ಮಾತ್ರ ಆಧಾರ್ ಜೋಡಣೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Aug 23, 2022 | 8:46 AM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike – BBMP) ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ (Karnataka State Election Commission) ಸಿದ್ಧತೆ ತೀವ್ರಗೊಳಿಸಿದೆ. ಪಾಲಿಕೆಯ ಸುತ್ತೋಲೆಯಂತೆ ಮತದಾನದ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ನಗರದ ಜನರು ನಿರುತ್ಸಾಹ ತೋರುತ್ತಿದ್ದಾರೆ. 94 ಲಕ್ಷಕ್ಕೂ ಹೆಚ್ಚು ಮತದಾರರು ಇರುವ ಬೆಂಗಳೂರು ನಗರದಲ್ಲಿ ಈವರೆಗೆ ಕೇವಲ 900ರ ಆಸುಪಾಸಿನಲ್ಲಿ ಮತದಾನದ ಚೀಟಿಗೆ ಆಧಾರ್ ಕಾರ್ಡ್ ಜೋಡಣೆ ಮಾಡಿದ್ದಾರೆ. ಈ ಬೆಳವಣಿಗೆಯು ಬಿಬಿಎಂಪಿ, ರಾಜ್ಯ ಚುನಾವಣೆ ಆಯೋಗಕ್ಕೆ ತಲೆನೋವಾಗಿ ಪರಿಣಮಿಸಿದೆ.

ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಮತದಾರರೂ ತಮ್ಮ ಚುನಾವಣಾ ಗುರುತಿನ ಚೀಟಿಯನ್ನು (Electors Photo Identity Card – EPIC) ಆಧಾರ್​ ಕಾರ್ಡ್​ (Aadhaar Card) ಸಂಖ್ಯೆಗೆ ಲಿಂಕ್ ಮಾಡಬೇಕು ಎಂದು ಪಾಲಿಕೆಯು ಸುತ್ತೋಲೆ ಹೊರಡಿಸಿತ್ತು. ‘ಭಾರತ ಚುನಾವಣಾ ಆಯೋಗದ ಸುತ್ತೋಲೆ ಮತ್ತು ಆದೇಶದಂತೆ ಎಲ್ಲರೂ ತಮ್ಮ ಮತದಾರರ ಗುರುತಿನ ಚೀಟಿಯನ್ನು ಆಧಾರ್ ಸಂಖ್ಯೆಗೆ ಲಿಂಕ್ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಿದೆ’ ಎಂದು ಬಿಬಿಎಂಪಿ ಸ್ಪಷ್ಟನೆ ನೀಡಿತ್ತು. ಅಲ್ಲದೆ, ಒಂದು ವೇಳೆ ಮತದಾರರ ಗುರುತಿನ ಚೀಟಿಯನ್ನು ಆಧಾರ್ ಸಂಖ್ಯೆಗೆ ಲಿಂಕ್ ಮಾಡಿಕೊಳ್ಳದಿದ್ದರೆ ಮತದಾರರ ಗುರುತಿನ ಚೀಟಿ ರದ್ದಾಗುವ ಸಾಧ್ಯತೆಯಿರುತ್ತದೆ. ಎಲ್ಲ ಮತದಾರರು ತಮ್ಮ ಕುಟುಂಬದ ಎಲ್ಲ ಮತದಾರರ ಗುರುತಿನ ಚೀಟಿಗಳಿಗೆ ಆ್ಯಪ್ ಮೂಲಕ ಆಧಾರ್ ಕಾರ್ಡ್​ ನಂಬರ್ ಲಿಂಕ್ ಮಾಡಬಹುದು’ ಎಂದು ಸಲಹೆ ಮಾಡಿದೆ.

ಅದಾಗ್ಯೂ, ನಗರದ ಜನರು ತಮ್ಮ ಮತದಾನದ ಚೀಟಿಗೆ ಆಧಾರ್ ಕಾರ್ಡ್ ಅನ್ನು ಜೋಡಣೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂಬುದನ್ನು ಈವರೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿದ ಜನರ ಸಂಖ್ಯೆಯನ್ನು ಗಮನಿಸಿದಾಗ ತಿಳಿಯುತ್ತದೆ. 94 ಲಕ್ಷಕ್ಕೂ ಹೆಚ್ಚು ಮತದಾರರು ಇರುವ ನಗರದಲ್ಲಿ ಕಳೆದ ಆಗಸ್ಟ್ 1ರಿಂದ ಆಗಸ್ಟ್ 22ರ ವರೆಗೆ ಶೇ.1ರಷ್ಟು ಅಂದರೆ 900ರ ಆಸುಪಾಸಿನಲ್ಲಿ ಮತದಾನದ ಚೀಟಿಗೆ ಆಧಾರ್ ಕಾರ್ಡ್ ಜೋಡಣೆ ಮಾಡಿದ್ದಾರೆ. ಬೆರಳೆಣಿಕೆಯಷ್ಟು ಮತದಾರರಿಂದ ಮಾತ್ರ ಆಧಾರ್ ಕಾರ್ಡ್ ಜೋಡಣೆ ಮಾಡಿರುವುದನ್ನು ಗಮನಿಸಿದ ಬಿಬಿಎಂಪಿ ಹಾಗೂ ರಾಜ್ಯ ಚುನಾವಣೆ ಆಯೋಗಕ್ಕೆ ತಲೆನೋವಾಗಿ ಪರಿಣಮಿಸಿದೆ.

ಬೆಂಗಳೂರನ್ನ ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ಶೇ.40 ರಿಂದ 50 ರಷ್ಟು ಎಪಿಕ್ ಕಾರ್ಡ್​ಗಳು ಆಧಾರ್​ ಕಾರ್ಡ್​ಗೆ ಲಿಂಗ್ ಆಗಿದೆ. ಸದ್ಯ ರಾಜ್ಯ ಚುನಾವಣಾ ಆಯೋಗದಿಂದ ಈ ನಿಯಮವನ್ನು ಕಡ್ಡಾಯ ಮಾಡಿಲ್ಲ. ಇದೇ ಕಾರಣಕ್ಕೆ ಮತದಾನದ ಚೀಟಿಗೆ ಆಧಾರ್ ಲಿಂಕ್ ಮಾಡಲು ಜನರು ನಿರ್ಲಕ್ಷ್ಯ ತೋರುತ್ತಿದ್ದಾರೆ.

ಮತದಾನದ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಯಾವುದೇ ಸೇವೆ ಕಡಿತ ಮಾಡುವ ಪ್ರಸ್ತಾಪ ಸದ್ಯಕ್ಕಿಲ್ಲ. ಈ ಕುರಿತು ಚುನಾವಣಾ ಆಯೋಗದಿಂದ ಯಾವುದೇ ನಿರ್ದೇಶನ ಬಂದಿಲ್ಲ. ಸದ್ಯ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಉಮೇಶ್ ಹೇಳಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 am, Tue, 23 August 22

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ