Bangalore: ಪಟಾಕಿ ಅಂಗಡಿಗಳ ಮೇಲೆ ಅಗ್ನಿಶಾಮಕ ದಳ ಮತ್ತು ಪೊಲೀಸರ ಜಂಟಿ ದಾಳಿ
Bangalore news: ಲೈಸನ್ಸ್ ಇಲ್ಲದೆ ನಗರದಲ್ಲಿ ಪಾಟಕಿ ಇಟ್ಟು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಜಂಟಿ ದಾಳಿ ನಡೆಸಿ ಕ್ರಮ ಕೈಗೊಂಡಿದ್ದಾರೆ.
ಆನೇಕಲ್: ಲೈಸನ್ಸ್ ಇಲ್ಲದೆ ಪಾಟಕಿ ಇಟ್ಟು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿ ದಾಳಿ ನಡೆಸಿದ್ದಾರೆ. ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಮುಖ್ಯ ರಸ್ತೆಯಲ್ಲಿರುವ ಪಟಾಕಿ ಅಂಗಡಿಗಳ ಮೇಲೆ ದಾಳಿ ನಡೆಸಿ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಈ ದಾಳಿಯು ಅಗ್ನಿಶಾಮಕ ಇಲಾಖೆ ಅಧಿಕಾರಿ ನಾಗೇಶ್ ನೇತೃತ್ವದಲ್ಲಿ ನಡೆಸಲಾಗಿದೆ.
ಪಟಾಕಿ ಅಂಗಡಿಗಳನ್ನು ಇಡಬೇಕಾದರೆ ಅದಕ್ಕೆ ಲೈಸನ್ಸ್ ಪಡೆಯುವುದು ಕಡ್ಡಾಯವಾಗಿದೆ. ಆದರೆ ನಿಯಮಗಳನ್ನು ಗಾಳಿಗೆ ತೂರಿ ಕಾನೂನು ಬಾಹಿರವಾಗಿ ಅಂದರೆ ನಕಲಿ ದಾಖಲೆ ಸೃಷ್ಟಿಸಿ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಮುಖ್ಯ ರಸ್ತೆಯಲ್ಲಿ ಪಟಾಕಿ ಅಂಗಡಿಗಳನ್ನು ಇಟ್ಟು ಮಾಲೀಕರು ಸಿಡಿ ಮದ್ದುಗಳ ಮಾರಾಟದಲ್ಲಿ ತೊಡಗಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಗೆ ಇಳಿದು ಲೈಸೆನ್ಸ್ ಇಲ್ಲದೇ ಪಟಾಕಿ ಮಾರುತ್ತಿದ್ದ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಂಗಡಿಗಳನ್ನು ಮುಚ್ಚಿಸಲಾಗಿದೆ. ಅಂಗಡಿಗಳಲ್ಲಿ ಖರೀದಿ ಮಾಡುತ್ತಿದ್ದ ಗ್ರಾಹಕರನ್ನು ಹೊರ ಕಳುಹಿಸಿ ಬಳಿಕ ಅಂಗಡಿಗಳನ್ನು ಮುಚ್ಚಿಸಿದ್ದಾರೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:52 pm, Sun, 23 October 22